Karnataka elections 2023: ರಾಜೀನಾಮೆ ಪತ್ರ ಸಲ್ಲಿಸಿ ಬಿಜೆಪಿಗೆ "ಕೈ" ಕೊಟ್ಟ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಏಪ್ರಿಲ್, 16: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಬಿಜೆಪಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆಗಳು ಆಗುತ್ತಲೇ ಇವೆ. ಇದೀಗ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕುತೂಹಲ ಮೂಡಿಸಿದ್ದಾರೆ.
ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ
ಇನ್ನು ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿ ಇರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಶನಿವಾರ (ಏಪ್ರಿಲ್ 15) ರಾತ್ರಿ ನಡೆಸಿದ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿಯಲ್ಲಿ ಜಗದೀಶ್ ಶೆಟ್ಟರ್ ಈ ನಿರ್ಧಾರವನ್ನು ಪ್ರಕಟಿಸಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಹಾಗೆಯೇ ಅವರು ಭಾನುವಾರ (ಏಪ್ರಿಲ್ 16) ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಅವರು ರಾಜೀನಾಮೆ ನೀಡಿದ ಮೇಲೆ ಮುಂದಿನ ನಿಲುವನ್ನು ತಿಳಿಸುವುದಾಗಿ ಹೇಳಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಜಗದೀಶ್ ಶೆಟ್ಟರ್ ಸಿಎಂ ರೇಸ್‌ಗೆ ಬರುತ್ತಾರೆ ಅನ್ನುವ ಭಯದ ವಾತಾವರಣವಿದೆ ಎನ್ನುವ ಮಾತುಗಳು ಕೂಡ ಕೇಳಿಬಂದಿದ್ದವು. ಹೀಗೆ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ನಾನು ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ. ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ ಎಂದು ಹೇಳಿದ್ದರು.
ಬಿಜೆಪಿಗೆ ಗುಡ್ ಬೈ ಹೇಳಿದ ಶೆಟ್ಟರ್
ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ರಾತ್ರಿ ಜಗದೀಶ್ ಶೆಟ್ಟರ್ ಅವರ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ಇದಕ್ಕೆ ಸಮ್ಮತಿ ನೀಡದ ಶೆಟ್ಟರ್ ಕೊನೆಗೂ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಮತ್ತೊಂದೆಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿದಂತೆ 12 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುವುದು ಬಾಕಿ ಇದೆ. ಒಟ್ಟಾರೆಯಾಗಿ ಶೆಟ್ಟರ್ ಅವರು ಯಾವ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಅನ್ನುವುದನ್ನು ಕಾದುನೋಡಬೇಕಿದೆ.

ಸವದಿ ಬೆನ್ನಲ್ಲೇ ಬಿಜೆಪಿಗೆ "ಕೈ" ಕೊಟ್ಟ ಶೆಟ್ಟರ್
ಈಗಾಗಲೇ ಲಕ್ಷ್ಮಣ ಸವದಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೇಸ್‌ಗೆ ಸೇರ್ಪಡೆಯ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕೂಡ ಬಿಜೆಪಿ ತೊರೆದಿರುವುದು ಚುನಾವಣೆಯ ಹೊಸ್ತಿಲಲ್ಲಿ ಕುತೂಹಲ ಹೆಚ್ಚಿಸುವಂತೆ ಮಾಡಿದೆ.
ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಸೇರಿದಂತೆ ಕೆಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಇದು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ತೀವ್ರ ಅಸಮಾಧಾನ ಉಂಟು ಮಾಡಿತ್ತು.
ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದ ಜಗದೀಶ್ ಶೆಟ್ಟರ್ ಬಂಡಾಯದ ಸುಳಿವು ನೀಡಿದ್ದರು. ಈ ಮಧ್ಯೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಪಟ್ಟು ಬದಲಿಸದ ಹಿನ್ನೆಲೆಯಲ್ಲಿ ತಮ್ಮ ದೃಢ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದಾರೆ.
ಶನಿವಾರ ತಡರಾತ್ರಿ ರಾಜ್ಯ ಹಾಗೂ ಕೇಂದ್ರ ನಾಯಕರ ಜೊತೆಗೆ ಮಾತುಕತೆ ನಡೆದಿದ್ದು, ಈ ಸಂಧಾನ ಸಭೆ ವಿಫಲವಾಗಿದೆ. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ಭಾನುವಾರ ಬೆಳಗ್ಗೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿಯಾಗುವುದಾಗಿ ತಿಳಿಸಿದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications