• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking; ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

|
Google Oneindia Kannada News

ಹುಬ್ಬಳ್ಳಿ, ಜುಲೈ 30; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು.

   Congress ಪಕ್ಷ ಸೇರಿಕೊಂಡ ಮಧು ಬಂಗಾರಪ್ಪ | Siddaramaiah | DK Shivakumar | Hubli | Oneindia Kannada

   ಶುಕ್ರವಾರ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

   ಆನಂದ್ ಅಸ್ನೋಟಿಕರ್‌ಗೆ ಮಹತ್ವದ ಸಲಹೆ ನೀಡಿದ ಮಧು ಬಂಗಾರಪ್ಪಆನಂದ್ ಅಸ್ನೋಟಿಕರ್‌ಗೆ ಮಹತ್ವದ ಸಲಹೆ ನೀಡಿದ ಮಧು ಬಂಗಾರಪ್ಪ

   ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ನಾಯಕರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಧಾರವಾಡ, ಹುಬ್ಬಳ್ಳಿಯ ಕೆಲವು ನಾಯಕರು ಸಹ ಪಕ್ಷಕ್ಕೆ ಸೇರ್ಪಡೆಗೊಂಡರು.

    ಮಧು ಬಂಗಾರಪ್ಪ ಕಾಂಗ್ರೆಸ್‌ಗೆ; ಕುಮಾರಸ್ವಾಮಿ ಪ್ರತಿಕ್ರಿಯೆ ಮಧು ಬಂಗಾರಪ್ಪ ಕಾಂಗ್ರೆಸ್‌ಗೆ; ಕುಮಾರಸ್ವಾಮಿ ಪ್ರತಿಕ್ರಿಯೆ

   2021ರ ಮಾರ್ಚ್‌ನಲ್ಲಿಯೇ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಈ ಕುರಿತು ಚರ್ಚೆ ನಡೆಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದ ಹಲವು ಹೋರಾಟದಲ್ಲಿ ಪಾಲ್ಗೊಂಡಿದ್ದರು.

   ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು? ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು?

   ಆದರೆ ಕೋವಿಡ್ ಪರಿಸ್ಥಿತಿಯ ಕಾರಣದಿಂದಾಗಿ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

   2018ರ ಚುನಾವಣೆ ಸೋಲು

   2018ರ ಚುನಾವಣೆ ಸೋಲು

   ಮಧು ಬಂಗಾರಪ್ಪ 2013ರ ಚುನಾವಣೆಯಲ್ಲಿ ಸೊರಬದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಸಹೋದರ ಮತ್ತು ಬಿಜೆಪಿ ಅಭ್ಯರ್ಥಿಯಾದ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದರು. ಜೆಡಿಎಸ್ ಪಕ್ಷ ತೊರೆದಿರುವ ಅವರು ಈಗ ಕಾಂಗ್ರೆಸ್ ಸೇರಿದ್ದಾರೆ.

   ಒಮ್ಮತದ ಅಭ್ಯರ್ಥಿಯಾಗಿದ್ದರು

   ಒಮ್ಮತದ ಅಭ್ಯರ್ಥಿಯಾಗಿದ್ದರು

   2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದತು. ಮಧು ಬಂಗಾರಪ್ಪ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಿಜೆಪಿಯ ಬಿ. ವೈ. ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದರು. ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದರು. ಈಗ ಕಾಂಗ್ರೆಸ್ ಸೇರಿದ್ದಾರೆ.

   ಶಿವಮೊಗ್ಗ ಜೆಡಿಎಸ್‌ಗೆ ಹಿನ್ನಡೆ

   ಶಿವಮೊಗ್ಗ ಜೆಡಿಎಸ್‌ಗೆ ಹಿನ್ನಡೆ

   ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಭದ್ರಾವತಿಯಲ್ಲಿ ಪಕ್ಷದ ನಾಯಕ ಅಪ್ಪಾಜಿ ಗೌಡ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ಆರ್. ಎಂ. ಮಂಜುನಾಥ ಗೌಡ ಸಹ ಕಾಂಗ್ರೆಸ್‌ಗೆ ಬಂದಿದ್ದಾರೆ. ಇದರಿಂದಾಗಿ 2023ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷಕ್ಕೆ ಸವಾಲು ಎದುರಾಗಿದೆ. 2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮೂವರು ಜೆಡಿಎಸ್ ಶಾಸಕರು ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಒಂದು ಸ್ಥಾನ ಸಹ ಗೆದ್ದಿರಲಿಲ್ಲ.

   ಸೊರಬ ಕ್ಷೇತ್ರದ ಚಿತ್ರಣ ಬದಲು

   ಸೊರಬ ಕ್ಷೇತ್ರದ ಚಿತ್ರಣ ಬದಲು

   ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಿಂದಾಗಿ ಸೊರಬ ಕ್ಷೇತ್ರದ ರಾಜಕೀಯ ಚಿತ್ರಣವೇ ಬದಲಾಗಿದೆ. 2018ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದ ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಆಗ ಮಧು ಬಂಗಾರಪ್ಪ ಜೆಡಿಎಸ್‌ನಲ್ಲಿದ್ದರು. ಈಗ ಸಹೋದರರಿಬ್ಬರು ರಾಷ್ಟ್ರೀಯ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

   ಶಿವಮೊಗ್ಗ ಕಾಂಗ್ರೆಸ್‌ಗೆ ಬಲ

   ಶಿವಮೊಗ್ಗ ಕಾಂಗ್ರೆಸ್‌ಗೆ ಬಲ

   ಶಿವಮೊಗ್ಗ ಜಿಲ್ಲೆಯ ಯುವ ನಾಯಕರಲ್ಲಿ ಮಧು ಬಂಗಾರಪ್ಪ ಸಹ ಒಬ್ಬರು. ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೊಂದಿದೆ. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಳಿಕ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಲಿದೆ. 2018ರ ಚುನಾವಣೆಯಲ್ಲಿ ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೇಗೆ ಹೆಚ್ಚಲಿದೆ? ಎಂದು ಕಾದು ನೋಡಬೇಕಿದೆ.

   English summary
   Soraba former MLA and former CM late S. Bangarappaa son Madhu Bangarappa joined Congress party at Hubballi, Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X