ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ನಾಯಕರಿಂದ ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ, ಶೆಟ್ಟರ್‌ ಜೊತೆ ರಾಗಾ ಮಾತುಕತೆ

ಹುಬ್ಬಳ್ಳಿ, ಏಪ್ರಿಲ್‌, 23: ವಾಣಿಜ್ಯನಗರಿ ಹುಬ್ಬಳ್ಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ರಾಹುಲ್ ಗಾಂಧಿ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅನೀಲ್‌ ಕುಮಾರ್ ಪಾಟೀಲ್ ಸೇರಿ ಹಲವು ನಾಯಕರು ಭಾಗವಹಿಸಿದ್ದು, ಜಗದೀಶ್‌ ಶೆಟ್ಟರ್‌ ಜೊತೆ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ.

Karnataka election 2023: Grand Welcome to Rahul Gandhi by Congress leaders in Hubballi

ಇನ್ನು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಸದುದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿಗೆ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಬಿಜೆಪಿ ವಿರುದ್ಧ ಸುರ್ಜೆವಾಲಾ ವಾಗ್ದಾಳಿ

ಇನ್ನು ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಗೆಲ್ಲುವ ವಿಶ್ವಾಸದಲ್ಲಿರುವ ಮೂರು ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆ ಒಂದು ಕಡೆಯಾದ್ರೆ ಇತ್ತ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ, ಆರೋಪ-ಪ್ರತ್ಯಾರೋಪ ಜೋರಾಗಿದ್ದು, ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಬಿಜೆಪಿಯಲ್ಲಿ ಮುಖ್ಯಮಂತ್ರಿ ಪಟ್ಟಿಯನ್ನು ಬಿಚ್ಚಿಟ್ಟು ಇತ್ತೀಚೆಗಷ್ಟೇ ಕಿಡಿಕಾರಿದ್ದರು.

ಈ ಕುರಿತು ಜಗದೀಶ್‌ ಶೆಟ್ಟರ್‌ ನಿವಾಸಕ್ಕೆ ಭೇಟಿ ಕೊಟ್ಟ ಸುರ್ಜೆವಾಲಾ ಚುನಾವಣಾ ತಯಾರಿ ಕುರಿತು ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಬಿಜೆಪಿಯಲ್ಲಿ ಮುಖ್ಯಮಂತ್ರಿ ರೇಸ್​​ನಲ್ಲಿ ಹತ್ತಕ್ಕೂ ಹೆಚ್ಚು ಜನರಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಶೋಭಾ ಕರಂದ್ಲಾಜೆ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಸಿಎಂ ರೇಸ್‌ ನಲ್ಲಿದ್ದಾರೆ ಎಂದು ಹೇಳಿದ್ದರು

ಚುನಾವಣೆಯಲ್ಲಿ ಬೇರೆಯವರಿಗೆ ಖೆಡ್ಡಾ ತೋಡಲು ಹೋದವರೇ ಮೊದಲು ಅವರೇ ಖೆಡ್ಡಾಕ್ಕೆ ಬೀಳ್ತಾರೆ ಎಂದು ನಮ್ಮಲ್ಲಿ ಹಳೆ ಗಾದೆ ಮಾತಿದೆ. ಅದರಂತೆಯೇ ಬಿಜೆಪಿ ಕಥೆ ಆಗಲಿದೆ. ಬೇರೆಯವರಿಗೆ ಖೆಡ್ಡಾ ತೋಡಲು ಷಡ್ಯಂತ್ರ ರೂಪಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ. ಆದ್ರೆ ಅವರ ಷಡ್ಯಂತ್ರಕ್ಕೆ ಅವರೇ ಬಲಿಯಾಗುತ್ತಾರೆ ಎಂದು ‌ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಬಿಜೆಪಿಯವರು ಲಿಂಗಾಯತರಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಜಗದೀಶ್ ಶೆಟ್ಟರ್ ಕಾಂಗ್ರೆಸ್​​​​ಗೆ ಬಂದಿದ್ದಾರೆ. ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಪಕ್ಷಕ್ಕೆ ಬಂದಿರುವುದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಬಂದಿದೆ. ಬಿಜೆಪಿಯವರು ಕೆಲವೊಮ್ಮೆ ಲಿಂಗಾಯತ ಸಮಾಜಕ್ಕೆ ಅಪಮಾನ ಮಾಡ್ತಾರೆ. ಕೆಲವೊಮ್ಮೆ ದಲಿತರು, ಇತರೆ ಸಮುದಾಯ ಅಪಮಾನ ಮಾಡ್ತಾರೆ. ಒಬಿಸಿ, ಒಕ್ಕಲಿಗ ಸಮುದಾಯವನ್ನು ಟಾರ್ಗೆಟ್ ಮಾಡ್ತಿದೆ ಎಂದು ಕಿಡಿಕಾರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಹಿನ್ನೆಡೆಯಾಗಿದೆ. ಈ ಸರ್ಕಾರ 40 ಪರ್ಸೆಂಟ್‌ ಸರ್ಕಾರ 40 ಸೀಟುಗಳಿಗೆ ಮಾತ್ರ ಸಿಮೀತವಾಗುತ್ತದೆ ಎಂದು ವಾಗ್ದಾಳಿ ನಡೆಸಿದ ಅವರು, ಬಿಜೆಪಿಯಲ್ಲಿ ಕೆಲವೇ ಸಜ್ಜನ ರಾಜಕಾರಣಿಗಳಿದ್ದರು. ಆದರೆ ಅವರೆಲ್ಲರನ್ನೂ ಹೊರ ಹಾಕುವ ಕೆಲಸ ಮಾಡಿದೆ ಎಂದರು. ನಮ್ಮದು ವಿಜನ್ 150 ಪ್ಲಸ್, ನಮ್ಮ ಗುರಿಯನ್ನ ನಾವು ಮುಟ್ಟುತ್ತೇವೆ. ಸದೃಢ ನಾಯಕತ್ವದ ಕಾರಣದಿಂದಾಗಿ ನಮ್ಮ ಗುರಿ ಮುಟ್ಟುತ್ತೇನೆ. ರಾಜ್ಯದಲ್ಲಿ ಪೂರ್ಣ ಬಲದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+