Karnataka Elections: ಜಗದೀಶ್ ಶೆಟ್ಟರ್‌ಗೂ ಇಲ್ಲ ಟಿಕೆಟ್- ಮುನಿಸಿಕೊಂಡ ಮಾಜಿ ಸಿಎಂ ಸ್ವತಂತ್ರವಾಗಿ ಸ್ಪರ್ಧೆ?
ಹುಬ್ಬಳ್ಳಿ, ಏಪ್ರಿಲ್ 11: ಕರ್ನಾಟಕ ರಾಜಕಾರಣವು ಮಹತ್ತರ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಮುನಿಸಿಕೊಂಡಿರುವ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಹೇಳಿದ್ದಾರೆ. ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿ ಹೊಸ ಪ್ರಯೋಗ ಮಾಡಿ ಬಿಜೆಪಿ ಯಶಸ್ವಿಯಾಗಿತ್ತು. ಅದೇ ಮಾದರಿಯನ್ನು ಕರ್ನಾಟಕ ಸೇರಿದಂತೆ ಮುಂದಿನ ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾನಣೆಯಲ್ಲಿ ಪ್ರಯೋಗಿಸಲು ಬಿಜೆಪಿ ಹೈಕಮಾಂಡ್ ಸಜ್ಜಾಗಿದೆ.

ಈ ಬಾರಿ ಹಲವು ಹಿರಿಯ ಶಾಸಕರಿಗೆ ಕರ್ನಾಟಕ ಚುನಾವಣೆಯಲ್ಲಿ ಟಿಕೆಟ್ ನೀಡದೇ ಇರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಹಿರಿಯ ನಾಯಕರಾದ ಸೋಮಣ್ಣ, ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಸೇರಿ ಪಕ್ಷದ ಇನ್ನೂ ಹಲವರಿಗೆ ನಿವೃತ್ತಿ ಘೋಷಣೆ ಬಗ್ಗೆ ಹೈಕಮಾಂಡ್ ಖಡಕ್ ಸಂದೇಶ ನೀಡಿದೆ ಅಂತ ಮೂಲಗಳು ತಿಳಿಸಿವೆ.
ಇನ್ನೂ, ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ, ಆದರೆ ರಿಲೀಸ್‌ಗೆ ತಡವಾಗುತ್ತಿದೆ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಬಿಜೆಪಿಯಲ್ಲಿ ಹಿರಿಯ ನಾಯಕರಿಗೆ ಭಾರಿ ಆಪರೇಷನ್ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಏಕಾಏಕಿ ಚುನಾವಣೆ ರಾಜಕೀಯಕ್ಕೆ ದಿಢೀರ್ ಗುಡ್ ಬೈ ಹೇಳಿರುವ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.
ಇದರ ಬೆನ್ನಲ್ಲೇ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರಿಗೆ ಈ ಬಾರಿ ಟಿಕೆಟ್ ನೀಡುವುದು ಡೌಟ್ ಎನ್ನಲಾಗಿದೆ.
ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ಹೈಕಮಾಂಡ್ ನಾಯಕರು ಕರೆ ಮಾಡಿ ಈ ಬಾರಿ ನೀವು ಸ್ಪರ್ಧೆ ಮಾಡುವುದು ಬೇಡ, ಮತ್ತೊಬ್ಬರಿಗೆ ಟಿಕೆಟ್ ಕೊಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ.
ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ಹೈಕಮಾಂಡ್ ನಾಯಕರು ಕರೆ ಮಾಡಿ ಈ ಬಾರಿ ನೀವು ಸ್ಪರ್ಧೆ ಮಾಡುವುದು ಬೇಡ, ಮತ್ತೊಬ್ಬರಿಗೆ ಟಿಕೆಟ್ ಕೊಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ. ಇದಕ್ಕೆ ನಾನು ಸಮ್ಮತಿಸದೇ ಇನ್ನೊಂದು ಬಾರಿ ಚರ್ಚೆ ಮಾಡಿ ಟಿಕೆಟ್ ಕೊಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವರಿಷ್ಠರ ಕಡೆಯಿಂದ ನನಗೆ ಮಾಹಿತಿ ಬಂತು. ನೀವು ಹಿರಿಯರಿದ್ದೀರಿ ಯಿವಜನರಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರು. ರಾಜ್ಯದಲ್ಲಿ 30 ವರ್ಷದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಸೇವೆಯನ್ನು ಮಾಡಿದ್ದೇನೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಾನು ಶ್ರಮಿಸಿದ್ದೇನೆ. ಈಶ್ವರಪ್ಪ, ಯಡಿಯೂರಪ್ಪ, ಅನಂತಕುಮಾರ್ ಅವರೊಂದಿಗೆ ಕೆಲಸ ಮಾಡಿದ್ದೇನೆ. ನಾನು 6 ಬಾರಿ ಆರಿಸಿ ಬಂದಿದ್ದೇನೆ. ಪ್ರತಿಬಾರಿ 25 ಸಾವಿರಕ್ಕೂ ಅಧಿಕ ಮತಗಳಿಂದ ನಾನು ಗೆದ್ದು ಬಂದಿದ್ದೇನೆ. ಆದರೆ, ನಾನು ಯಾಕೆ ಸ್ಪರ್ಧೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದೇನೆ. ಇನ್ನು ಹುಬ್ಬಳ್ಳಿ ಕೇಂದ್ರ ಭಾಗದಲ್ಲಿ ಸಮೀಕ್ಷೆ ಮಾಡಿದಾಗ ಗೆಲ್ಲುವಂತಹ ವ್ಯಕ್ತಿ ಎಂದು ವರದಿ ಬಂದಿದೆ.
ಹೈಕಮಾಂಡ್ ಮಾಜಿ ಸಿಎಂ ಹಾಗು ಹಿರಿಯ ನಾಯಕರಿಗೆ ಗೌರವ ನೀಡಬೇಕು. ವರಿಷ್ಠರ ನಿರ್ಧಾರದಿಂದ ನನಗೆ ಬೇಸರವಾಗಿದೆ. ಹೈಕಮಾಂಡ್ ನಿರ್ಧಾರಕ್ಕೆ ನನ್ನ ಸಮ್ಮತಿ ಇಲ್ಲ. ಮತ್ತೊಮ್ಮೆ ಚರ್ಚೆ ಮಾಡುವುದಾಗಿ ವರಿಷ್ಠರು ಭರವಸೆ ನೀಡಿದ್ದಾರೆ. ಚುನಾವಣೆಗೆ ನಿಲ್ಲಬೇಡ ಎಂದು 2-3 ತಿಂಗಳ ಮುಂಚೆಯೇ ಹೇಳಬೇಕಿತ್ತು. ಬೇರೆಯವರಿಗೆ ಟಿಕೆಟ್ ನೀಡುತ್ತೇನೆ ಎಂದು ಹೇಳಬೇಕಿತ್ತು. ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇ ನನಗೆ ಮೈನಸ್ ಆಗಿದೆ. ಸರ್ವೇಯನ್ನೂ ನನ್ನ ಪರವಾಗಿಯೇ ಜನಾಭಿಪ್ರಾಯ ಬಂದಿದೆ.
ನನ್ನ ರಾಜಕಾರಣದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ. ಬಿಜೆಪಿ ಪಕ್ಷಕ್ಕೆ ನಿಷ್ಠನಾಗಿ, ನಾಯಲ್ ಆಗಿ ಕೆಲಸ ಮಾಡಿದ್ದೇನೆ. ಹಾಗಿದ್ದರೂ ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ದಾರೆ. ನಾನು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ. ನಾಮಪತ್ರ ಸಲ್ಲಿಕೆಗೆ 2-3 ದಿನಗಳು ಇರುವಾಗ ಹೇಳಿದ್ದು ಸರಿಯಲ್ಲ. ನನಗೆ ನನ್ನ ಕ್ಷೇತ್ರದ ಜನರ ಆಶೀರ್ವಾದವಿದೆ. ಹೈಕಮಾಂಡ್‌ನ ಅಂತಿಮ ನಿರ್ಧಾರ ತಿಳಿದು ಮುಂದಿನ ತೀರ್ಮಾನ ಮಾಡುತ್ತೇನೆ. 7ನೇ ಬಾರಿ ಸ್ಪರ್ಧೆ ಮಾಡ್ತೇನೆ,ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೈಕಮಾಂಡ್‌ಗೆ ಹೇಳಿದ್ದೇನೆ ಎಂದು ತಿಳಿಸಿದರು.












Click it and Unblock the Notifications