Job Opportunities 2025: ಹುಬ್ಬಳ್ಳಿಯಲ್ಲಿ ಮೇ 25ಕ್ಕೆ ಬೃಹತ್ ಉದ್ಯೋಗ ಮೇಳ!
Job Opportunities 2025: ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿದ್ದು ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಭರ್ಜರಿ ಗುಡ್‌ನ್ಯೂಸ್ ಇದೆ. ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದೆ. ಹುಬ್ಬಳ್ಳಿಯ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕೆ.ಜಿ.ಪಿ ಫೌಂಡೇಶನ್ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮೇ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯಾನಗರದ ಜೆ. ಜಿ. ಕಾಮರ್ಸ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಮೇಳದಲ್ಲಿ 60ಕ್ಕೂ ಹೆಚ್ಚಿನ ಖಾಸಗಿ ವಲಯದ ಕಂಪನಿಗಳು ಭಾಗವಹಿಸಲಿವೆ. ಸಂಸ್ಥೆಗಳಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ. ಡಿಪ್ಲೋಮಾ, ಬಿ.ಇ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿದ 18 ರಿಂದ 35 ವಯೋಮಿತಿ ಹೊಂದಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸುವುದಕ್ಕೆ https://shorturl.at/Bmagi ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ, ಬಯೋಡಾಟಾ (ರೆಸ್ಯೂಮ್) ಗಳ ಹೆಚ್ಚಿನ ಪ್ರತಿಗಳೊಂದಿಗೆ (ಕನಿಷ್ಠ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9535360259, 8453208555, 9164192155 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಹೇಳಿದ್ದಾರೆ.
ಉದ್ಯೋಗ ತರಬೇತಿ: ಇನ್ನು ಇಲ್ಲಿನ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಜೆ. ಜೆ. ಜಿ ಏರೋ ಪ್ರೈವೇಟ್ ಲಿಮಿಟೆಡ್ ವತಿಯಿಂದ ಐ.ಟಿ.ಐ., ಎಸ್.ಸಿ.ವಿ.ಟಿ ಮತ್ತು ಎನ್.ಸಿ.ವಿ.ಟಿ. ವಿಭಾಗಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಹಾಗೂ ಐ.ಟಿ.ಐ. ಕೊನೆಯ ವರ್ಷ ವಿದ್ಯಾಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಮತ್ತು ಟರ್ನರ್, ಟೂಲ್ & ಡೈಮೇಕಿಂಗ, ಪಿಟ್ಟರ್, ಮಷಿನಿಸ್ಟ್ ಹಾಗೂ ಮಷಿನಿಸ್ಟ್ ಗ್ರೆಂಡರ್ ವೃತ್ತಿಗಳ 18 ರಿಂದ 28 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಹಾಗೂ ನೇರ ನೇಮಕಾತಿ ಆಯ್ಕೆ ಪ್ರಕ್ರಿಯೆಯನ್ನು ಮೇ 23 ರಂದು ಬೆಳಿಗ್ಗೆ 9 ಗಂಟೆಗೆ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿ, ಆಧಾರ್ ಕಾರ್ಡ ಹಾಗೂ ಇ ಮೇಲ್ ಐಡಿಗಳೊಂದಿಗೆ ಭಾಗವಹಿಸಬೇಕು ಎಂದು ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಿನ್ಸಿಪಲ್ ತಿಳಿಸಿದ್ದಾರೆ.
ನೀರು ಪೂರೈಕೆಯಲ್ಲಿ ವ್ಯತ್ಯಯ: ಇಲ್ಲಿನ ದುಮ್ಮವಾಡ ಪಂಪಹೌಸ್‌ನಲ್ಲಿ ಮೇ.21 ರಂದು ಪದೇ ಪದೇ ವಿದ್ಯುತ್ ಸಮಸ್ಯೆ ಆಗಿರುವ ಕಾರಣ ಹಳೇ ಹುಬ್ಬಳ್ಳಿಯ 22 ವಾರ್ಡ್‌ಗಳು, ನೆಹರೂ ನಗರ, ಹೊಸೂರು ವಲಯ, ಗೋಕುಲ ಗ್ರಾಮ, ತಾರಿಹಾಳ ಗ್ರಾಮ ಹಾಗೂ ಕುಂದಗೋಳ ಪಟ್ಟಣದ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನೀರು ಸರಬರಾಜು ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಹೇಳಿದ್ದಾರೆ.












Click it and Unblock the Notifications