JP Nadda: ಸಿದ್ಧಾರೂಢ ಮಠಕ್ಕೆ ಇಂದು ಜೆಪಿ ನಡ್ಡಾ- ಹುಬ್ಬಳ್ಳಿಯಲ್ಲಿ ಕಮಲ ಕಮಾಲ್
ಹುಬ್ಬಳ್ಳಿ ಏಪ್ರಿಲ್ 19: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೆ ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಗೆಲ್ಲುವ ತಂತ್ರ ರೂಪಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರವೂ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷದಲ್ಲಿ ಆಗಿದ್ದ ಡ್ಯಾಮೇಜ್ ಕಂಟ್ರೋಲ್ ಮಾಡಲು ನಡ್ಡಾ ಹುಬ್ಬಳ್ಳಿಯಲ್ಲಿ ಎರಡು ದಿನದ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಮಂಗಳವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿರುವ ಜೆಪಿ ನಡ್ಡಾ ಅವರನ್ನು ಕಮಲ ನಾಯಕರು ಬರಮಾಡಿಕೊಂಡರು. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿರುವ ನಡ್ಡಾ ಇಂದು ಸಿದ್ಧಾರೂಢ ಮಠ ಹಾಗೂ ಮೂರು ಸಾವಿರ ಮಠಕ್ಕೆ ಭೇಟಿ ನೀಡಲಿದ್ದಾರೆ. ಇಂದೇ ಹುಬ್ಬಳ್ಳಿಯಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.
ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಂಗಳವಾರ ನಡ್ಡಾ ಭಾಗವಹಿಸಿದರು. ಈ ವೇಳೆ ಸಭೆಗೆ 800 ಪ್ರಮುಖರಿಗೆ ಆಹ್ವಾನ ನೀಡಲಾಗಿತ್ತು.
ಸಿದ್ಧಾರೂಢ ಮಠಕ್ಕೆ ಇಂದು ಜೆಪಿ ನಡ್ಡಾ- ಹುಬ್ಬಳ್ಳಿಯಲ್ಲಿ ಕಮಲ ಕಮಾಲ್#hubballi #jpnadda #siddharoodhaswamy #math https://t.co/vLOkxnN6ZJ
— oneindiakannada (@OneindiaKannada) April 19, 2023
ಬಿಜೆಪಿಯಲ್ಲಿ ಲಿಂಗಾಯತ ಮುಖಂಡರನ್ನು ಕಡೆಗಣನೆ ಮಾಡಲಾಗಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸುತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಲಿಂಗಾಯತ ಮತಗಳು ಕೈ ತಪ್ಪುವ ಆತಂಕ ಬಿಜೆಪಿಗೆ ಎದುರಾಗಿದೆ.ಈ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ ಲಿಂಗಾಯತ ಮುಖಂಡರ ಸಭೆ ನಡೆಸಲು ಮುಂದಾಗಿದೆ.

ಇದರಲ್ಲಿ ಪ್ರಮುಖವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹಾಲಿ ಶಾಸಕ ರಾಮದಾಸ್ ಮತ್ತು ರಘುಪತಿ ಭಟ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಬಂಡಾಯವೆದ್ದು, ಕಾಂಗ್ರೆಸ್ ಸೇರಿದ್ದಾರೆ. ಲಿಂಗಾಯತ ಸಮುದಾಯದ ಪ್ರಬಲ ಮುಖಂಡರು ಕಾಂಗ್ರೆಸ್ ಸೇರಿದ್ದು ಪಕ್ಷಕ್ಕೆ ಪ್ಲಸ್ ಆದ್ರೆ ಬಿಜೆಪಿಗೆ ಮೈನಸ್ ಆಗಿದೆ.
ಹೀಗಾಗಿ ಈ ಡ್ಯಾಮೇಜ್ ಕ್ಲಿಯರ್ ಮಾಡಲು ನಡ್ಡಾ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಮಂಗಳವಾರ ಸಂಜೆ ಬಿಡುಗಡೆ ಮಾಡಿದ ನಾಲ್ಕನೇ ಪಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡಿದೆ. ಬಿಜೆಪಿಯು ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ. ಹೀಗಾಗಿ ಈ ಬಾರಿಯ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದೆ.
ನಳೀನ ಕುಮಾರ್ ಕಟೀಲ್, ಮಹೇಶ್ ತೆಂಗಿನಕಾಯಿ, ಎಮ್.ಆರ್.ಪಾಟೀಲ್, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್ ಸೇರಿದಂತೆ ಹಲವು ಕಮಲ ನಾಯಕರು ಇಂದು ನಡ್ಡಾ ಅವರಿಗೆ ಸಾಥ್ ನೀಡಲಿದ್ದಾರೆ.
ಮಂಗಳವಾರು ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ನನಗೆ ಹಾಗೂ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪುವಂತೆ ಮಾಡಿದ್ದೇ ಬಿಎಲ್ ಸಂತೋಷ್' ಎಂದು ಹೇಳಿದ್ದಾರೆ. ನಾನು ಹಲವಾರು ದಿನಗಳಿಂದ ಬಿಜೆಪಿಯಲ್ಲಿ ವೇದನೆ ಪಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಸಂತೋಷ್ ಅವರ ಕುತಂತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಇದು ಜನರಿಗೆ ಗೊತ್ತಾಗಬೇಕಾಗಿತ್ತು. ಗೊತ್ತಾಗದೇ ಇದ್ದರೆ ತಪ್ಪಾಗುತ್ತದೆ ಎಂದು ಹೆಳಿದ್ದಾರೆ. ಈ ಹೇಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುತ್ತಾ ಕಾದು ನೋಡಬೇಕಿದೆ.












Click it and Unblock the Notifications