• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜುಲೈ 30ರಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

|
Google Oneindia Kannada News

ಹುಬ್ಬಳ್ಳಿ, ಜುಲೈ 28; ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜುಲೈ 30ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ.

ಹುಬ್ಭಳ್ಳಿಯ ಗೋಕುಲ ಗಾರ್ಡನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮಧು ಬಂಗಾರಪ್ಪ ಪಕ್ಷವನ್ನು ಸೇರಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆನಂದ್ ಅಸ್ನೋಟಿಕರ್‌ಗೆ ಮಹತ್ವದ ಸಲಹೆ ನೀಡಿದ ಮಧು ಬಂಗಾರಪ್ಪಆನಂದ್ ಅಸ್ನೋಟಿಕರ್‌ಗೆ ಮಹತ್ವದ ಸಲಹೆ ನೀಡಿದ ಮಧು ಬಂಗಾರಪ್ಪ

ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿ ಮಠ ಈ ಕುರಿತು ಮಾಹಿತಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಕಿರಣ್ ಹಿರೇಮಠ, ಜೆಡಿಎಸ್ ಮುಖಂಡ ಬಸವರಾಜ ಮಾಯಕರ್ ಸಹ ಕಾಂಗ್ರೆಸ್ ಸೇರಲಿದ್ದಾರೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು? ಸಿದ್ದರಾಮಯ್ಯ ಭೇಟಿ ಬಳಿಕ ಮಧು ಬಂಗಾರಪ್ಪ ಹೇಳಿದ್ದೇನು?

ಮಾರ್ಚ್‌ ತಿಂಗಳಿನಲ್ಲಿಯೇ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಈ ಕುರಿತು ಚರ್ಚೆಯನ್ನು ನಡೆಸಿದ್ದರು. ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಕೋವಿಡ್ ಕಾರಣದಿಂದಾಗಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ. ಈಗ ಜುಲೈ 30ರಂದು ಬೆಂಬಲಿಗರ ಜೊತೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.

 ಮಧು ಬಂಗಾರಪ್ಪ ಕಾಂಗ್ರೆಸ್‌ಗೆ; ಕುಮಾರಸ್ವಾಮಿ ಪ್ರತಿಕ್ರಿಯೆ ಮಧು ಬಂಗಾರಪ್ಪ ಕಾಂಗ್ರೆಸ್‌ಗೆ; ಕುಮಾರಸ್ವಾಮಿ ಪ್ರತಿಕ್ರಿಯೆ

ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು

ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು

2013ರ ಚುನಾವಣೆಯಲ್ಲಿ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 58,541 ಮತಗಳನ್ನು ಪಡೆದು ಸಹೋದರ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕುಮಾರ್ ಬಂಗಾರಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.

2018ರ ಚುನಾವಣೆ ಸೋಲು

2018ರ ಚುನಾವಣೆ ಸೋಲು

2018ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದ ಚಿತ್ರಣ ಬದಲಾಯಿತು. ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದರು. ಚುನಾವಣೆಯಲ್ಲಿ 72,091 ಮತಗಳನ್ನು ಪಡೆದು ಗೆದ್ದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಧು ಬಂಗಾರಪ್ಪ 58,805 ಮತಗಳನ್ನು ಪಡೆದು ಸೋತರು.

ಕುಮಾರಸ್ವಾಮಿ ಆಪ್ತರಾಗಿದ್ದರು

ಕುಮಾರಸ್ವಾಮಿ ಆಪ್ತರಾಗಿದ್ದರು

2018ರ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ತಮ್ಮ ಆಪ್ತರಾಗಿದ್ದ ಮಧು ಬಂಗಾರಪ್ಪರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು.

  ಸಿಎಂ ಆಗ್ತಿಂದ್ದಂತೆ ವಿರೋಧಪಕ್ಷಕ್ಕೆ ಟಾಂಗ್ ಕೊಟ್ಟ ಬಸವರಾಜ್ ಬೊಮ್ಮಾಯಿ | Oneindia Kannada
  ಲೋಕಸಭೆ ಚುನಾವಣೆ ಸೋಲು

  ಲೋಕಸಭೆ ಚುನಾವಣೆ ಸೋಲು

  2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಶಿವಮೊಗ್ಗದಿಂದ ಕಣಕ್ಕಿಳಿದರು. ಬಿಜೆಪಿಯ ಬಿ. ವೈ. ರಾಘವೇಂದ್ರ ವಿರುದ್ಧ ಸೋಲು ಕಂಡರು. ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಮಧು ಬಂಗಾರಪ್ಪ ದೂರವಾದರು.

  English summary
  Former chief minister late S. Bangarappaa son Madhu Bangarappa will join Congress on July 30 at Hubballi.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X