ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ಕೊಟ್ಟ ಅಶ್ವತ್ಥ ನಾರಾಯಣ ಸುಳಿವು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜೂ.11: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ಬಿಟ್ಟುಕೊಟ್ಟ ಅಶ್ವತ್ಥ ನಾರಾಯಣ, ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ. ಪರಿಸ್ಥಿತಿಗೆ ಅನುಗುಣವಾಗಿ ಯಾರು ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದ ಅವರು, ಯುಪಿಯಲ್ಲಿ ಹಿಂಸಾಚಾರ ಹೋರಾಟ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ,‌ ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಪುಂಡ ಪೋಕರಿಗಳ ಥರ ಮಾತಾಡ್ತಾರೆ: ಜಗದೀಶ್ ಶೆಟ್ಟರ್ ಟೀಕೆಸಿದ್ದರಾಮಯ್ಯ ಪುಂಡ ಪೋಕರಿಗಳ ಥರ ಮಾತಾಡ್ತಾರೆ: ಜಗದೀಶ್ ಶೆಟ್ಟರ್ ಟೀಕೆ

ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ. ರಾಜ್ಯಸಭೆಯಲ್ಲಿ ಎ ಟೀಂ ಬಿ ಟೀಂ ಅಂತ ಎನ್ನುವ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

Karnataka: Operation kamala making noise again: Ashwath Narayan clue

ಈ ಹಿಂದೆ ಕೂಡ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ವಿತರಿಸಲಾಗುವ ತ್ರಿಚಕ್ರ ವಾಹನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಮನಗರ ತೆರಳಿದ್ದರು. ಈ ವೇಳೆ ಪ್ರಶ್ನೆ ಮಾಡಿದ್ದ ಪತ್ರಕರ್ತರು ಸಚಿವ ರಮೇಶ್‌ ಜಾರಕಿಹೊಳಿ ಅವರ ಆಪರೇಷನ್‌ ಕಮಲದ ಕುರಿತು ಅಭಿಪ್ರಾಯ ಕೇಳಿದ್ದಾರೆ.

Karnataka: Operation kamala making noise again: Ashwath Narayan clue

ಜಾರಕಿಹೊಳಿ ಬಗ್ಗೆ ಮಾಹಿತಿ ಇಲ್ಲ:

Recommended Video

ರಿಷಬ್ ಪಂತ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ರಿಕಿ ಪಾಂಟಿಂಗ್!! | Oneindia Kannada

ಈ ವೇಳೆ ನಗುತ್ತಲೇ ಉತ್ತರ ನೀಡಿರುವ ಅಶ್ವತ್ಥ್ ನಾರಾಯಣ್, "ರಮೇಶ್‌ ಜಾರಕಿಹೊಳಿ ಹೇಳಿಕೆ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ, ಆಪರೇಷನ್ ಕಮಲ ಇದ್ದರೂ ಇರಬಹುದು" ಎಂದು ಹೇಳುವ ಮೂಲಕ ಮಾರ್ಮಿಕವಾಗಿ ಆಪರೇಷನ್‌ 2.0 ಸುಳಿವು ನೀಡಿದ್ದಾರೆ. ಅಸಲಿಗೆ ಕಳೆದ ವರ್ಷ ರಾಜ್ಯದಲ್ಲಿ ನಡೆದ ಆಪರೇಷನ್‌ ಕಮಲದಲ್ಲಿ ಸಚಿವ ಆರ್‌. ಅಶೋಕ್‌ ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರಮುಖ ಪಾತ್ರವಹಿಸಿದ್ದರು. ಇದೇ ಕಾರಣದಿಂದಾಗಿ ಈ ಹಿಂದೆ ಸಚಿವರಾಗಿ ಅನುಭವ ಇಲ್ಲದ ಅಶ್ವತ್ಥ್ ನಾರಾಯಣ್ ಅವರನ್ನು ಉಪ ಮುಖ್ಯಮಂತ್ರಿ ಎಂಬಂತಹ ಉನ್ನತ ಹುದ್ದೆಗೆ ತಂದು ಕೂರಿಸಲಾಗಿತ್ತು. ಈ ನಿಟ್ಟಿನಲ್ಲಿ ಇಂದು ಅಶ್ವತ್ಥ್ ನಾರಾಯಣ್ ನೀಡುವ ಮಾರ್ಮಿಕ ಹೇಳಿಕೆಯನ್ನು ಕಾಂಗ್ರೆಸ್‌ ಲಘುವಾಗಿ ಪರಿಗಣಿಸಿದರೆ ನಂತರದ ದಿನಗಳಲ್ಲಿ ದೊಡ್ಡ ಮಟ್ಟದ ದಂಡ ತೆರಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

English summary
operation lotus making noise again, Some people are tired of the stand of family parties to the BJP, The BJP has a better future than the other parties,Minister Ashwath Narayan in Hubballi said who will come.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X