ಹುಬ್ಬಳ್ಳಿಯಲ್ಲಿ ಸೆಪ್ಟೆಂಬರ್ 27ರಂದು ಉದ್ಯೋಗ ಮೇಳ

ಹುಬ್ಬಳ್ಳಿ, ಸೆಪ್ಟೆಂಬರ್ 24 : ಧಾರವಾಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 27ರಂದು ಹುಬ್ಬಳ್ಳಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಲಾಗಿದೆ.

ಜಿಲ್ಲಾ ಉದ್ಯೋಗ ಮಿನಿಮಿಯ ಕಚೇರಿ ವತಿಯಿಂದ ಸೆಪ್ಟೆಂಬರ್ 27ರಂದು ಹುಬ್ಬಳ್ಳಿ ನವನಗರದ ಕುವೆಂಪು ರಸ್ತೆಯಲ್ಲಿನ ಕಚೇರಿ ಆವರಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

6 ರಿಂದ 8 ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನೆಡೆಸುವರು. ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

Job Fair In Hubballi on September 27

ಈ ಬಾರಿ ಉದ್ಯೋಗ ಮೇಳದಲ್ಲಿ ಉಬರ್ ಓಲಾ ಕಂಪನಿಗಳು ಭಾಗವಹಿಸುತ್ತಿವೆ. ಲಘು ಮತ್ತು ಭಾರಿ ವಾಹನಾ ಚಾಲನಾ ಪರವಾಗಿ ಹೊಂದಿದವರು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಆಧಾರ್ ಕಾರ್ಡ್, ರೆಸ್ಯೂಮ್ ಪ್ರತಿಗಳೊಂದಿಗೆ, ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 0836-2225288 ಹಾಗೂ 8951852818, 7411224777, 9008064394 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+