ಜೈನ ಮುನಿಗಳು, ಜೈನ ಬಸದಿಗಳ ರಕ್ಷಣೆಗೆ ಸರ್ಕಾರ ಬದ್ಧ: ಡಾ.ಜಿ.ಪರಮೇಶ್ವರ
ಹುಬ್ಬಳ್ಳಿ, ಜುಲೈ. 10: ಜುಲೈ 6 ರಂದು ಭೀಕರವಾಗಿ ಹತ್ಯೆಗೀಡಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಪ್ರಕರಣ ರಾಜ್ಯದಲ್ಲಿ ಭಾರೀ ಬಿರುಗಾಳಿಯನ್ನು ಎಬ್ಬಿಸಿದೆ. ರಾಜಕೀಯ ಪಕ್ಷಗಳು ಘಟನೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿಕೊಂಡಿವೆ. ಇವುಗಳ ನಡುವೆ ವರೂರು ನವಗೃಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು ಉಪವಾಸ ಕೈಗೊಂಡಿದ್ದಾರೆ.
ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಶ್ರೀ ಕ್ಷೇತ್ರ ವರೂರು ನವಗೃಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು ಕೈಗೊಂಡಿರುವ ಅಮರಣ ಉಪವಾಸ ನಿರಶನ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಭೇಟಿ ನೀಡಿ, ಜೈನ ಸಮುದಾಯದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಅಭಯ ನೀಡಿದ್ದಾರೆ.

ಈಗಾಗಲೇ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡು ತಪ್ಪಿತಸ್ಥರನ್ನು ಪತ್ತೆ ಮಾಡಿ ಕಾನೂನು ಕ್ರಮಗಳಿಗೆ ಒಳಪಡಿಸಲಾಗಿದೆ. ರಾಜ್ಯ ಸರ್ಕಾರವು ಇತರೆ ಎಲ್ಲಾ ಧರ್ಮಗಳ ಆಚರಣೆ ಹಾಗೂ ಧರ್ಮಗುರುಗಳಿಗೆ ರಕ್ಷಣೆ ನೀಡಿದಂತೆ, ಜೈನ ಮುನಿಗಳ ಹಾಗೂ ಜೈನ ಬಸದಿಗಳ ರಕ್ಷಣೆಗೆ ಕಂಕಣಬದ್ದವಾಗಿದೆ ಎಂದು ಹೇಳಿದ್ದಾರೆ.
ಭೂಮಿಯ ಮೇಲಿನ ಸಕಲ ಜೀವಾತ್ಮಗಳಿಗೂ ಲೇಸನ್ನು ಬಯಸುವ ಭಾರತ ದೇಶದ ಅತ್ಯಂತ ಪ್ರಾಚೀನ ಜೈನ ಧರ್ಮದ ಧರ್ಮಗುರುಗಳ ಅಮಾನುಷ ಹತ್ಯೆಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕಾರಣರಾದವರು ಯಾರೇ ಆಗಿರಲಿ ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಇದರ ಜೊತೆಗೆ ಹುಬ್ಬಳ್ಳಿಯಲ್ಲಿ ಶ್ರೀ ಕ್ಷೇತ್ರ ವರೂರು ನವಗೃಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು ಕೈಗೊಂಡಿರುವ
ಅಮರಣ ಉಪವಾಸ ನಿರಶನ ಕೈ ಬಿಡಲು ಸಚಿವ ಡಾ. ಜಿ ಪರಮೇಶ್ವರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದ್ದಾರೆ.
'ಜೈನ್ ಮುನಿಗಳ ಹತ್ಯೆಯಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡುವುದಕ್ಕೆ ಆಗುವುದಿಲ್ಲ. ಈ ಪ್ರಕರಣವನ್ನ ಸಿಬಿಐ ಅಥವಾ ಯಾವುದಕ್ಕೂ ಕೊಡುವ ಅಗತ್ಯ ಇಲ್ಲ. ನಮ್ಮ ಪೋಲಿಸರು ಸಮರ್ಥರಿದ್ದಾರೆ. ಆದರೆ, ತಾರತಮ್ಯದ ಆರೋಪ ವಿಚಾರ ನನಗೂ ಬೇಜಾರು ತಂದಿದ್ದು, ಅದರಲ್ಲಿ ತಾರತಮ್ಯದ ಪ್ರಶ್ನೆ ಬರುವುದಿಲ್ಲ. ಘಟನೆ ನಡೆದ ಮೇಲೆ ಪೊಲೀಸರಿಗೆ ವಿಚಾರ ಗೊತ್ತಾಗಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಬೋರ್ವೆಲ್ ನಲ್ಲಿ ಹಾಕಿದಂತ ದೇಹವನ್ನು ತೆಗೆಸಿ ಕ್ರಮ ತೆಗೆದುಕೊಂಡಿದ್ದಾರೆ ಇದು ಅತ್ಯಂತ ವೇಗವಾಗಿ ನಡೆದಿದ್ದು, ನಮ್ಮ ಇಲಾಖೆಗೆ ಅಭಿನಂದನೆ ಹೇಳುತ್ತೇನೆ' ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದನ್ನು ಖಂಡಿಸಿ, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದ್ದಾರೆ. ಭೀಕರವಾಗಿ ಹತ್ಯೆಗೀಡಾದ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಂತಿಮ ಸಂಸ್ಕಾರವನ್ನು ಬೆಳಗಾವಿ ಜಿಲ್ಲೆಯ ಹಿರೇಕುಡಿಯ ನಂದಿಪರ್ವತದಲ್ಲಿ ಭಾನುವಾರ ಸೂಕ್ರ ಭದ್ರತೆಯೊಂದಿಗೆ ನೆರವೇರಿಸಲಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications