ಹುಬ್ಬಳ್ಳಿಯಲ್ಲಿ ಅವ್ಯವಸ್ಥೆಯ ಆಗರವಾದ ಕೋಟ್ಯಂತರ ರೂಪಾಯಿ ವೆಚ್ಚದ ಘನ ತ್ಯಾಜ್ಯ ವಿಲೇವಾರಿ ಘಟಕ
ಹುಬ್ಬಳ್ಳಿ, ಜನವರಿ, 30: ಕೋಟ್ಯಂತರ ರೂಪಾಯಿ ವ್ಯಯ ಮಾಡಿ ಕಾರವಾರ ರಸ್ತೆಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಘನ ತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆಯ ಆಗರವಾಗಿದೆ.
ಮಹಾನಗರ ಪಾಲಿಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಯೋಜನೆ ಇದೀಗ ಹೊಳೆಯಲ್ಲಿ ಹೋಮ ಮಾಡಿದಂತಾಗಿದೆ. ಇದರಿಂದ ಕಾರವಾರ ರಸ್ತೆಯಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ಅವ್ಯವಸ್ಥೆಯ ಆಗರವಾಗಿದೆ. ಹಸಿ ಕಸ ಹಾಗೂ ಒಣ ಕಸವನ್ನು ಸರಿಯಾಗಿ ಬೇರ್ಪಡಿಸದೇ ಬೇಕಾಬಿಟ್ಟಿಯಾಗಿ ಎಸೆಯಲಾಗುತ್ತಿದ್ದು, ಇದನ್ನು ಯಾರು ಕೂಡ ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ.
ಕೋಟ್ಯಂತರ ರೂಪಾಯಿ ಹಣ ಪೋಲು
ಹಾಗೆಯೇ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಪೋಲು ಮಾಡುತ್ತಿದೆ. ಇನ್ನು ಏಕಾಏಕಿ ಅವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಮೂಲಕ ಜನರಲ್ಲಿ ಆತಂಕವನ್ನುಂಟು ಮಾಡುವ ಕೆಲಸವನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಮಾಡುತ್ತಿದ್ದಾರೆ. ಈ ಕುರಿತು ಸಾರ್ವಜನಿಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಮೂಖಪ್ರೇಕ್ಷಕರಂತೆ ಕುಳಿತಿರುವ ಅಧಿಕಾರಿಗಳು
ರಾಜ್ಯದಲ್ಲಿ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇಂತಹದೊಂದು ಅವ್ಯವಸ್ಥೆ ತಾಂಡವವಾಡುತ್ತಿದೆ. ಆದರೂ ಕೂಡ ಅಧಿಕಾರಿಗಳು ಮಾತ್ರ ಮೂಖಪ್ರೇಕ್ಷಕರಂತೆ ಕುಳಿತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ಕಂಡು ಕಾಣದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತ್ಯಾಜ್ಯ ವಿಲೇವಾರಿ ಬಳಿಕ ಗ್ಯಾಸ್ ಸೇರಿದಂತೆ ಹಲವಾರು ಪುನರ್‌ಬಳಕೆ ಉತ್ಪನ್ನಗಳನ್ನು ಸಿದ್ಧಪಡಿಸುವ ಹುಸಿ ಆಶ್ವಾಸನೇ ನೀಡುತ್ತಿದ್ದಾರೆ. ಆದರೆ ಯಾವೊಂದು ಮಾತು ಕೂಡ ಕಾರ್ಯರೂಪಕ್ಕೆ ಬರುತ್ತಿಲ್ಲ ಎನ್ನುವ ಆಕ್ರೋಶ ವ್ಯಕ್ತವಾಗುತ್ತಿದೆ.

ಒಟ್ಟಿನಲ್ಲಿ ಇಂತಹದೊಂದು ಅವ್ಯವಸ್ಥೆಗೆ ಬ್ರೇಕ್ ಹಾಕಬೇಕಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಕೂಡಲೇ ಸರಿಯಾದ ನಿರ್ವಹಣೆ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications