ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

700 ಕ್ಕೂ ಹೆಚ್ಚು ಹೂಡಿಕೆದಾರರ ಆಗಮನ ನಿರೀಕ್ಷೆ: ಸಚಿವ ಜಗದೀಶ ಶೆಟ್ಟರ್

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 13: ಎರಡನೇ ಹಂತದ ನಗರಗಳಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ "ಇನ್ ವೆಸ್ಟ್ ಕರ್ನಾಟಕ' ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇಶದ ವಿವಿಧ ಭಾಗಗಳಿಂದ ಸುಮಾರು 700 ಕ್ಕೂ ಹೆಚ್ಚು ಹೂಡಿಕೆದಾರರು ಆಗಮಿಸುವ ನಿರೀಕ್ಷೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಡೆನಿಸನ್ಸ್ ಹೋಟೆಲ್ ನಲ್ಲಿ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಜಗದೀಶ್ ಶೆಟ್ಟರ್, ಸಮಾವೇಶದಲ್ಲಿ ಭಾಗವಹಿಸುವುದಾಗಿ ಈಗಾಗ 650 ಕ್ಕೂ ಹೆಚ್ಚು ಉದ್ಯಮಿಗಳು ಖಚಿತಪಡಿಸಿದ್ದಾರೆ.

 2ನೇ ಹಂತದ ನಗರಗಳಲ್ಲಿ ಮೊದಲ ಬಾರಿಗೆ ಹೂಡಿಕೆದಾರರ ಸಮಾವೇಶ; ಸಜ್ಜಾಗಿದೆ ಹುಬ್ಬಳ್ಳಿ 2ನೇ ಹಂತದ ನಗರಗಳಲ್ಲಿ ಮೊದಲ ಬಾರಿಗೆ ಹೂಡಿಕೆದಾರರ ಸಮಾವೇಶ; ಸಜ್ಜಾಗಿದೆ ಹುಬ್ಬಳ್ಳಿ

Minister Jagadish Shettar Said 700 Investors Expected To Arrive In Invest Karnataka

ಸುಮಾರು 700 ಜನ ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. 100 ಕ್ಕೂ ಹೆಚ್ಚು ಆಹ್ವಾನಿತರು ಆಗಮಿಸುವರು. ಹೈದ್ರಾಬಾದ್, ಮುಂಬೈ, ಗುವಾಹತಿ ಸೇರಿದಂತೆ ದೇಶದ ಹಲವು ನಗರಗಳಿಂದಲೂ ಉದ್ಯಮಿಗಳು ಬರಲಿದ್ದಾರೆ ಎಂದು ತಿಳಿಸಿದ್ದಾರೆ.

Minister Jagadish Shettar Said 700 Investors Expected To Arrive In Invest Karnataka

ಉತ್ತರ ಕರ್ನಾಟಕದ ಪರಿಚಯ ಮಾಡಿಕೊಟ್ಟು ಇಲ್ಲಿ ಹೂಡಿಕೆ ಮತ್ತು ಕೈಗಾರಿಕಾ ಸ್ಥಾಪನೆಯ ಅವಕಾಶ ಮತ್ತು ಸಾಧ್ಯತೆಗಳ ವಿವರ ಮಾಹಿತಿ ನೀಡಲಾಗುವುದು .ಮಧ್ಯಾಹ್ನ ಭೋಜನ ವಿರಾಮದ ನಂತರ ಆಸಕ್ತ ಉದ್ಯಮಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು. ಹೂಡಿಕೆಯ ಬಗ್ಗೆ ಸಂಪೂರ್ಣ ವಿವರ ಒದಗಿಸಲಾಗುವುದು ಎಂದರು.

English summary
More than 700 investors Coming from different parts of the country are expected to arrive in Hubballi, said that large and medium industries minister Jagadish Shettar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X