ಹುಬ್ಬಳ್ಳಿ–ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ: ಬಿಜೆಪಿ ಮಣಿಸಲು ಕಾಂಗ್ರೆಸ್ ಕಸರತ್ತು
2013 ಮತ್ತು 2018ರಲ್ಲಿ ಗೆಲುವು ಸಾಧಿಸಿ ಹ್ಯಾಟ್ರಿಕ್ ವಿಜಯದ ನಿರೀಕ್ಷೆಯಲ್ಲಿರುವ ಅರವಿಂದ ಬೆಲ್ಲದ್‌ಗೆ ಬಿಜೆಪಿಯಿಂ ಟಿಕೆಟ್ ನಿಶ್ಚಿತ ಎನ್ನುವಂತಿದ್ದರೂ ಇತರರ ತೆರ ಮರೆಯ ಕಸರತ್ತು ಮಾತ್ರ ನಡೆಯುತ್ತಿದೆ. ಜೊತೆ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಭರ್ಜರಿ
ಹುಬ್ಬಳ್ಳಿ, ಮಾರ್ಚ್ 8: ಹುಬ್ಬಳ್ಳಿ ಧಾರವಾಡ ಪ್ರದೇಶವನ್ನು ಒಳಗೊಂಡಿರುವ ಪಶ್ಚಿಮ ಕ್ಷೇತ್ರದಲ್ಲಿ ಈಗಾಗಲೇ ಮುಂಬರುವ ಚುನಾವಣಾ ಕಾವು ಆರಂಭಗೊಂಡು ಸುಮಾರು 6 ತಿಂಗಳೇ ಕಳೆದಿದೆ. ಯಡಿಯೂರಪ್ಪ ರಾಜೀನಾಮೆಯ ನಂತರ ದಿಢೀರ್ ಆಗಿ ಸಿಎಂ ಸ್ಥಾನಕ್ಕೆ ಕೇಳಿ ಬಂದ ಅರವಿಂದ ಬೆಲ್ಲದ ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ 10 ಆಕಾಂಕ್ಷಿಗಳಿದ್ದಾರೆ.
ಕಳೆದೆರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮಣೆ ಹಾಕಿ ತೀವ್ರ ಜಿದ್ದಾಜಿದ್ದಿಯ ಹೋರಾಟ ನೀಡಿತಾದರೂ ಫಲಿತಾಂಶ ಬಂದಾಗ ಮತ್ತೆ ಕಮಲ ಪಡೆಯೆ ಕೇಕೆ ಹಾಕಿತ್ತು. 2013 ಮತ್ತು 2018ರಲ್ಲಿ ಗೆಲುವು ಸಾಧಿಸಿ ಹ್ಯಾಟ್ರಿಕ್ ವಿಜಯದ ನಿರೀಕ್ಷೆಯಲ್ಲಿರುವ ಅರವಿಂದ ಬೆಲ್ಲದ್‌ಗೆ ಟಿಕೆಟ್ ನಿಶ್ಚಿತ ಎನ್ನುವಂತಿದ್ದರೂ ಕುಟುಂಬ ರಾಜಕಾರಣದ ವಿಷಯ ಮುಂದಿಟ್ಟು ತೆರೆಮರೆಯ ಕಸರತ್ತು ಮಾತ್ರ ನಡೆದಿದೆ.

ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಪ್ರಥಮ ಪ್ರಜೆಯಾಗಿ ಭರವಸೆ ಹುಟ್ಟಿಸಿರುವ ಅಲ್ಲದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪರಮಾಪ್ತರಾದ ಈರೇಶ ಅಂಚಟಗೇರಿ, ಅಲ್ಲದೇ 2013ರಲ್ಲಿ ಈ ಕ್ಷೇತ್ರದಲ್ಲಿ ಪ್ರಬಲವಾಗಿ ಕೇಳಿ ಬಂದಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೆಸರು ಪ್ರಸ್ತಾಪಕ್ಕೆ ಬರುವಂತದ್ದಾಗಿದೆ. ಅಲ್ಲದೆ ಸಿಎಂ ಬೊಮ್ಮಾಯಿ ಅವರ ಆಪ್ತರಾಗಿರುವ ಕೆಎಸ್‌ಎಸ್‌ಐಡಿಸಿ ನಿರ್ದೇಶಕ, ಪಾಟೀಲ ಇಂಡಸ್ಟ್ರೀಜ್ ಸಿಇಒ ಎಸ್.ಸಿ.ಪಾಟೀಲ (ರಾಜು) ಕೂಡಾ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.
ಹಲವು ಅಭಿವೃದ್ಧಿ ಕಾರ್ಯ ಅಲ್ಲದೇ ಕೇಂದ್ರದ ಅನೇಕ ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾದ ಬೆಲ್ಲದ ಬಗ್ಗೆ ಮೇಲ್ನೋಟಕ್ಕೆ ಹೇಳಿಕೊಳ್ಳುವ ಅಸಮಾಧಾನವಿಲ್ಲದಿದ್ದರೂ ಜಾತಿ ಲೆಕ್ಕಾಚಾರ ಮಾತ್ರ ನಿಗೂಢವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಜೊತೆಗೆ ಅರವಿಂದ ಬೆಲ್ಲದ್ ಸಂಬಂಧ ಅಷ್ಟಕ್ಕಷ್ಟೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯವಾಗಿದೆ.
ಉಳಿದಂತೆ ಈ ಕ್ಷೇತ್ರದಲ್ಲಿ ಕೈ-ಕಮಲ ನೇರ ಪೈಪೋಟಿಯಿದ್ದು ಕಾಂಗ್ರೆಸ್‌ನಲ್ಲಿ ಮಾತ್ರ ಟಿಕೆಟ್ ಯಾರಿಗೆ ಎನ್ನುವುದು ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. 10 ಆಕಾಂಕ್ಷಿಗಳ ಪೈಕಿ ಎಲ್ಲರೂ ಜಿದ್ದಿಗೆ ಬಿದ್ದವರಂತೆ ಪ್ಲೆಕ್ಸ್, ಬ್ಯಾನರ್ ಮೇಲಾಟ ನಡೆಸಿದ್ದಾರಲ್ಲದೇ ಆರೋಗ್ಯ ತಪಾಸಣೆ, ಪಾದಯಾತ್ರೆ, ಕಾರ್ಯಕ್ರಮಗಳಿಗೆ ನೆರವಿನ ಹಸ್ತಗಳನ್ನು ನೀಡುತ್ತಾ ಜನಮನ ಗೆಲ್ಲುವ ಯತ್ನ ನಡೆಸಿದ್ದಾರೆ.

ಎಐಸಿಸಿ ಸದಸ್ಯ ದೀಪಕ ಚಿಂಚೋರೆ, ಕಾಂಗ್ರೆಸ್ ವಕ್ತಾರ ಪಿ.ಎಚ್.ನೀರಲಕೇರಿ, ರಾಣಿ ಚೆನ್ನಮ್ಮ ಬ್ಲಾಕ್ ಮಾಜಿ ಅಧ್ಯಕ್ಷ ಬಸವರಾಜ ಮಲಕಾರಿ, ಹಾಲಿ ಚೆನ್ನಮ್ಮ ಬ್ಲಾಕ ಅಧ್ಯಕ್ಷ ನಾಗರಾಜ ಗೌರಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ. ಹಿರಿಯ ಮುಖಂಡ ಡಾ.ಶರಣಪ್ಪ ಮತ್ತಿಕಟ್ಟಿ, ಮಾಜಿ ಪಾಲಿಕೆ ಸದಸ್ಯ ಹಾಗೂ ಹುಬ್ಬಳ್ಳಿ ಅಂಜುಮನ್ ಉಪಾಧ್ಯಕ್ಷ ಅಲ್ತಾಫ್ ನವಾಜ ಕಿತ್ತೂರ,ಯುವ ಮುಖಂಡರಾದ ಆರ್.ಕೆ.ಪಾಟೀಲ,ರಫೀಕ್ ಸಾವಂತನವರ ಅಲ್ಲದೇ ಮಾಜಿ ಸಚಿವ ದಿ.ಎಸ್.ಆರ್.ಮೋರೆಯವರ ಪುತ್ರಿ ಕೀರ್ತಿ ಮೋರೆ ಈಗಾಗಲೇ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ತಮ್ಮದೇ ಲೆಕ್ಕಾಚಾರದಲ್ಲಿದ್ದು ಇತ್ತೀಚೆಗೆ ನಡೆದ ಪ್ರಜಾಧ್ವನಿಯಲ್ಲೂ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.
ಕಳೆದ ಪಾಲಿಕೆ ಚುನಾವಣೆಯಲ್ಲಿ ಈ ಕ್ಷೇತ್ರದ 25 ವಾರ್ಡಗಳ ಪೈಕಿ ಬಿಜೆಪಿ 13 ಸ್ಥಾನಗಳಲ್ಲಿ ಗೆದ್ದಿದ್ದರೂ ಕಾಂಗ್ರೆಸ್ 10 ಸ್ಥಾನ ಗಳಿಸಿದೆ. ತಲಾ ಒಂದು ಸ್ಥಾನ ಜೆಡಿಎಸ್ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಬಿಜೆಪಿ ಶೇ.41.37ರಷ್ಟು ಮತ ಪಡೆದರೆ, ಕಾಂಗ್ರೆಸ್ ಸಹ ಶೇ. 38.73ಮತ ಪಡೆದಿದೆಯಲ್ಲದೇ ಶೇ.12.91 ಮತ ಹೆಚ್ಚಿಗೆ ಪಡೆದಿರುವುದು ಕೈ ಪಾಳೆಯದಲ್ಲಿ ಆಕಾಂಕ್ಷಿಗಳು ಹೆಚ್ಚಾಗಲು ಕಾರಣವಾಗಿದೆ.
ಕಳೆದೆರಡು ಬಾರಿ ಅಲ್ಪಸಂಖ್ಯಾತರಿಗೆ ನೀಡಿ ಹಿನ್ನೆಡೆ ಆಗಿದ್ದು ಈ ಬಾರಿ ಬಹುಸಂಖ್ಯಾತರಿಗೆ ಅಥವಾ ಹಿಂದುಳಿದವರಿಗೆ ನೀಡಬೇಕೆಂಬ ವಾದ ಕಾಂಗ್ರೆಸ್‌ನಲ್ಲಿ ಮುನ್ನೆಲೆಗೆ ಬಂದಿದೆ. ಕಳೆದ ಬಾರಿಯ ಕೈ ಹುರಿಯಾಳು ಇಸ್ಮಾಯಿಲ್ ತಮಾಟಗಾರ ಈಗ ಗ್ರಾಮೀಣದತ್ತ ಮುಖ ಮಾಡಿದ್ದಾರೆ. ಜೆಡಿಎಸ್‌ನಿಂದ ಮಹಾನಗರ ಅಧ್ಯಕ್ಷ ಗುರುರಾಜ ಹುಣಸಿಮರದ, ಆಮ್ ಆದ್ಮಿ ಪಕ್ಷದಿಂದ ಎಂ.ಅರವಿಂದ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಪ್ರಬುದ್ಧ ಮತದಾರರನ್ನು ಹೆಚ್ಚಾಗಿ ಹೊಂದಿರುವ ಈ ಕ್ಷೇತ್ರದಲ್ಲಿ ಎಲ್ಲ ಪಕ್ಷಗಳ ಅಭ್ಯರ್ಥಿಗಳ ಘೋಷಣೆಯಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದ್ದು, ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ, ಎಂಐಎಂಗಳು ಚುನಾವಣಾ ಕಣಕ್ಕೆ ಪ್ರವೇಶ ಕೊಟ್ಟರೂ ಯಾವುದೇ ಅಚ್ಚರಿಯಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications