ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್: ಶೆಟ್ಟರ್

Written By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಜುಲೈ 15: ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದ್ದು, ಈಗ ಬಹಿರಂಗವಾಗಿರುವ ಬೆಂಗಳೂರು ಕೇಂದ್ರ ಕಾರಾಗೃಹ ಹಗರಣ ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.

ಹುಬ್ಬಳ್ಳಿ ಪಾಲಿಕೆಯ ಅಧ್ಯಯನ ಪ್ರವಾಸದ ದಾಖಲೆಗಳೇ ನಾಪತ್ತೆ!

ಹುಬ್ಬಳ್ಳಿಯಲ್ಲಿ ಇಂದು (ಜುಲೈ 15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದರು. ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂಬುದಕ್ಕೆ ಡಿಐಜಿ ಡಿ ರೂಪಾ ಅವರು ನೀಡಿರುವ ವರದಿಗಳು ಪೂರಕವಾಗಿವೆ. ಅಲ್ಲದೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಿರುವ ಭ್ರಷ್ಟಾಚಾರ ದೇಶದ ಜೈಲುಗಳ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ.

Karnataka is becoming NO.1 state in corruption: Former CM Jagadeesh Shettar

ಭ್ರಷ್ಟಾಚಾರ ಆರೋಪ ಬಂದ ತಕ್ಷಣ ಸರ್ಕಾರ ಪ್ರಕರಣದ ಕುರಿತು ಕೂಲಂಕಷವಾಗಿ ಚರ್ಚೆ ಮಾಡಬೇಕಿತ್ತು. ಆದರೆ, ಮಾಡಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಸಡ್ಡೆ ಭಾವನೆಯಿಂದ ರಾಜ್ಯದಲ್ಲಿ ಭ್ರಷ್ಟಚಾರ ತಾಂಡವಾಡುತ್ತಿದ್ದು, ಅವರ ನಿರ್ಲಕ್ಷ್ಯತನವೇ ಇದಕ್ಕೆ ಕಾರಣ ಎಂದು ದೂರಿದರು.

ಪರಪ್ಪನ ಅಗ್ರಹಾರದಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು. ಇದಕ್ಕಾಗಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Former CM of Karnataka and oppostion leader in assembly Jagadeesh Shettar has alleged that Karnataka is no 1 in corruption across the nation, DIG (Prisons) D Roopa's report is supportive document of his allegation. He demanded government should odere judicial enquairy in this case, he told.
Please Wait while comments are loading...