ಹರಿದ ಪಿಪಿಇ ಕಿಟ್ ಧರಿಸಿ ಕರ್ತವ್ಯ ನಿರ್ವಹಿಸುವ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ

ಹುಬ್ಬಳ್ಳಿ, ಆಗಸ್ಟ್ 02: ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಗಳ ಜೀವಕ್ಕೆ ಧಕ್ಕೆಯನ್ನುಂಟು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ದೋಷಪೂರಿತ ಸುರಕ್ಷತಾ ಕಿಟ್ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಗುಣಮಟ್ಟದ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್), ಎನ್ 95 ಮಾಸ್ಕ್ ಧರಿಸಬೇಕಾಗುತ್ತದೆ. ಆದರೆ ಕಿಮ್ಸ್ ನ ಕೆಲ ಸಿಬ್ಬಂದಿಗೆ ನೀಡಲಾದ ಪಿಪಿಇ ಕಿಟ್ ಗಳು ಹರಿದು ಹೋಗಿದ್ದು, ಯಾವ ಧೈರ್ಯದ ಮೇಲೆ ವೈದ್ಯಕೀಯ ಸಿಬ್ಬಂದಿ ಸೇವೆಗೆ ಮುಂದಾಗಿದ್ದಾರೆ ಎಂಬುವುದು ದೊಡ್ಡ ಪ್ರಶ್ನೆಯಾಗಿದೆ.

Hubballi: Kims Hospital Staff Performing Duties Wearing A Torn PPE Kit

ಕೋವಿಡ್ ವಾರ್ಡ್ ನ ಐಸಿಯು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮಾತ್ರ ಗುಣಮಟ್ಟದ ಕಿಟ್ ಗಳನ್ನು ನೀಡಲಾಗಿದೆ. ಕೊರೊನಾ ಸೋಂಕಿತರ ಸಾಮಾನ್ಯ ವಾರ್ಡ್ ಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಶುಶ್ರೂಷಕರಿಗೆ ಎರಡು, ಮೂರನೇ ದರ್ಜೆಯ ಸುರಕ್ಷತಾ ಕಿಟ್ ಗಳನ್ನು ನೀಡಲಾಗಿದೆ.

Hubballi: Kims Hospital Staff Performing Duties Wearing A Torn PPE Kit

ಹರಿದ ಪಿಪಿಇ ಕಿಟ್ ಗಳು, ಮಧ್ಯದಲ್ಲಿ ಕಿಂಡಿ ಬಿದ್ದಿರುವ ಮಾಸ್ಕ್ ಗಳ ಚಿತ್ರಗಳನ್ನು ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳ ಸಂಘದ ಸದಸ್ಯರೇ ಬಹಿರಂಗಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+