Channapatna ByPoll: ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಬಿಜೆಪಿ ನಿರ್ಧಾರ: ಬೊಮ್ಮಾಯಿ ರಿಯಾಕ್ಟ್
ಹುಬ್ಬಳ್ಳಿ, ಅಕ್ಟೋಬರ್ 23: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ರಣಕಣದಲ್ಲಿ ಕಾವು ಹೆಚ್ಚಾಗುತ್ತಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿ.ಪಿ.ಯೋಗೇಶ್ವರ ಬಿಜೆಪಿ ತೊರೆದು, ಮರಳಿ ಕಾಂಗ್ರೆಸ್ ಸೇರಿದ್ದಾರೆ. ಹಾಗಾದರೆ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನಿರಾಕರಿಸಲಾಯಿತು, ಬಿಜೆಪಿ ನಾಯಕರ ನಿರ್ಧಾರ ಕುರಿತು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೂ ಉಚಪಚುನಾವಣೆ ಘೋಷಣೆಯಾಗಿದೆ. ಬಿಜೆಪಿಯ ಟಿಕೆಟ್ ವಿಚಾರದಲ್ಲಿ ನಮ್ಮ ನಾಯಕರು ಒಳ್ಳೆಯ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಬಿಜೆಪಿಯಿಂದ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಕ್ಕೆ ಉತ್ತರಿಸಿದ ಅವರು, ಚನ್ನಪಟ್ಟಣ ಜೆಡಿಎಸ್ ಪಾಲಾಗಿತ್ತು. ಅಲ್ಲಿ ಇಂದಿನ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಗೆದ್ದಿದ್ದರು. ಹೀಗಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಟಿಕೆಟ್ ಕೊಡುವ ಬಗ್ಗೆ ಅವರೇ ನಿರ್ಧರಿಸುತ್ತಾರೆ.
ಚನ್ನಪಟ್ಟಣ ವಿಚಾರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಟಿಕೆಟ್ ವಿಚಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿದ್ದಾರೆ. ಅಂತಿಮವಾಗಿ ಸಕಾರಾತ್ಮಕ ರೂಪ ಪಡೆಯಲಿರುವ ಚರ್ಚೆ ಬಳಿಕ ಒಳ್ಳೆಯ ತೀರ್ಮಾನಕ್ಕೆ ಬರಲಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ತಮ್ಮ ಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಯಥಾ ಪ್ರಕಾರ ಚುನಾವಣಾ ತಯಾರಿ ನಡೆದಿದೆ ಎಂದು ಅವರು ಬೇರೇನನ್ನು ಹೇಳಲು ನಿರಾಕರಿಸಿದರು.
ಸಿಪಿ ಯೋಗೇಶ್ವರ ಪಕ್ಷ ಬಿಡಲು ಕಾರಣ
ಬಿಜೆಪಿಯು ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಟಿಕೆಟ್ ಘೋಷಣೆ ಮಾಡಿತು. ಇದಾದ ಬಳಿಕ ಚನ್ನಪಟ್ಟಣವು ಜೆಡಿಎಸ್ ಆಡಳಿತ ಪ್ರಭಾವದಲ್ಲಿ ಮೊದಲಿನಿಂದಲೂ ಇದೆ. ಈ ಭಾರಿ ಅದನ್ನು ಕಳೆದುಕೊಳ್ಳಲು ಇಷ್ಟಪಡದ ಎಚ್‌ಡಿ ಕುಮಾರಸ್ವಾಮಿ ಅವರು ಪಟ್ಟು ಸಡಿಲಿಸಿಲ್ಲ. ಇದಕ್ಕೆ ಪೂರಕವಾದ ನಿರ್ಧಾರ ಬಿಜೆಪಿ ಕೈಗೊಳ್ಳುವ ಸಾಧ್ಯತೆಗಳು ದಟ್ಟವಾಗಿದ್ದ ಕಾರಣ, ಸಂಭವನೀಯ ಕೆಲವು ಅಂಶಗಳು ಆಧಾರದಲ್ಲಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?
ಇದೀಗ ಬಿಜೆಪಿ ಜೆಡಿಎಸ್ ಮೈತ್ರಿ ಪಾಳಯದಲ್ಲಿನ ದಾರಿ ಸಲೀಸಾಗಿದೆ. ಎಚ್‌ಡಿ ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಚನ್ನಪಟ್ಟಣದಿಂದ ನಿಖಿಲ್ ಸ್ಪರ್ಧೆ ಖಚಿತನಾ? ಇಲ್ಲ ಬೇರೆ ಯಾರನ್ನಾದರೂ ಕಣಕ್ಕಿಳಿಸಬಹುದಾ ಎಂಬುದಕ್ಕೆ ಶೀಘ್ರದಲ್ಲೇ ಉತ್ತರ ಸಿಗಲಿದೆ.












Click it and Unblock the Notifications