CID: ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ಹಸ್ತಾಂತರ: ಇಂದು ಇಲ್ಲ ನಾಳೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮನ?
ಹುಬ್ಬಳ್ಳಿ, ಮೇ 21: ಹುಬ್ಬಳ್ಳಿಯಲ್ಲಿ ಮೇ 15ರಂದು ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಖುದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ. ಇಂದು ಇಲ್ಲವೇ ನಾಳೆ ಸಿಐಡಿ ತಂಡ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ.
ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೆಂಗಳೂರಿಗೆ ಆಗಮಿಸಿದರು. ನೆನ್ನೆ ಸೋಮವಾರ ಬೆಳಗ್ಗೆ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿದರು. ತಿಂಗಳ ಅಂತರದಲ್ಲಿ ಕೊಲೆಯಾದ ನೇಹಾ ಹಾಗೂ ಅಂಜಲಿ ಅವರ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಅವರು, ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ತನಿಖಾ ಕಡತ, ವರದಿ ಹಸ್ತಾಂತರ
ಸಿಐಡಿ ಅಧಿಕಾರಿಗಳ ತಂಡ ಇವತ್ತು ಅಥವಾ ನಾಳೆ ಅಂಜಲಿ ಹತ್ಯೆ ಕುರಿತಂತೆ ಪೊಲೀಸರಿಂದ ತನಿಖಾ ವರದಿಗಳ ಕಡತವನ್ನು ಸ್ವೀಕರಿಸಲಿದ್ದಾರೆ. ಘಟನೆ ಕುರಿತು ಪೊಲೀಸರಿಂದ ಮಾಹಿತಿ ಪಡೆಯುವ ಜೊತೆಗೆ ಖುದ್ದು ಅಧಿಕಾರಿಗಳು ಹತ್ಯೆ ನಡೆದ ಅಂಜಲಿ ಮನೆಗೆ ಭೇಟಿ ಕೊಟ್ಟು ಪರಿಶೀಲಿಸುತ್ತಾರೆ. ಅಗತ್ಯ ಮಾಹಿತಿಗಳನ್ನು ಪೊಲೀಸರಿಂದ ಪಡೆದು ತನಿಖೆ ಮುಂದುವರೆಸಲಿದ್ದಾರೆ.
ಕಳೆದ ಭಾರಿ ಅಂಜಲಿ ಪ್ರಕರಣವನ್ನು ಸಿಐಡಿಗೆ ನೀಡಿದ ದಿನವೇ ತನಿಖಾಧಿಕಾರಿಗಳು ಬಿವಿಬಿ ಕಾಲೇಜಿಗೆ ಭೇಟಿ ನೀಡಿದ್ದರು. ಕಡತ , ತನಿಖಾ ವರದಿ ಪಡೆದು ತಮ್ಮ ಆಯಾಮದಲ್ಲಿ ತನಿಖೆ ಮುಂದುವರೆಸಿದ್ದಾರೆ. ಇದೀಗ ಅಂಜಲಿ ಪ್ರಕರಣವು ಸಿಐಡಿಗೆ ಹಸ್ತಾಂತರವಾಗಿದೆ.
ಇದೇ ವಿಚಾರವಾಗಿ ಮಾತನಾಡಿದ ಜಿ.ಪರಮೇಶ್ವರ ಅವರು, ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.

ನೇಹಾ ಕೊಲೆ ಕೇಸ್‌ಗೆ ರಾಜಕೀಯ ಬಣ್ಣ
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನು ರಾಜಕೀಯ ಬಣ್ಣಕಟ್ಟುವ, ರಾಜಕೀಯಕ್ಕೆ ಬಳಸಿಕೊಳ್ಳವ ಪ್ರಯತ್ನ ಆಗಿದೆ. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರ ಬರಬೇಕಿದೆ. ಇದು ಶೀಘ್ರವೇ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಸಚಿವರ ಬಳಿ ಅಳಲು ತೋಡಿಕೊಂಡ ಅಂಜಲಿಯ ಅಜ್ಜಿ
ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದಾಗಿ ಯುವತಿಯ ಅಜ್ಜಿ ಗಂಗಮ್ಮ ಅವರನ್ನು ಮಾತನಾಡಿಸಿದೆ. ಘಟನೆಗೂ ಮೊದಲೇ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಈ ವೇಳೆ ಅಲ್ಲಿ ಸರಿಯಾಗಿ ಸ್ಪಂದಿಸದ ಕಾರಣ ಬೇಸರವಾಯ್ತು. ದೂರು ನೀಡಿದ ಕೂಡಲೇ ಕ್ರಮ ತೆಗೆದುಕೊಂಡಿದ್ದರೆ ಮೊಮ್ಮಗಳು ಅಜಂಲಿ ಹತ್ಯೆ ಆಗುತ್ತಿರಲಿಲ್ಲ ಎಂದು ಕಣ್ಣೀರು ಹಾಕಿದರು.
ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಲಾಗಿದೆ. ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪೆಸಗಿದ್ದರು ಸುಮ್ಮನೆ ಬಿಡುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು.
ಕ್ರೈಂ ರೇಟ್: ವಿಪಕ್ಷಗಳಿಗೆ ತಿರುಗೇಟು
ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರ ಅವಧಿಯಲ್ಲಿ 2021 ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗೆ (4 ತಿಂಗಳ ಅಂಕಿ-ಅಂಶ) 499 ಕೊಲೆ ಪ್ರಕರಣಗಳು, 2022 ಜನವರಿಯಿಂದ ಏಪ್ರಿಲ್‌ವರೆಗೆ 466, 2023 ಜನವರಿಯಿಂದ ಏಪ್ರಿಲ್‌ವರೆಗೆ 431, 2024 ಜನವರಿಯಿಂದ ಏಪ್ರಿಲ್‌ವರೆಗೆ 430 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಯಾರ ಅವಧಿಯಲ್ಲಿ ಹೆಚ್ಚು ಕೊಲೆ ಪ್ರಕರಣಗಳು ವರದಿಯಾಗಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿರುಗೇಟು ನೀಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications