ಕುಮಾರಸ್ವಾಮಿ ಅವರಿಂದ 200 ಎಕರೆ ಭೂ ಕಬಳಿಕೆ-ಹಿರೇಮಠ

Written By: Ramesh
Subscribe to Oneindia Kannada

ಹುಬ್ಬಳ್ಳಿ, ಅಕ್ಟೋಬರ್. 31 : 'ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು 200 ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.

ಭಾನುವಾರ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ 110 ಎಕರೆ ಗೋಮಾಳ ಸೇರಿದಂತೆ 200 ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆಂದು ಆರೋಪಿಸಿ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದರು.

Govt. urged to recover 200 acres of public land in ‘illegal possession’ of Kumaraswamy and family


'ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಮ್ಮಕ್ಕಿನಿಂದ 1987ರಿಂದಲೂ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ. ಕುಮಾರಸ್ವಾಮಿ ಸಂಬಂಧಿ, ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಅವರು ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ತಕ್ಷಣ ಮುಟ್ಟುಗೋಲು ಹಾಕಿ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು' ಎಂದು ಒತ್ತಾಯಿಸಿದರು.

'ದೇವೇಗೌಡರು ನೀರಾವರಿ ಸಚಿವರಾಗಿದ್ದ ಕಾಲದಿಂದಲೇ ಈ ಕಬಳಿಕೆ ನಡೆದಿದೆ. ಮಾಜಿ ಶಾಸಕ ಕೆ.ಸಿ.ಲಿಂಗಪ್ಪ ಅಂದಿನ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಬಳಿಕ ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರು ಲೋಕಾಯುಕ್ತಕ್ಕೆ ಈ ಕುರಿತು ದೂರು ನೀಡಿದ್ದರು' ಎಂದು ಹೇಳಿದರು.

'ಲೋಕಾಯುಕ್ತ ತನಿಖೆ ಬಳಿಕ ಸರ್ಕಾರಿ ಭೂಮಿ ಒತ್ತುವರಿ ಆಗಿರುವುದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆದೇಶವಿದೆ. ಆದರೆ, ರಾಮನಗರ ಜಿಲ್ಲಾಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ. ಬಡವರಿಗೆ ತಲುಪಬೇಕಾದ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆಯಬೇಕು' ಎಂದು ಒತ್ತಾಯಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
NCPNR founder-president S.R. Hiremath press conference here on October 30, urged the State government to take swift action to recover nearly 200 acres of public land that is allegedly in the illegal possession of the former Chief Minister H.D. Kumaraswamy and his family members in Ramanagaram district.
Please Wait while comments are loading...