• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಿಮ್ಸ್ ನಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಯಶಸ್ವಿ ಕೊವಿಡ್-19 ಚಿಕಿತ್ಸೆ

|

ಹುಬ್ಬಳ್ಳಿ, ಸಪ್ಟೆಂಬರ್.14: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಜನರಲ್ಲಿ ಆತಂಕ ಹುಟ್ಟಿಸುತ್ತಿದೆ. ಇದರ ಮಧ್ಯೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕೊರೊನಾವೈರಸ್ ಸೋಂಕು ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ತಜ್ಞವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮತ್ತು ವಿಜ್ಞಾನ ಸಂಸ್ಥೆ(KIMS)ಯಲ್ಲಿ ಕೊರೊನಾವೈರಸ್ ಸೋಂಕು ತಗುಲಿದ್ದ 100 ಗರ್ಭಿಣಿಯರಿಗೆ ಯಶಸ್ವಿ ಚಿಕಿತ್ಸೆ ನೀಡಿದ್ದಾರೆ.

ಉತ್ತರ ಕರ್ನಾಟಕದ ಪಾಲಿಗೆ ಸಂಜೀವಿನಿಯಾಗಿರುವ ಹುಬ್ಬಳ್ಳಿ ಕಿಮ್ಸ್

"ಆರಂಭದಲ್ಲಿ ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವುದಕ್ಕೆ ನಮಗೂ ಆತಂಕವಾಗುತ್ತಿತ್ತು. ಆದರೆ ತದನಂತರದಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತವು ನೀಡಿದ ಸಹಾಯದಿಂದ ಯಶಸ್ವಿ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಾಯಿತು" ಎಂದು ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ. ರಾಮಲಿಂಗಪ್ಪ ತಿಳಿಸಿದ್ದಾರೆ.

   Sanjjanaa & Ragini to jail,ಕೊನೆಗೂ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ ಸಂಜನಾ, ರಾಗಿಣಿ

   ಕರ್ನಾಟಕದಲ್ಲಿ ಒಂದೇ ದಿನ 8244 ಜನರಿಗೆ ಸೋಂಕು:

   ಕಳೆದ 24 ಗಂಟೆಗಳಲ್ಲೇ ಕರ್ನಾಟಕದಲ್ಲಿ 8244 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 467689ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 8865 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಗೆ ಒಂದೇ ದಿನ 119 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆಯು 7384ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 361823 ಸೋಂಕಿತರು ಗುಣಮುಖರಾಗಿದ್ದು, 98463 ಸಕ್ರಿಯ ಪ್ರಕರಣಗಳಿವೆ.

   English summary
   Kims Treated And Discharged Over 100 Coronavirus Positive Pregnant Till Now.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X