ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹ ಪೀಡಿತರಿಗೆ ಪರಿಹಾರಕ್ಕಾಗಿ ಕಾಂಗ್ರೆಸ್ ನಿಂದ ಪ್ರಧಾನಿಗೆ ಪತ್ರ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜನವರಿ 02: ರಾಜ್ಯದ ಜನರು ಸತತವಾಗಿ ಸುರಿದ ಮಳೆ, ಪ್ರವಾಹದಿಂದ ತತ್ತರಿಸಿ‌ ಹೋಗಿದ್ದು, ಈವರೆಗೆ ಕೇಂದ್ರದಿಂದ ಸೂಕ್ತ ಪರಿಹಾರ ಬಂದಿಲ್ಲ. ಕೂಡಲೇ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಚೇರಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿ ನಗರದ ಲೋಕಸಭಾ ಸದಸ್ಯ ಕಚೇರಿಗೆ ಆಗಮಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ರಾಜ್ಯದಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದ್ದು, ಜನರು ಬೀದಿಗೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಲಾಡ್ಜ್ ಗೆ ಬಂದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಹುಬ್ಬಳ್ಳಿ ಮಹಿಳೆಯರುಲಾಡ್ಜ್ ಗೆ ಬಂದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಹುಬ್ಬಳ್ಳಿ ಮಹಿಳೆಯರು

ಈ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಲಿಲ್ಲ, ಸೂಕ್ತ ಪರಿಹಾರವನ್ನೂ ಕೊಟ್ಟಿಲ್ಲ. ಅಲ್ಲದೇ ರಾಜ್ಯಕ್ಕೆ ಪ್ರವಾಸ ಕೈಕೊಳ್ಳಬೇಕೆಂದು ಹಲವಾರು ಪ್ರತಿಭಟನೆಗಳು ಕೂಡಾ ನಡೆದರೂ ರಾಜ್ಯಕ್ಕೆ ಆಗಮಿಸಲಿಲ್ಲ.

Letter From Congress To Prime Minister For Relief For Flood Victims

ಅಂದು ಜನರ ಜನರ ಕಷ್ಟ ಕೇಳಲು ಆಗಮಿಸದ ಪ್ರಧಾನಿ ಇದೀಗ ನೆರೆ ತಗ್ಗಿದ ಮೇಲೆ ಆಗಮಿಸಿರುವುದು ಖಂಡನೀಯ. ಕೂಡಲೇ ರಾಜ್ಯಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಜೊತೆಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಾಸ್ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಬಿಳಿ ಗುಲಾಬಿ ಹೂವನ್ನು ಕೇಂದ್ರ ಸಚಿವರ ಕಚೇರಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ವಿಭಿನ್ನವಾಗಿ ಮನವಿ ಸಲ್ಲಿಸಿದರು.

English summary
Women Congress activists today appealed to the Prime Minister Narendra Modi through the office of Union Minister Pranhad Joshi to demand immediate relief Fund for flood victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X