ಹುಬ್ಬಳ್ಳಿಯಲ್ಲಿ ಕುಟುಂಬಸ್ಥರ ಜೊತೆ ಬಂದು ಮತ ಚಲಾಯಿಸಿದ ಬಸವರಾಜ ಹೊರಟ್ಟಿ
ಹುಬ್ಬಳ್ಳಿ, ಮೇ, 10: ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಗೆ ಆಗಮಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಪುತ್ರ ಹಾಗೂ ಪತ್ನಿಯಿಂದಿಗೆ ಮತಗಟ್ಟೆಗೆ ಆಗಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಲ್ಯಾಮಿಂಗಟನ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಕುಟುಂಬ ಸಮೇತ ಮತದಾನ ಮಾಡಿದ ಚಿಂಚೋರೆ
ಮತ್ತೊಂದೆಡೆ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಅವರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಧಾರವಾಡದ ಕರ್ನಾಟಕ ಹೈಸ್ಕೂಲ್‌ಗೆ ತಮ್ಮ ಪತ್ನಿ ಸಂಗೀತಾ ಅವರೊಂದಿಗೆ ಬಂದ ದೀಪಕ್ ಚಿಂಚೋರೆ, ಮತದಾನ ಮಾಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ಎಲ್ಲರೂ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕು. ನಾವು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದೇವೆ.
ಹಾಗೆಯೆ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ್ ಅವರು ನಿನ್ನೆ ರಾತ್ರಿ ಹಣ ಹಂಚುವ ಕೆಲಸ ಮಾಡಿದರು. ನಿನ್ನೆ ರಾತ್ರಿಯಿಡೀ ಹಣ ಹಂಚಿದ್ದಾರೆ. ಹಣ ಇದೆ ಎಂದು ಬೆಲ್ಲದ್ ಈ ರೀತಿಯ ರಾಜಕಾರಣ ಮಾಡಬಾರದು. ಪ್ರಜ್ಞಾವಂತ ನಾಗರಿಕರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಟ್ಟಾರೆ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಚುರುಕು ಪಡೆದುಕೊಂಡಿದ್ದು, ಮತದಾರರು ಬೆಳಗ್ಗೆಯಿಂದಲೇ ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.












Click it and Unblock the Notifications