Job Fair: ಹುಬ್ಬಳ್ಳಿಯಲ್ಲಿ ಅಕ್ಟೋಬರ್‌ 24ಕ್ಕೆ ಉದ್ಯೋಗ ಮೇಳ

ನಿರುದ್ಯೋಗಿಗಳಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ನೀವು ಕೆಲಸ ಹುಡುಕುತ್ತಿದ್ದರೆ ತಪ್ಪದೇ ಈ ಸುದ್ದಿಯನ್ನು ಓದಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರುದ್ಯೋಗಿಗಳಿಗೆ ಆಗ್ಗಾಗ್ಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿರುತ್ತದೆ. ಇದೀಗ ಇದೇ ಅಕ್ಟೋಬರ್‌ 24ರಂದು ಹುಬ್ಬಳ್ಳಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಯಾರೆಲ್ಲ ಭಾಗವಹಿಸಬಹುದು ಹಾಗೂ ಉದ್ಯೋಗ ಮೇಳ ಎಲ್ಲಿ ನಡೆಯುತ್ತಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಹುಬ್ಬಳ್ಳಿಯಲ್ಲಿ ಅಕ್ಟೋಬರ್‌ 24ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಅಕ್ಟೋಬರ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಮೇಳದಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ಸಾಧ್ಯತೆ ಇದೆ.

Job fair on October 24 in Hubli

ರಿಜಿಸ್ಟೇಷನ್‌ ಮಾಡಿಸಿಕೊಳ್ಳುವುದು ಹೇಗೆ: ಇನ್ನು ಈ ಉದ್ಯೋಗ ಮೇಳದಲ್ಲಿ ರಿಜಿಸ್ಟೇಷನ್‌ ಮಾಡಿಸಿಕೊಳ್ಳಲು ಅಭ್ಯರ್ಥಿಗಳು https://forms.gle/qdtkEhLjQsdC1GD68 ವೆಬ್ ಸೈಟ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕಿಂತ ಮುಂಚೆ ಕಡ್ಡಾಯವಾಗಿ ಈ ಲಿಂಕ್‌ನಲ್ಲಿ ನಿಮ್ಮ ಹೆಸರು ಹಾಗೂ ವಿದ್ಯಾರ್ಹತೆ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಸಹ ಅದರಲ್ಲಿ ಭರ್ತಿ ಮಾಡಬೇಕು.

ಯಾರೆಲ್ಲ ಅರ್ಹರು: ಇನ್ನು ಈ ಮೇಳದಲ್ಲಿ ಭಾಗವಹಿಸುವುದಕ್ಕೆ ಕೆಲವು ನಿರ್ದಿಷ್ಟ ಷರತ್ತುಗಳನ್ನು ವಿಧಿಸಲಾಗಿದೆ. ಯಾವುದೇ ಪದವಿ ಮಾಡಿದ್ದರೂ ನೀವು ಈ ಮೇಳದಲ್ಲಿ ಭಾಗವಹಿಸುವುದಕ್ಕೆ ಅವಕಾಶ ಇದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾಗಿದ್ದರು ಅರ್ಜಿ ಸಲ್ಲಿಸಬಹುದು. ಅಲ್ಲದೇ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಈ ಅರ್ಹತೆಗಳು ಇದ್ದರೆ, ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್‌ ಕಾರ್ಡ್‌, ಬಯೋಡಾಟಾ (ರೆಸ್ಯೂಮ್‌) ಗಳ ಹೆಚ್ಚಿನ ಪ್ರತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕುವೆಂಪು ರಸ್ತೆ, ನವನಗರ ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 0836-2225288, 9535360259, 8453208555, 9806905751 ಕಚೇರಿ ವೇಳೆಯಲ್ಲಿ ಕರೆ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಹೇಳಿದ್ದಾರೆ.

ಇನ್ನು ಈ ಮೇಳದಲ್ಲಿ 6 ಖಾಸಗಿ ವಲಯದ ಕಂಪನಿಗಳು ಭಾಗವಹಿಸಲಿವೆ. ಸಂಸ್ಥೆಯಲ್ಲಿರುವ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಆಯ್ಕೆಯಾದವರನ್ನು ಅಲ್ಲೇ ನೇಮಕಾತಿ ಮಾಡಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಇಂದೇ ಅರ್ಜಿ ಸಲ್ಲಿಸಿ: ಅಕ್ಟೋಬರ್‌ 24ರಿಂದಲೇ ಉದ್ಯೋಗ ಮೇಳವಿದ್ದು, ಇಂದೇ ನೀವು ಅರ್ಜಿ ಸಲ್ಲಿಸಿ. ಇದರಿಂದ ಕೊನೆಯ ಕ್ಷಣದಲ್ಲಿ ಆಗಬಹುದಾದ ತಪ್ಪುಗಳನ್ನು ನೀವು ತಪ್ಪಿಸಬಹುದಾಗಿದೆ. ಅಲ್ಲದೇ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ರೆಸ್ಯೂಮ್‌ ಹಾಗೂ ವಿದ್ಯಾಭ್ಯಾಸದ ಸರ್ಟಿಫಿಕೇಟ್‌ಗಳನ್ನು ತೆಗೆದುಕೊಂಡು ಹೋಗಬೇಕು. ಈ ವಿಷಯಗಳನ್ನು ಮರೆಯಬೇಡಿ.

ಲಿಂಕ್ಡಿನ್​ ಪ್ರೋಫೈಲ್​ ಅಪ್ಡೇಟ್‌ ಮಾಡಿಕೊಳ್ಳಿ: ನೀವು ಕೆಲಸ ಹುಡುಕುತ್ತಿದ್ದರೆ, ಲಿಂಕ್ಡಿನ್‌ನಲ್ಲಿ ನಿಮ್ಮ ಪ್ರೋಫೈಲ್‌ ಅನ್ನು ಅಪ್ಡೇಟ್‌ ಮಾಡಿಕೊಳ್ಳಿ. ಇದರಿಂದ ನಿಮಗೆ ಎಲ್ಲೆಲ್ಲಿ ಕೆಲಸ ಇದೆ ಎನ್ನುವುದು ತಿಳಿಯುತ್ತದೆ. ಒಪನ್ ಟು ವರ್ಕ್‌ ಎನ್ನುವ ಆಯ್ಕೆ ಕೊಟ್ಟರೆ, ನಿಮ್ಮ ವಿದ್ಯಾಭ್ಯಾಸ ಹಾಗೂ ನಿಮ್ಮ ಕೆಲಸದ ಅನುಭವಕ್ಕೆ ಅನುಗುಣವಾಗಿ ಉದ್ಯೋಗಾವಕಾಶಗಳ ಮಾಹಿತಿ ನಿಮಗೆ ಲಭ್ಯವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+