Jagadish Shettar: ನನಗೆ ಮಾಲಾರ್ಪಣೆ ಮಾಡಿದ್ದಕ್ಕೆ ಚೇತನ ಹಿರೇಕೆರೂರನ್ನು ಬಂಧಿಸಿದ್ದಾರೆ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಏಪ್ರಿಲ್ 21: ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಅವರನ್ನು ಉದ್ದೇಶ ಪೂರ್ವಕವಾಗಿ, ಗುಂಡಾ ಕಾಯ್ದೆ ಅಡಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ನನಗೆ ಬಂದು ಮಾಲಾರ್ಪಣೆ ಮಾಡಿದ್ದಕ್ಕೆ, ಆತನನ್ನು ಅರೆಸ್ಟ್ ಮಾಡಿದ್ದಾರೆಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ನಗರದ ವಕೀಲರ ಸಂಘದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚೇತನ ಹಿರೇಕೆರೂರ ನನಗೆ ಬೆಂಬಲ ನೀಡುತ್ತಾನೆ ಎಂದು, ಈಗಲೇ ಆತನ ಮೇಲೆ ಗುಂಡಾ ಕಾಯ್ದೆ ಹಾಕಿ ಬಂಧನ ಮಾಡಿಸಿದ್ದಾರೆ. ಪಾಲಿಕೆ ಸದಸ್ಯನಾಗಿ ಜನರ ಸೇವೆ ಮಾಡುತ್ತ ಬರುತ್ತಿದ್ದ, ಇದನ್ನು ಸಹಿಸಲಾಗದೇ ಹೀಗೆ ಉದ್ದೇಶ ಪೂರ್ವಕವಾಗಿ ಮಾಡುತ್ತಿದ್ದಾರೆಂದು ಎಂದು ಜಗದೀಶ್ ಶೆಟ್ಟರ್ ಗರಂ ಆಗಿದ್ದಾರೆ.

ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಗೂಂಡಾ ಕಾಯಿದೆ ಅಡಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಚೇತನ ಹಿರೇಕೆರೂರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದಾರೆ.
ಈಗಾಗಲೇ ಜಿಲ್ಲೆಯಿಂದ ಸುಮಾರು ಹತ್ತು ಜನರನ್ನು ಗಡಿಪಾರು ಮಾಡಿದ್ದು, ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ಹಿಂದೆ ಕೂಡ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಚೇತನ ಹಿರೆಕೇರೂರು ಪಾಲಿಕೆಯ ಚುನಾಯಿತ ಪ್ರತಿನಿಧಿಯೂ ಆಗಿದ್ದಾರೆ.
ಇನ್ನು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸುವ ರ್ಯಾಲಿಯಲ್ಲಿ ಭಾಗಿಯಾಗಿದ್ದ ಪಾಲಿಕೆ ಸದಸ್ಯನ ಬಂಧನವಾಗಿದೆ. ಗೂಂಡಾ ಕಾಯ್ದೆ ಅಡಿ ಚೇತನ ಹಿರೇಕೆರೂರನ್ನು ಬಂಧಿಸಿ ಬೆಳಗಾವಿಗೆ ಹಿಂಡಲಗಾ ಜೈಲ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಭ್ರಷ್ಟಚಾರ ಇರುವುದು ಸತ್ಯ-ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಜನ ಬೆಂಬಲ ಕಾಂಗ್ರೆಸ್‌ಗೆ ಇದೆ. ದಿನ ನಿತ್ಯ ನನಗೆ ದೂರವಾಣಿ ಕರೆ ಬರುತ್ತಿದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಹೇಳುತ್ತಾರೆ. 40 ಪರ್ಸೆಂಟೇಜ್ ಸರ್ಕಾರ ಆರೋಪ ವಿಚಾರಕ್ಕೆ, ನಾನೂ ಸರ್ಕಾರದ ಭಾಗವಾಗಿದ್ದೆ. ಅಧಿವೇಶನದಲ್ಲಿ 40 ನಿಮಿಷ ಮಾತನಾಡಿದ್ದೆ. ನೇಮಕಾತಿ ವಿಚಾರದ ಕುರಿತು ಪ್ರಶ್ನೆ ಮಾಡಿದ್ದೆ, ಭ್ರಷ್ಟಾಚಾರ ಇತ್ಯಾದಿಗಳನ್ನೂ ಪ್ರಸ್ತಾಪಿಸಿದ್ದೇನೆ. ಭ್ರಷ್ಟಚಾರ ಇರುವುದು ಸತ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ಎರಡು ನಾಮಪತ್ರ ಸಲ್ಲಿಕೆ ಮಾಡಲು ಹೋಗಿದ್ದೆ. ಧಾರವಾಡ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ವಿನಯ ಕುಲಕರ್ಣಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಿದ್ದೆ. ರ್ಯಾಲಿಯಲ್ಲೂ ಕೂಡ ಭಾಗವಹಿಸಿದ್ದೇನೆ. ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಜನರ ಬೆಂಬಲದಿಂದ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ ಎಂದರು.
ಇನ್ನು ಮುಸ್ಲಿಂ ಟೋಪಿ ಹಾಕಿಕೊಳ್ಳಲು ಕಾಂಗ್ರೆಸ್‌ಗೆ ಹೋಗಿದ್ದಾರೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಅವರವರ ಧರ್ಮದಲ್ಲಿ ಅವರವರ ಪದ್ಧತಿ ಇರುತ್ತದೆ. ಇವರು ಜನರಿಗೆ ಟೋಪಿ ಹಾಕಿದ್ದಾರೆ ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications