ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರನ್ನು ಕೈಬಿಟ್ಟಿಲ್ಲ: ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್‌, 02: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಅಲ್ಪಸಂಖ್ಯಾತ ಮತಗಳನ್ನು ಡಿಲೀಟ್ ಮಾಡಿದ್ದು ಸುಳ್ಳು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮತಗಳನ್ನು ಡಿಲೀಟ್ ಮಾಡಿರುವ ಪ್ರಕರಣದ ಕುರಿತು ಈಗಾಗಲೇ ಚುನಾವಣಾ ಆಯೋಗ ಗಮನಹರಿಸಿದೆ. ಕೇಂದ್ರ ಚುನಾವಣಾ ಆಯೋಗದ ನೇತೃತ್ವದಲ್ಲಿ ಮತಗಳನ್ನು ಡಿಲೀಟ್ ಮಾಡುವುದು ಹಾಗೂ ಸೇರಿಸುವ ಪ್ರಕ್ರಿಯೆ ಆಗಲಿದೆ. ಈ ಬಗ್ಗೆ ಎಲ್ಲ ರೀತಿಯಲ್ಲಿ ತನಿಖೆ ನಡೆಯಲಿದೆ. ಭಾರತೀಯ ಚುನಾವಣೆ ಆಯೋಗ ಈ ಬಗ್ಗೆ ಕಾಳಜಿ ವಹಿಸಿದ್ದು, ಎಲ್ಲೆಲ್ಲಿ ದೂರುಗಳು ಬಂದಿವೆ ಅಲ್ಲಿ ತನಿಖೆ ನಡೆಸುತ್ತಿದೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮಂಗಳೂರಿನಲ್ಲಿ ಎಂಟು ವಿಧಾನಸಭಾ ಸ್ಥಾನಕ್ಕೆ ಕಣ್ಣಿಟ್ಟ‌ 44 ಕಾಂಗ್ರೆಸ್ ಅಭ್ಯರ್ಥಿಗಳುಮಂಗಳೂರಿನಲ್ಲಿ ಎಂಟು ವಿಧಾನಸಭಾ ಸ್ಥಾನಕ್ಕೆ ಕಣ್ಣಿಟ್ಟ‌ 44 ಕಾಂಗ್ರೆಸ್ ಅಭ್ಯರ್ಥಿಗಳು

ಚುನಾವಣಾ ಆಯೋಗದಿಂದ ಮೇಲ್ವಿಚಾರಣೆ

ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸ ಆಗಿದೆ. ಅದು ಬೆಂಗಳೂರ ಇರಬಹುದು, ಹುಬ್ಬಳ್ಳಿಯಲ್ಲಿಯೂ ಇರಬಹುದು. ಅನಧಿಕೃತ ಮತಗಳನ್ನು ತಗೆಯುವ ಕೆಲಸ ಆಗುತ್ತಿದೆ. ಅಧಿಕೃತವಾಗಿದ್ದವರಿಗೆ ಮತದಾನ ಮಾಡುವ ಹಕ್ಕು ಇರುತ್ತದೆ. ಅಧಿಕೃತ, ಅನಧಿಕೃತ ಮತದಾರರನ್ನು ನೋಡುವಂತಹ ಕೆಲಸವನ್ನು ಚುನಾವಣಾ ಆಯೋಗ ಮಾಡುತ್ತದೆ ಎಂದರು. ಎರಡೆರಡು ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವವರ ಹೆಸರು ತೆಗೆಯುವ ಕೆಲಸವನ್ನು ಆಯೋಗ ಮಾಡಬೇಕು ಎಂದು ಹೇಳಿದ್ದಾರೆ. ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಇದರ ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದಿದ್ದಾರೆ.

 Minorities were not left from voter id list says Basavaraj bommai in hubballi

ಇನ್ನು ಗಡಿ ವಿವಾದದ ಕುರಿರು ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಪ್ರಕರಣದ ಬಗ್ಗೆ ತನಿಖೆ ಮಾಡಲು ಸೂಚಿಸಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆಯೇ ಯುವಕನ ಮೇಲೆ ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಕೇಸ್‌ ಇರುವ ಕಾರಣಕ್ಕೆ ಇದೀಗ ಮಹಾರಾಷ್ಟ್ರದವರು ವಿವಾದ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಕೇವಲ ಸ್ವಾರ್ಥ, ಕುಟುಂಬ ಆಧಾರಿತ ರಾಜಕೀಯ ಪಕ್ಷ: ಅಶ್ವತ್ಥ ನಾರಾಯಣಕಾಂಗ್ರೆಸ್ ಕೇವಲ ಸ್ವಾರ್ಥ, ಕುಟುಂಬ ಆಧಾರಿತ ರಾಜಕೀಯ ಪಕ್ಷ: ಅಶ್ವತ್ಥ ನಾರಾಯಣ

English summary
Chief minister Basavaraj bommai said in hubballi, Minorities were not left from voter id list. Investigation by Central Election Commission, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X