ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿ: ಹುಬ್ಬಳ್ಳಿ ಕಿಮ್ಸ್‌ಗೆ ಶ್ಲಾಘನೆ

ಹುಬ್ಬಳ್ಳಿ, ಜೂನ್ 2: ಕರ್ನಾಟಕದಲ್ಲಿ ಮೊದಲ ಸಲ ಕೊರೊನಾ ವೈರಸ್ ರೋಗಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್‌ ವೈದ್ಯರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಭಿನಂಧನೆ ತಿಳಿಸಿದ್ದಾರೆ.

''ಕೋವಿಡ್19 ವಿರುದ್ಧ ರಾಜ್ಯದ ಸಮರದಲ್ಲಿ ಮತ್ತೊಂದು ಮಹತ್ವದ ಮುನ್ನಡೆ ಸಾಧಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಕೊರೋನಾ ವೈರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದೆ. ಈ ಸಾಧನೆ ಮಾಡಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರಿಗೆ ಅಭಿನಂದನೆಗಳು'' ಎಂದು ಡಾ ಸುಧಾಕರ್ ಟ್ವೀಟ್ ಮಾಡಿದ್ದಾರೆ.

''ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು 64 ವರ್ಷದ ಕೊರೊನ ಸೋಂಕಿತರೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿನಂದನೆಗಳು'' ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

KIMS Hubli has successfully treated a Covid19 patient through Plasma Therapy

64 ವರ್ಷದ 363ನೇ ಸೋಂಕಿತ ತೀವ್ರ ಉಸಿರಾಟ ತೊಂದರೆ ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ವ್ಯಕ್ತಿಗೆ ಎರಡು ಸಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಯಿತು. ಈಗ ಸಂಫೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಐಸಿಎಂಆರ್ ಕರ್ನಾಟಕಕ್ಕೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಸಕ್ಸಸ್ ಆಗಿದೆ. ಇದಕ್ಕೂ ಮುಂಚೆ ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಭರವಸೆ ಮೂಡಿಸಿತ್ತು. ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂತಸ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+