BS Yediyurappa: ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರೋದು ನೂರಕ್ಕೆ ನೂರು ಸತ್ಯ: ಬಿ.ಎಸ್‌.ವೈ ಭವಿಷ್ಯ

ಹುಬ್ಬಳ್ಳಿ, ಏಪ್ರಿಲ್‌, 26: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ, ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಬ್ಬಳ್ಳಿಯಲ್ಲಿ ಭವಿಷ್ಯ ನುಡಿದಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಲಿಂಗಾಯತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಮುಸ್ಲಿಂ ಮತಗಳು ಬೇಡ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಅಭಿಪ್ರಾಯ ಆಗಿದೆ. ಅದು ಪಕ್ಷದ ನಿರ್ಧಾರವಲ್ಲ.ಬಿಜೆಪಿಗೆ ಎಲ್ಲ ಸಮುದಾಯಗಳ ಬೆಂಬಲವಿದೆ ಎಂದರು. ಅಲ್ಲದೆ ನಂತರ ಸಿ.ಟಿ. ರವಿ ಸಿಎಂ ಆಗಬಹುದು ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

Karnataka election 2023: BJP will come to power this time: B.S.Yediyurappa prediction

ಶೆಟ್ಟರ್‌ ಸೋಲಿನ ಭವಿಷ್ಯ ನುಡಿದ ಅಮಿತ್‌ ಶಾ

ಬಿಜೆಪಿ ತೊರೆದಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದರು. ಜೊತೆಗೆ ಹುಬ್ಬಳ್ಳಿ ಜನ ಯಾವಾಗಲೂ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹಿತನುಡಿಯನ್ನಾಡಿದ್ದರು.

ಇಂದು ಹುಬ್ಬಳ್ಳಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಜಗದೀಶ್ ಶೆಟ್ಟರ್ ಪಕ್ಷ ತೊರೆದಿರುವುದರಿಂದ ಬಿಜೆಪಿಗೆ ನಷ್ಟವಿಲ್ಲ. ಜಗದೀಶ್ ಶೆಟ್ಟರ್ ಅವರೇ ಚುನಾವಣೆಯಲ್ಲಿ ಸೋಲುತ್ತಾರೆ, ಹುಬ್ಬಳ್ಳಿ ಜನ ಯಾವಾಗಲೂ ಬಿಜೆಪಿಗೆ ಮತ ಹಾಕಿದ್ದಾರೆ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದ ನಂತರ ಕಾಂಗ್ರೆಸ್ ಸೇರಿದರು ಮತ್ತು ಹುಬ್ಬಳ್ಳಿ-ಧಾರವಾಡ-ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ, ಅವರು ಹಲವಾರು ಬಾರಿ ಈ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಇವರೊಂದಿಗೆ ಲಕ್ಷ್ಮಣ ಸವದಿ ಕೂಡ ಬಿಜೆಪಿ ತೊರೆದರು. ಬಳಿಕ ಬಿಜೆಪಿ ಮೇಲೆ ಹಲವಾರು ಆರೋಪಗಳನ್ನು ಶೆಟ್ಟರ್ ಮಾಡಿರುವ ಲಿಂಗಾಯತ ಸಮುದಾಯದ ಮತಗಳು ಕೈ ತಪ್ಪುವ ಭೀತಿ ಬಿಜೆಪಿಗೆ ಎದುರಾಗಿದೆ. ಇದರಿಂದಾಗಿ ರಾಜ್ಯ ನಾಯಕರು ಮಾತ್ರವಲ್ಲದೆ ಕೇಂದ್ರ ನಾಯಕರ ಮೂಲಕ ಲಿಂಗಾಯತ ಮತಗಳನ್ನು ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಇದರ ಬೆನ್ನಲ್ಲೇ ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಧರ್ಮಾಧಾರಿತ ಮೀಸಲಾತಿ ಅಸಂವಿಧಾನಿಕವಾಗಿದೆ. ಕಾಂಗ್ರೆಸ್ ನಾಯಕರು ಮುಸ್ಲಿಮರಿಗೆ ಮೀಸಲಾತಿಯನ್ನು ಜಾರಿಗೆ ತರುವುದಾಗಿ ಹೇಳುತ್ತಿದ್ದಾರೆ. ಹಾಗಾದರೆ ಅವರು ಯಾರ ಮೀಸಲಾತಿಯನ್ನು ಕಡಿಮೆ ಮಾಡುತ್ತಾರೆ ಎಂದು ಶಾ ಪ್ರಶ್ನೆ ಮಾಡಿದರು.

ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದರು. ಬಿಜೆಪಿಯಿಂದ ರೈತರಿಗೆ ಏನು ಆಗಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ ಹೇಳಿಕೆಗೆ ಶಾ ಪ್ರತಿಕ್ರಿಯೆ ನೀಡಿದರು. ನೇರ ಲಾಭ ವರ್ಗಾವಣೆಯಡಿ 56 ಲಕ್ಷ ರೈತರು ಪ್ರತಿ ವರ್ಷ ₹10,000 ಪಡೆಯುತ್ತಿದ್ದಾರೆ. ಇಷ್ಟು ರೈತರು ಎರಡು-ಮೂರು ಕುಟುಂಬದವರು ಎಂದು ರಾಹುಲ್ ಗಾಂಧಿ ಭಾವಿಸುತ್ತಾರೆಯೇ..? ಎಂದು ಶಾ ಹೇಳಿದರು.

ಆಡಳಿತಾರೂಢ ಬಿಜೆಪಿ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದು, ಮೋದಿ ಸರ್ಕಾರ ಐದು ವರ್ಷಗಳಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆ ಮತ್ತು ಅನುದಾನದಲ್ಲಿ ಶೇ 140 ರಷ್ಟು ಹೆಚ್ಚು ಹಣವನ್ನು ನೀಡಿದೆ ಎಂದು ಅವರು ಹೇಳಿದರು. ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ, ಕರ್ನಾಟಕವು 2009 ಮತ್ತು 2014 ರ ನಡುವೆ ತೆರಿಗೆ ಹಂಚಿಕೆ ಮತ್ತು ಅನುದಾನದ ವಿಷಯದಲ್ಲಿ ಸುಮಾರು ₹ 94,224 ಕೋಟಿಗಳನ್ನು ಪಡೆದುಕೊಂಡಿದೆ. ಮೋದಿ ಸರ್ಕಾರವು 2014 ರಿಂದ 2019 ರ ನಡುವೆ ₹ 2,26,418 ಕೋಟಿಗಳನ್ನು ನೀಡಿದೆ. ಇದು ಶೇ 140 ರಷ್ಟು ಹೆಚ್ಚು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಣ ಕಳುಹಿಸಲಾಗಿದೆ ಎಂದು ಶಾ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+