ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ಜ.22, 23ರಂದು ಗಾಳಿಪಟ ಉತ್ಸವ

|
Google Oneindia Kannada News

ಹುಬ್ಬಳ್ಳಿ, ಜನವರಿ 21 : ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಹುಬ್ಬಳ್ಳಿ ಸಜ್ಜಾಗಿದೆ. 11 ದೇಶಗಳ 34 ಸ್ಪರ್ಧಿಗಳು ಎರಡು ದಿನಗಳ ಗಾಳಿಪಟ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜನವರಿ 22 ಮತ್ತು 23ರಂದು ಬೆಳಗ್ಗೆ 10 ರಿಂದ ರಾತ್ರಿ 8.30ರ ತನಕ ಆಕ್ಸ್ಫರ್ಡ್ ಕಾಲೇಜ್ ಹಿಂಭಾಗ ಕುಸುಗಲ್ ರಸ್ತೆ ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ ನಡೆಯಲಿದೆ.

ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಜನವರಿ 22ರ ಮಂಗಳವಾರ ಬೆಳಗ್ಗೆ 10.30ಕ್ಕೆ ಉತ್ಸವವನ್ನು ಉದ್ಘಾಟಿಸಲಿದ್ದಾರೆ. 11 ದೇಶಗಳ ಸ್ಪರ್ಧಿಗಳು ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

Kite Festival in Hubballi on January 22 and 23

ವಿವಿಧ ಗಾತ್ರ, ಆಕಾರ, ಬಣ್ಣಗಳ ಗಾಳಿಪಟಗಳು ಉತ್ಸವದಲ್ಲಿ ಗಮನ ಸೆಳೆಯಲಿವೆ. ಸಂಜೆಯ ನಂತರ ಎಲ್‌ಇಡಿ ಗಾಳಿಪಟಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಲಿವೆ.

ಗಾಳಿಪಟ ಉತ್ಸವದ ಜೊತೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಉತ್ಸವದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲು 30 ಮಳಿಗೆಗಳನ್ನು ನೀಡಲಾಗಿದೆ. ಹೊಸ ಮತದಾರರ ನೋಂದಣಿಗೂ ಕೂಡ ಅವಕಾಶ ಕಲ್ಪಿಸಲಾಗಿದೆ.

English summary
34 participants from 11 countries will participate in kite festival in Hubballi, North Karnataka. Kite Festival will be held on January 22 and 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X