Get Updates
Get notified of breaking news, exclusive insights, and must-see stories!

ಜನಾರ್ದನ್‌ ರೆಡ್ಡಿ ಜೊತೆಗಿನ ಸ್ನೇಹ ಶಾಶ್ವತವಾಗಿರುತ್ತದೆ: ಸಚಿವ ಬಿ. ಶ್ರೀರಾಮುಲು

ಹುಬ್ಬಳ್ಳಿ, ಡಿಸೆಂಬರ್‌, 22: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಕೇಂದ್ರದ ನಾಯಕರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ನಮಗೆ ಬಿಜೆಪಿಯಲ್ಲಿ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಕೇವಲ ಸಾರ್ವಜನಿಕ ಜೀವನದಲ್ಲಿ ಬೆರೆಯಬೇಕು ಎಂದುಕೊಂಡಿದ್ದಾರೆ. ಜನಾರ್ಧನ ರಡ್ಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಕೆಲಸ ಬಿಜೆಪಿ ಮಾಡುತ್ತದೆ ಎನ್ನುವ ವಿಶ್ವಾಸ ಇದೆ‌ ಎಂದರು.

ಸದನದಲ್ಲಿ ವಿಪಕ್ಷಗಳಿಂದ ಸಮಯ ವ್ಯರ್ಥ

ಸದನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಬಿಲ್ ಮಂಡನೆ ಆಗುತ್ತಿದೆ. ವಿಪಕ್ಷದ ಸದಸ್ಯರು ಚರ್ಚೆಯಲ್ಲಿ ಭಾಗಿಯಾಗಬೇಕು. ಸಿದ್ದರಾಮಯ್ಯ ಅವರು ಚರ್ಚೆಗೆ ಅವಕಾಶ ಕೊಡದೇ ಬಿಲ್ ಪಾಸ್ ಆಗಲು ಸಹಕಾರ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವ ನಿರ್ಧಾರದಲ್ಲಿದೆ. ಇದೇ ವಿಚಾರವಾಗಿ ಸುಗ್ರೀವಾಜ್ಞೆ ಹೊರಡಿಸಿದ್ದೇವೆ. ಸದನದಲ್ಲಿ ತೀರ್ಮಾನವಾದ ನಂತರ ಶೆಡ್ಯೂಲ್ 9ರಲ್ಲಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಸದನದಲ್ಲಿ ವಿಪಕ್ಷಗಳು ಸಮಯವನ್ನು ವ್ಯರ್ಥ ಮಾಡುತ್ತಿವೆ ಎಂದು ಹೇಳಿದರು.

Janardhana Reddy has my always best friend

ನಿನ್ನೆ, ಮೊನ್ನೆಯಷ್ಟೇ ನಡೆದ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಆಗಬೇಕಿತ್ತು. ಸಣ್ಣ ಸಣ್ಣ ಕಾರಣಗಳು ಜಗಳವಾಡಿ ದಿನ ಹಾಳು ಮಾಡುತ್ತಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮೆಲ್ಲ ಹಿರಿಯರು ಸೇರಿ ಈ ಬಗ್ಗೆ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದರು.

ಬಿಜೆಪಿ ವಿರುದ್ಧ ಸುರ್ಜೆವಾಲಾ ಆಕ್ರೋಶ

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಪಕ್ಷವು ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆ ಕಳೆದುಕೊಂಡಿದೆ. ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ ಎಂದು ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಹುಬ್ಬಳ್ಳಿಯಲ್ಲಿ ಇತ್ತೀಚೆಗಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

Janardhana Reddy has my always best friend

ಬಿಜೆಪಿ ಭ್ರಷ್ಟಾಚಾರದ ಸಮುದ್ರವಾಗಿದೆ

ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರದ ಸಮುದ್ರದಲ್ಲಿ ಮುಳುಗಿ ಹೋಗಿದೆ. ಪ್ರಜಾಪ್ರಭುತ್ವ ಮೌಲ್ಯವನ್ನು ಗಾಳಿಗೆ ತೂರಿದ ಬಿಜೆಪಿಯದ್ದು ಅನೈತಿಕ ಸರ್ಕಾರವಾಗಿದೆ. ಎರಡೂ ಕೈಯಲ್ಲಿ ಲಂಚ ತೆಗೆದುಕೊಳ್ಳುತ್ತಾ ಬಿಜೆಪಿ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ. ದೇಶದ ಅತ್ಯಂತ ಭ್ರಷ್ಟ ಸರ್ಕಾರ ಬೊಮ್ಮಾಯಿ ಸರ್ಕಾರವಾಗಿದೆ. ಬಿಜೆಪಿ ಶೇಕಡಾ 40 ರಿಂದ 50 ಪಸಂಟೇಜ್ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಆರೋಪಿಸಿದ್ದರು. ಮಠಗಳಿಗೆ ನೀಡುವ ಅನುದಾನದಲ್ಲಿಯೂ ಬಿಜೆಪಿ ಭ್ರಷ್ಟಾಚಾರ ನಡೆಸಿದೆ. ಶೇಕಡಾ 5 ಪರ್ಸೆಂಟ್ ಡಿಸ್ಕೌಂಟ್ ನೀಡಿ 35 ಪರ್ಸೆಂಟ್ ಕಮಿಷನ್ ಹೊಡೆದಿದೆ. ಕರ್ನಾಟಕದಲ್ಲಿ 40% ಹೊರತಾಗಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ನೌಕರಿಗಳು ಬಿಕರಿಗೆ ಇಡಲಾಗಿದೆ. ಪಿಎಸ್ಐ ಹಗರಣ ನೇರವಾಗಿ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಬಾಗಿಲಿಗೆ ಬಂದಿದೆ ಎಂದು ದೂರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+