• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಂದ್ರಗ್ರಹಣ 2022: ಹುಬ್ಬಳ್ಳಿಯಲ್ಲಿ ಯಾವೆಲ್ಲ ದೇವಸ್ಥಾನಗಳು ಬಂದ್‌? ಇಲ್ಲಿದೆ ವಿವರ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ನವೆಂಬರ್‌ 08: ಮಂಗಳವಾರ (ನವೆಂಬರ್ 8) ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಹಾಗೆಯೇ ನಗರದ ಸಾಯಿ ಮಂದಿರ, ಚಂದ್ರಮೌಳೇಶ್ವರ ದೇವಸ್ಥಾನಗಳು ಸೇರಿದಂತೆ ಹಲವು ದೇವಸ್ಥಾನಗಳನ್ನು ಬಂದ್ ಮಾಡಿ ಭಕ್ತರಿಗೆ ದರ್ಶನವನ್ನು ನಿಷೇಧಿಸಲಾಗಿದೆ.

ಚಂದ್ರ ಗ್ರಹಣದ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಚಂದ್ರ ಗ್ರಹಣದ ನಂತರ ದೇವಾಲಯದ ಗರ್ಭ ಗುಡಿಯ ಸ್ವಚ್ಛತೆ, ಗ್ರಹಣದ ನಂತರ ನಡೆಯುವ ಅಭಿಷೇಕ ಮತ್ತು ಮಹಾ ಮಂಗಳಾರತಿ ಹಿನ್ನೆಲೆ ಭಕ್ತರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಇನ್ನೂ, ಸಿದ್ಧಾರೂಢ ಮಠದಲ್ಲಿ ಗ್ರಹಣ ವೇಳೆ ಬಾಗಿಲು ಬಂದ್ ಮಾಡುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಎಂದಿನಂತೆ ಪ್ರಸಾದ ವ್ಯವಸ್ಥೆಯೂ ಇರಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಅಕ್ಟೋಬರ್ ತಿಂಗಳಿನಲ್ಲಿ ಸೂರ್ಯ ಗ್ರಹಣದ ವೇಳೆ ಕೂಡ ಸಿದ್ಧಾರೂಢ ಮಠದಲ್ಲಿ ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಚಂದ್ರಗ್ರಹಣ 2022: ಹೊರನಾಡಿನ ದೇವಸ್ಥಾನದಲ್ಲಿ ಪೂಜೆ ವ್ಯವಸ್ಥೆ ಹೇಗಿದೆ?ಚಂದ್ರಗ್ರಹಣ 2022: ಹೊರನಾಡಿನ ದೇವಸ್ಥಾನದಲ್ಲಿ ಪೂಜೆ ವ್ಯವಸ್ಥೆ ಹೇಗಿದೆ?

ಧಾರವಾಡದಲ್ಲೂ ಕೂಡ ಹೊರವಲಯದ ಸೋಮೇಶ್ವರ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಗ್ರಹಣದ ಮುಕ್ತಾಯದ ನಂತರ ದೇವಸ್ಥಾನವನ್ನು ಶುಚಿಗೊಳಿಸಿ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ನೀಡಲಾಗುವುದು. ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ವಿವಿಧೆಡೆ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಕೆಲ ದಿನಗಳ ಹಿಂದೆ ಕೇತುಗ್ರಸ್ತ ಸೂರ್ಯಗ್ರಹಣವು ಸಂಭವಿಸಿತ್ತು. ಇದೀಗ ರಾಹುಗ್ರಸ್ತ ಚಂದ್ರಗ್ರಹಣವು ಸಂಭವಿಸಲಿದೆ. ಇಂದು ಸಂಭವಿಸಲಿರುವ ಚಂದ್ರಗ್ರಹಣವು ಈ ವರ್ಷದ ಕಟ್ಟಕಡೆಯ ಗ್ರಹಣವಾಗಿದೆ.

ಮಧ್ಯಾಹ್ನ 1:30ಕ್ಕೆ ಮಹಾಮಂಗಳಾರತಿ

ಮಂಗಳವಾರ (ನವೆಂಬರ್ 08) ಚಂದ್ರಗ್ರಹಣ ಹಿನ್ನೆಲೆ ನಾಡಿನ ಸುಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11ರಿಂದ 12 ಗಂಟೆವರೆಗೆ ಮಾತ್ರ ಪ್ರಸಾದದ ವ್ಯವಸ್ಥೆ ಇರಲಿದೆ. ಅದಾದ ಬಳಿಕ ಗ್ರಹಣ ಮುಗಿಯುವವರೆಗೂ ಮತ್ತೆ ಪ್ರಸಾದದ ಇರುವುದಿಲ್ಲ. ಮಧ್ಯಾಹ್ನ 1:30ಕ್ಕೆ ಮಹಾಮಂಗಳಾರತಿ ನಡೆಯಲಿದ್ದು, ಸಂಜೆ 4ಕ್ಕೆ ಅರ್ಚನೆ ಇರಲಿದೆ. ಆದರೆ ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ದಿ ಕಾರ್ಯದ ನಂತರವೇ ಪೂಜೆ-ಪ್ರಸಾದದ ವ್ಯವಸ್ಥೆ ಇರುತ್ತದೆ. ಗ್ರಹಣ ಆರಂಭದಿಂದ ಅಂತ್ಯದವರೆಗೂ ಅನ್ನಪೂರ್ಣೇಶ್ವರಿಗೆ ನಿರಂತರ ಅಭಿಷೇಕ ಮಾಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಇನ್ನು ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಎಂದಿನಂತೆ ಪೂಜೆ ಇರುತ್ತದೆ. ಆದರೆ ಮಧ್ಯಾಹ್ನದ ಊಟ ಇರುವುದಿಲ್ಲ. ಗ್ರಹಣದ ವೇಳೆಯೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪೂಜೆ-ಪ್ರಸಾದ ಸೇರಿದಂತೆ ಯಾವುದೇ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಗ್ರಹಣದ ಬಳಿಕ ಪೂಜೆ-ಪ್ರಸಾದ ಎಂದಿನಂತೆ ಇರಲಿದೆ.

ದ.ಕನ್ನಡದ ದೇವಸ್ಥಾನಗಳಿಂದ ಪ್ರಕಟಣೆ

ಮಂಗಳವಾರ (ನವೆಂಬರ್ 8) ಚಂದ್ರಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ. ಚಂದ್ರ ಗ್ರಹಣ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 8ರಂದು ಯಾವುದೇ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಹಣ ಸ್ಪರ್ಶ ಸಮಯವಾದ 2:39ರಿಂದ ಗ್ರಹಣ ಮೋಕ್ಷ ಸಮಯ 6:19ರತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Lunar Eclipse 2022; Which temples are closed in Hubballi? Here see detail

ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲೂ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ. ಇನ್ನು ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನವೆಂಬರ್ 8ರಂದು ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ.

English summary
Lunar eclipse across state today, imposed on devotees to God Darshan in major temples of Hubballi-Dharwad. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X