ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭಾ ಚುನಾವಣೆಗೆ ಮೋದಿ ರಣಕಹಳೆ ಹುಬ್ಬಳ್ಳಿಯಿಂದ ಆರಂಭ

|
Google Oneindia Kannada News

Recommended Video

Lok Sabha Elections 2019 : ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬರಲಿದ್ದಾರೆ ನರೇಂದ್ರ ಮೋದಿ |Oneindia Kannada

ಹುಬ್ಬಳ್ಳಿ, ಫೆಬ್ರವರಿ 9: ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ(ಫೆ.10) ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಭಾನುವಾರ ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ಕೆಎಲ್ ಇಯ ಮೈದಾನದಲ್ಲಿ ಸಮಾವೇಶ ಜರುಗಲಿದ್ದು, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಚಿಕ್ಕೋಡಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ.

ಮೋದಿಗೆ ಕಪ್ಪುಬಾವುಟದ ಸ್ವಾಗತ ನೀಡಿದ ಅಸ್ಸಾಂ ವಿದ್ಯಾರ್ಥಿಗಳುಮೋದಿಗೆ ಕಪ್ಪುಬಾವುಟದ ಸ್ವಾಗತ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

ಇದೇ ವೇಳೆ ಪ್ರಧಾನಿಯವರು ಈ ಹಿಂದೆ ಘೋಷಣೆ ಮಾಡಿದ್ದ ಕೆಲವು ಯೋಜನೆಗಳಿಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಿದ ನಂತರ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Modi rally a boost for BJP workers

ಲೋಕಸಭೆ ಚುನಾವಣೆಗೆ ಈ ಬಾರಿ ರಾಜ್ಯದಿಂದ ಕನಿಷ್ಠ 15 ರಿಂದ 20 ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ನಾಳೆಯಿಂದಲೇ ಲೋಕಸಭಾ ಮಹಾಸಮರದ ಪ್ರಚಾರಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಅಸ್ತಿತ್ವದಲ್ಲಿರುವುದರಿಂದ ಹೇಗಾದರೂ ಮಾಡಿ ದೋಸ್ತಿ ಪಕ್ಷಕ್ಕಿಂತ ಹೆಚ್ಚಿನ ಸ್ಥಾನ ಗಳಿಸಲು ಈಗಿನಿಂದಲೇ ಚುನಾವಣಾ ಕಾರ್ಯತಂತ್ರವನ್ನು ರೂಪಿಸುವಲ್ಲಿ ಮಗ್ನವಾಗಿದೆ.

ಬಹುದಿನಗಳ ನಂತರ ಪಕ್ಷದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿರುವುದರಿಂದ ಬಿಜೆಪಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಲಿದೆ. ಇದೀಗ ನಾಳೆ ಮೋದಿ ಮತ್ತೆ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತಕುಮಾರ್ ಹೆಗಡೆ, ಸಂಸದರು ಪಾಲ್ಗೊಳ್ಳಲಿದ್ದಾರೆ.

English summary
BJP candidates who are likely to get tickets to contest the forthcoming Lok sabha election in north Karnataka are confidence of victory. Narendra modi will visit Hubballi on sunday February 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X