ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕ್ ಪರ ಘೋಷಣೆ ಪ್ರಕರಣ: ಹುಬ್ಬಳ್ಳಿ ವಿದ್ಯಾರ್ಥಿಗಳು ಪೊಲೀಸ್ ಕಸ್ಟಡಿಗೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 25: ಕೆಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ವಿಡಿಯೋ ಹರಿಬಿಟ್ಟ ಪ್ರಕರಣದ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ 2ನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ.

ಫೆ 15ರಂದು ಹುಬ್ಬಳ್ಳಿಯ ಪ್ರತಿಷ್ಟಿತ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿದ್ದು, ಫೆ‌.17ರಂದು 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯ ನ್ಯಾಯಾಂಗ ಬಂಧನದ ಆದೇಶ ನೀಡಿತ್ತು.

"ಪಾಕಿಸ್ತಾನ್ ಜಿಂದಾಬಾದ್" ವಿಡಿಯೋ ಹರಿಬಿಟ್ಟ ಹುಬ್ಬಳ್ಳಿ ಕೆಎಲ್ ಇ ಕಾಲೇಜು ವಿದ್ಯಾರ್ಥಿಗಳು

ಈ ಹಿನ್ನೆಲೆಯಲ್ಲಿ ಮೂವರನ್ನು ಹಿಂಡಲಗಾ ಕಾರಾಗೃಹದಲ್ಲಿರಿಸಲಾಗಿದ್ದು, ಈ ಮೊದಲು ಹುಬ್ಬಳ್ಳಿಯ ಗೋಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಹುಬ್ಬಳ್ಳಿಯ ಗ್ರಾಮೀಣ ಠಾಣೆಗೆ ವರ್ಗಾವಣೆಯಾದ ನಂತರ ಪ್ರಕರಣಕ್ಕೆ ಸಂಬಂಧಿಸದಂತೆ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡುವಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

Kle College 3 Students Under Police Custody In Pro Pakistan Slogan Case

ಹುಬ್ಬಳ್ಳಿ ಸರ್ಕಾರಿ ಶಾಲೆ ಗೋಡೆ ಮೇಲೆ ಹುಬ್ಬಳ್ಳಿ ಸರ್ಕಾರಿ ಶಾಲೆ ಗೋಡೆ ಮೇಲೆ "ಪಾಕಿಸ್ತಾನ ಜಿಂದಾಬಾದ್"

ಪೊಲೀಸರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮೂವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಲು ಫೆ 25 ರಿಂದ 29ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

English summary
2nd JMFC court ordered to undertake Three Kashmiri students of kle college for police custody in relation to releasing video shouting "Pakistan zindabad" slogan
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X