ಕೋಳಿವಾಡದಲ್ಲಿ ಸಮಸ್ಯೆಗಳ ಸರಮಾಲೆ: ಕ್ಯಾರೆ ಅನ್ನುತ್ತಿಲ್ಲ ಕ್ಷೇತ್ರದ ಜನಪ್ರತಿನಿಧಿಗಳು, ಬೇಸತ್ತ ಜನರು ಮಾಡಿದ್ದೇನು?
ಸಚಿವರ ತವರು ಕ್ರತ್ರದಲ್ಲೇ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಹಾಗಾದರೆ ಏನೆಲ್ಲ ಸಮಸ್ಯೆಗಳು ಇವೆ ಅನ್ನೋದನ್ನು ನೀವೆ ನೋಡಿ.
ಹುಬ್ಬಳ್ಳಿ, ಫೆಬ್ರವರಿ, 08: ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರ ತವರು ಕ್ಷೇತ್ರದಲ್ಲಿಯೇ ಸಮಸ್ಯೆಗಳ ಸರಮಾಲೆಯೆ ಇದೆ. ತುಂಬಾ ದಿನಗಳಿಂದ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಪ್ರತಿಭಟನೆ ನಡೆಸುತ್ತಲೇ ಇದ್ದೇವೆ. ಆದರೂ ಕೂಡ ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈ ಬಗ್ಗೆ ಕ್ಯಾರೇ ಅನ್ನುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಕೋಳಿವಾಡವು ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದ ಗ್ರಾಮವಾಗಿದೆ. ಈ ಭಾಗದ ಜನರು ಕುಡಿಯುವ ನೀರಿಗಾಗಿ, ಮೂಲಭೂತ ಸೌಕರ್ಯಗಳಿಗಾಗಿ ತಮ್ಮ ಕೆಲಸಗಳನ್ನು ಬಿಟ್ಟು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಕೋಳಿವಾಡ ಗ್ರಾಮದಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಗ್ರಾಮದ ಆಯಕಟ್ಟಿನ ಜಾಗದಲ್ಲಿ ನಿರ್ಮಾಣ ಮಾಡುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಅಧಿಕಾರಿಗಳ ವಿರುದ್ಧ ಜನಾಕ್ರೋಶ
ಅಂಗನವಾಡಿ ಹಾಗೂ ದೇವಸ್ಥಾನ ಸಮೀಪದಲ್ಲಿಯೇ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಇದನ್ನು ಬೇರೆ ಕಡೆಯಲ್ಲಿ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಹೀಗಿದ್ದರೂ ಕೂಡ ಗ್ರಾಮಸ್ಥರ ವಿರೋಧದ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ.

ಪ್ರತಿ ನಿತ್ಯವೂ ಹೋರಾಟ
ಇನ್ನು ಗ್ರಾಮಸ್ಥರು ಸಚಿವರಿಗೆ, ಜಿಲ್ಲಾಡಳಿತಕ್ಕೆ ಹಾಗೂ ತಾಲೂಕು ಆಡಳಿತಕ್ಕೆ ಪತ್ರ ಬರೆದಿದ್ದರು. ಆದರೂ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದು ನಿಜಕ್ಕೂ ಗ್ರಾಮದ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಘನ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಚಿಕ್ಕಮಕ್ಕಳು ಇರುವ ಅಂಗನವಾಡಿಯ ಸಮೀಪದಲ್ಲಿಯೇ ನಿರ್ಮಾಣ ಮಾಡುವುದು ಬೇಡ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಪ್ರತಿ ನಿತ್ಯವೂ ಕೆಲಸ ಕಾರ್ಯಗಳನ್ನು ಬಿಟ್ಟು ಹೋರಾಟ ಮಾಡುವಂತಾಗಿರುವುದು ನಿಜಕ್ಕೂ ಗ್ರಾಮದ ಜನರ ಸಂಕಷ್ಟಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಇಂತಹದೊಂದು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಮುತುವರ್ಜಿಯಿಂದ ಗ್ರಾಮಸ್ಥರ ಸಮಸ್ಯೆ ಬಗೆಹರಿಸುವ ಮೂಲಕ ಜನರ ಹಿತವನ್ನು ಕಾಪಾಡುವ ಕೆಲಸ ಮಾಡಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications