Government Employees: ನೌಕರರಿಗೆ ಅನ್ಯಾಯ, ಸರ್ಕಾರದ ವಿರುದ್ಧ ಸ್ವಪಕ್ಷ ಶಾಸಕ ರಾಜು ಕಾಗೆ ಅಪಸ್ವರ
ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್‌ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ ರೈತಪರ ಯೋಜನೆಗಳು ಜಾರಿಯಾಗಿಲ್ಲ. ಅಧಿಕಾರ ಹಿಡಿಯುವಾಗ ರೈತ ಪರ ಮಾಡುವ ಪಕ್ಷಗಳು, ರಾಜಕಾರಣಗಳು ಅಧಿಕಾರಕ್ಕೆ ಬಂದ ಮೇಲೆ ರೈತರನ್ನು ಮರೆಯುತ್ತಾರೆ. ಸದ್ಯ ಕಾಂಗ್ರೆಸ್ ಬಂದ ಮೇಲೂ ಹಾಗೆಯೇ ಆಗಿದೆ ಎಂದು ಸ್ವಪಕ್ಷ ಆಡಳಿತದ ವಿರುದ್ಧವೇ ಕಿಡಿ ಕಾರಿದ್ದರು. ಬೇಸರ ಹೊಸ ಹಾರಕಿದ್ದಾರು.

ಶುಕ್ರವಾರ ಹುಬ್ಬಳ್ಳಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಹ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಈ ಶಕ್ತಿ ಯೋಜನೆ ಬಹಳ ಪುಣ್ಯದ ಕೆಲಸವಾಗಿದೆ. ಆದರೆ ಈ ಯೋಜನೆಗೆ ಸಾಕಷ್ಟು ಜನರು ಶಾಪವನ್ನು ಹಾಕತ್ತಿದ್ದಾರೆ ಅಂತಲೂ ತಿಳಿಸಿದ್ದಾರೆ.
ವೇತನ ತಾರತಮ್ಯ ವ್ಯವಸ್ಥೆ ಬದಲಾಗಬೇಕಿದೆ
ಸರ್ಕಾರಿ ನೌಕರರಿಗೆ ಸಾಮಾಜಿಕ ನ್ಯಾಯ ಸಿಗಬೇಕಿದೆ. ಸರ್ಕಾರಿ ನೌಕರರು ಎಸಿ ಫ್ಯಾನ್ ಕೆಳಗೆ ಕೂತು ಕೆಲಸ ಮಾಡುತ್ತಾರೆ. ಈ ಪೈಕಿ ಯಾರು ಹೆಚ್ಚು ಕೆಲಸ ಮಾಡುತ್ತಾರೋ ಅವರಿಗೆ ಕಡಿಮೆ ವೇತನ ಸಿಗುತ್ತಿದೆ. ಯಾರೂ ಕಡಿಮೆ ಕೆಲಸ ಮಾಡುತ್ತಾರೋ ಅವರಿಗೆ ಹೆಚ್ಚು ಸಂಬಳ ಸಿಗುತ್ತಿದೆ ಎಂದ ಅವರು ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ಬಹಿರಂಗವಾಗಿ ತಿಳಿಸಿದರು.

