ಪೌರತ್ವ ಕಾಯ್ದೆ ವಿರೋಧಿಸಿ ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ, ಡಿಸೆಂಬರ್ 23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳವಾರ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲು ಅಂಜುಮನ್ ಇಸ್ಲಾಂ ಸಂಸ್ಥೆ ಮುಂದಾಗಿದೆ. ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರವಾಗಿ ಸಭೆ ನಡೆಸಿ ಚರ್ಚೆ ನಡೆಸಿದ ಮುಸ್ಲಿಂ ಸಮಾಜದ ಮುಖಂಡರು, ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಡಿಸೆಂಬರ್ 24ರಂದು ಅಂಬೇಡ್ಕರ್ ಸರ್ಕಲ್ ನಿಂದ ತಹಶೀಲ್ದಾರರ ಕಚೇರಿವರೆಗೆ ಪ್ರತಿಭಟನೆ ನಡೆಸುವುದಾಗಿ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸೂಪ್ ಸವಣೂರ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆ, ವಿವಿಧ ಸಂಘಟನೆಗಳು, ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ. ಆದರೆ ಈ ಪ್ರತಿಭಟನೆಗೆ ಪೊಲೀಸ್ ಇಲಾಖೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ.












Click it and Unblock the Notifications