ಮತ ಚಲಾಯಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ: ಬಿಜೆಪಿಗೆ ಬಹುಮತದ ವಿಶ್ವಾಸ

ಹುಬ್ಬಳ್ಳಿ, ಮೇ 10: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ ನಗರದಲ್ಲಿ ಮತದಾನ ಭರದಿಂದ ಸಾಗುತ್ತಿದ್ದು, ಕೇಶ್ವಾಪುರದ ವಿವೇಕಾನಂದ ಕಾಲೋನಿಯ ರೋಟರಿ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯ ಮತಗಟ್ಟೆ ನಂ. 109 ರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ ಚಲಾಯಿಸಿದ್ದಾರೆ.

ಕುಟುಂಬ ಸಮೇತರಾಗಿ ಮತಕೇಂದ್ರಕ್ಕೆ ಬಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತದಾನ ಮಾಡಿ, ಎಲ್ಲರೂ ಮತದಾನ ಮಾಡುವಂತೆ ಜನರಿಗೆ ಕರೆ ಕೊಟ್ಟಿದ್ದಾರೆ.

Karnataka Election 2023: Union Minister Pralhad Joshi Voted At Hubballi

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ, ಬೆಳಗ್ಗೆಯಿಂದ ಮತಗಟ್ಟೆಗಳ ಎದುರು ಜನರು ಸರತಿಸಾಲಿನಲ್ಲಿ ನಿಂತು, ಮತ ಚಲಾಯಿಸುತ್ತಿದ್ದಾರೆ. ರಾಜ್ಯದಾದ್ಯಂತ ಪ್ರಜಾತಂತ್ರ ಹಬ್ಬಕ್ಕೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.

ಸುಶಿಕ್ಷಿತರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಿತ್ತು. ಆದರೆ, ಈ ವಿವೇಕಾನಂದ ಕಾಲೋನಿಯಲ್ಲಿ ಬಹುತೇಕ ಸುಶಿಕ್ಷಿತರೇ ಇದ್ದು, ಬೆಳಗ್ಗೆಯಿಂದಲೇ ಮತಚಲಾಯಿಸುವ ಉತ್ಸಾಹ ತೋರುತ್ತಿದ್ದಾರೆ. ಇದು ಬಿಜೆಪಿಗೆ ಬಹುಮತ ದೊರೆಯುವ ಮುನ್ಸೂಚನೆ ಎಂದು ಅಭಿಪ್ರಾಯಪಟ್ಟರು.

ಮಾತು ಮುಂದುವರಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯದಲ್ಲಿ 113ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೊಮ್ಮೆ ಡಬ್ಬಲ್ ಎಂಜಿನ್ ಸರ್ಕಾರ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka Election 2023: Union Minister Pralhad Joshi Voted At Hubballi

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಮತದಾನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು‌ ಮತದಾನ ಮಾಡುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಹುಬ್ಬಳ್ಳಿಯ ಬಸಮ್ಮ ಪಾಟೀಲ್ ಸರ್ಕಾರಿ ಶಾಲೆಯ ಭೂತ ನಂಬರ್ 133ರಲ್ಲಿ ಮತದಾನ ಮಾಡಿದ್ದು, ತಮ್ಮ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಜೊತೆಗೆ ತೆರಳಿ ಮತದಾನ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+