ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕ್ ಪರ ಘೋಷಣೆ; ಹಿಂಡಲಗಾ ಜೈಲು ಅಂಧೇರಿ ಸೆಲ್‌ಗೆ ವಿದ್ಯಾರ್ಥಿಗಳು

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 18 : ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಮಾರ್ಚ್ 2ರ ತನಕ ವಿದ್ಯಾರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೋಮವಾರ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲೀಬ್ ಮಜೀದ್ ಮತ್ತು ಬಾಸಿತ್ ಸೋಫಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.

ಪಾಕ್ ಪರ ಘೋಷಣೆ; ಗೃಹ ಸಚಿವರು ಹೇಳಿದ್ದೇನು?ಪಾಕ್ ಪರ ಘೋಷಣೆ; ಗೃಹ ಸಚಿವರು ಹೇಳಿದ್ದೇನು?

ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಉಪಕಾರಾಗೃಹದಲ್ಲಿ ಇಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಬೆಳಗ್ಗೆ ಎಲ್ಲರನ್ನೂ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ. ಸೋಮವಾರ ನ್ಯಾಯಾಲಯದ ಆವರಣದಲ್ಲಿಯೇ ಆರೋಪಿಗಳ ಮೇಲೆ ಹಲ್ಲೆ ಯತ್ನ ನಡೆದಿತ್ತು.

ಪಾಕ್ ಪರ ಘೋಷಣೆ ಕೂಗಿದವರನ್ನು ಮತ್ತೆ ಬಂಧಿಸಿದ ಪೊಲೀಸರುಪಾಕ್ ಪರ ಘೋಷಣೆ ಕೂಗಿದವರನ್ನು ಮತ್ತೆ ಬಂಧಿಸಿದ ಪೊಲೀಸರು

ಆರೋಪಿಗಳ ಮೇಲೆ ಇತರ ಕೈದಿಗಳು ಹಲ್ಲೆ ನಡೆಸುವ ಭೀತಿ ಇರುವುದರಿಂದ ಮೂವರನ್ನು ಅಂದೇರಿ ಸೆಲ್‌ನಲ್ಲಿ ಇಡಲಾಗಿದೆ ಎಂದು ಹಿಂಡಲಗಾ ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಪರವಾಗಿ ವಿದ್ಯಾರ್ಥಿಗಳು ಘೋಷಣೆ ಕೂಗಿದ ವಿಚಾರದ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆ

ಭಾರಿ ಭದ್ರತೆಯ ಜೈಲು

ಭಾರಿ ಭದ್ರತೆಯ ಜೈಲು

ಬೆಳಗಾವಿಯ ಹಿಂಡಲಗಾ ಜೈಲು ರಾಜ್ಯದ ದೊಡ್ಡ ಮತ್ತು ಭದ್ರತೆ ಹೆಚ್ಚಿರುವ ಜೈಲಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹುಬ್ಬಳ್ಳಿ ಜೈಲಿನಲ್ಲಿ ಹಲ್ಲೆ ನಡೆಯುವ ಭೀತಿಯಲ್ಲಿ ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಪೋಷಕರಿಂದ ಭೇಟಿ

ಪೋಷಕರಿಂದ ಭೇಟಿ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್‌ರನ್ನು ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲೀಬ್ ಮಜೀದ್ ಮತ್ತು ಬಾಸಿತ್ ಸೋಫಿ ಪೋಷಕರು ಮಂಗಳವಾರ ಭೇಟಿಯಾಗಿ ಚರ್ಚೆ ನಡೆಸಿದರು. "ಮಕ್ಕಳು ದೇಶ ದ್ರೋಹಿಗಳಲ್ಲ. ಹುಬ್ಬಳ್ಳಿಯಲ್ಲಿ ಉತ್ತಮ ಶಿಕ್ಷಣ ದೊರೆಯಲಿದೆ ಎಂದು ಕಳಿಸಿದ್ದೇವೆ" ಎಂದು ಹೇಳಿದರು.

ವರದಿ ಕೇಳಿದ ಗೃಹ ಸಚಿವರು

ವರದಿ ಕೇಳಿದ ಗೃಹ ಸಚಿವರು

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಪೊಲೀಸರು ಭಾನುವಾರ ಬಿಡುಗಡೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಗೃಹ ಸಚಿವರು ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸರಿಂದ ವರದಿ ಕೇಳಿದ್ದಾರೆ.

ನ್ಯಾಯಾಂಗ ಬಂಧನದಲ್ಲಿ ವಿದ್ಯಾರ್ಥಿಗಳು

ನ್ಯಾಯಾಂಗ ಬಂಧನದಲ್ಲಿ ವಿದ್ಯಾರ್ಥಿಗಳು

ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 153 (ಎ), 153ಬಿ (ಸಿ), 505 (2) ಪ್ರಕರಣ ದಾಖಲಿಸಿ, ಕೋಮು ಸೌಹಾರ್ದ ಕದಡುವ ಹಾಗೂ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

English summary
Three Kashmiri students who raised pro-Pakistani slogan in Hubballi shifted to Hindalga jail Belagavi. Court ordered for 14 days of judicial custody for the students on February 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X