ನಾನು ಸಹ ಬಡವರ ಮನೆಯಲ್ಲಿ ಹುಟ್ಡಿ ಬೆಳೆದವನು. ಸರ್ಕಾರಿ ನೌಕರರಿಗೆ ಆಗುತ್ತಿರುವ ಅನ್ಯಾಯದ ವ್ಯವಸ್ಥೆ ಬದಲಾಗಬೇಕಿದೆ. ನಮ್ಮಲ್ಲಿ ಇರುವ ನೌಕರರು ಯಾರೂ ಶ್ರೀಮಂತರ ಅಲ್ಲ. ಎಲ್ಲಿ ನೌಕರಿ ಸಿಕ್ಕಿಲ್ಲ. ಹಾಗಾಗಿ ಇಲ್ಲಿಗೆ ಬಂದಿದ್ದಾರೆ ಎಂದು ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಪ್ರಯಾಣ/ಟಿಕೆಟ್ ದರ ಹೆಚ್ಚಳ ಮಾಡಲಾಗಿದ್ದಕ್ಕೆ ಜನರು ಶಾಪ ಹಾಕುತ್ತಿದ್ದಾರೆ. ಜನರ ಸೇವೆಗೆ ಸಾರಿಗೆ ಸಂಸ್ಥೆಗಳು ಇವೆ. ನಮಗೆ 405 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ದುಡ್ಡು ಇರಲಿಲ್ಲ. ಇದೆಲ್ಲ ಕಂಡು ಬಹಳ ನೋವಾಯ್ತು ಎಂದು ತಿಳಿಸಿದ್ದಾರೆ.
ಇದೆಲ್ಲ ಮನಗಂಡು ರಾಜ್ಯ ಸರ್ಕಾರ ಕೂಡಲೇ 1000 ಕೋಟಿ ಅನುದಾನ ನೀಡಬೇಕು. ನೀವು ವಿಶೇಷ ಅನುದಾನ ಬಿಡುಗಡೆ ಮಾಡದಿದ್ದರೆ, ನಾವೆಲ್ಲರು ಬದುಕುವುದಿಲ್ಲ ಎಂದು ಅವರು ನೌಕರರ ಪರ ಧ್ವನಿಯದರು.
NWKRTC ವಿಭಾಗಕ್ಕೆ 500ಕ್ಕೂ ಹೆಚ್ಚು ಬಸ್: ಸಂತೋಷ್ ಲಾಡ್
ಸಾರಿಗೆ ಇಲಾಖೆ ವ್ಯಾಪ್ತಿಗೆ ಹೊಸ ಹೊಸ ಬಸ್ ಸೇರ್ಪಡೆಗೊಳಿಸಲು ಕಾರಣವಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರಣವಾಗಿದ್ದಾರೆ. ಅವರು ಸೋಲಿಲ್ಲದ ಸರದಾರ ಎಂದು ಸಂಸ್ಥಾಪನಾ ದಿನಾಚರಣೆಯಲ್ಲಿ ಕಾರ್ಮೀಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಡಿ ಹೊಗಳಿದರು.
NWKRTC ಈ ಮಟ್ಟಕ್ಕೆ ಬೆಳೆಯಲು ಕಾರಣರಾದ ನೌಕರರು, ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು. ಆನ್ ಡ್ಯೂಟಿ ಯಲ್ಲಿ ಜೀವ ಕಳೆದುಕೊಂಡರೆ ಪರಿಹಾರ ಕೊಡುವುದು ಎಲ್ಲಿಯೂ ಇಲ್ಲ. ಅಂದಹ ವ್ಯವಸ್ಥೆ ಇರುವುದು ಕರ್ನಾಟಕದಲ್ಲಿ ಮಾತ್ರ. ಇಲ್ಲಿ
ಗ್ರ್ಯಾಚೂಟಿ ಹಣ ಪೆಂಡಿಂಗ್. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಗುಜರಾತ್‌ಗೆ ಹೋಲಿಕೆಗೆ ಮಾಡಿ ಅವರು ಹೇಳಿದರು..
NWKRTCಗೆ ಇನ್ನಷ್ಟು ಬಸ್‌ಗಳಿಗೆ ಸಚಿವರ ಮನವಿ
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಯಲ್ಲಿ ಈ ಶಕ್ತಿ ಯೋಜನೆಗೆ ಅತ್ಯಂತ ಪ್ರಮುಖವಾದದ್ದಾಗಿದೆ. ಹೆಣ್ಮಕ್ಕಳಿಗೆ ಬಸ್‌ನಲ್ಲಿ ಉಚಿತ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಕಾರಣ.
ವಿರೋಧಿಗಳು ಮೊದಲಿನಿಂದಲೂ ಯೋಜನೆ ಬಗ್ಗೆ ಅಪಸ್ವರ ಎತ್ತುತ್ತಲೇ ಇದ್ದಾರೆ. ಆದರ ಸರ್ಕಾರ ಬಂದಾಗಿಂದ ಈ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಧಾರವಾಡ ಜಿಲ್ಲೆಗಳಿಗೆ ಇನ್ನಷ್ಟು ಅಗತ್ಯ ಬಸ್‌ಗಳನ್ನು ಒದಗಿಸಬೇಕು ಎಂದು ಅವರು ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು..












Click it and Unblock the Notifications