ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ ಕಿಮ್ಸ್ ನ 165ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗೆ ಕೊರೊನಾ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 23: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರುಗತಿಯಲ್ಲೇ ಸಾಗುತ್ತಿದೆ. ಆದರೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲೇ ಕೊರೊನಾ ಸೋಂಕು ಹೆಚ್ಚುತ್ತಿರುವುದು ಆತಂಕ ತಂದಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ 165ಕ್ಕೂ ಹೆಚ್ಚು ವೈದ್ಯರು-ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೂಡ ಉಳಿದ ವೈದ್ಯರು ಹಿಂದೇಟು ಹಾಕುವಂತೆ ಮಾಡಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡಲು ವಾರಿಯರ್ ಗಳಾಗಿರುವ ವೈದ್ಯಕೀಯ ಸಿಬ್ಬಂದಿಯಲ್ಲೇ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಈಗಾಗಲೇ 5 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ಚಿಕಿತ್ಸೆ ಪಡೆದಿದ್ದಾರೆ. ಆದರೆ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ 165ಕ್ಕೂ ಹೆಚ್ಚು ವೈದ್ಯರು- ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಸಿಬ್ಬಂದಿಯಲ್ಲೇ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಹುಬ್ಬಳ್ಳಿ ಹುಡುಗರ ಸಾಧನೆ; ಕೋವಿಡ್ ಸೋಂಕಿತರಿಗೆ ಆಹಾರ ಕೊಡಲಿದೆ ವಾಹನಹುಬ್ಬಳ್ಳಿ ಹುಡುಗರ ಸಾಧನೆ; ಕೋವಿಡ್ ಸೋಂಕಿತರಿಗೆ ಆಹಾರ ಕೊಡಲಿದೆ ವಾಹನ

ಹೀಗಾಗಿ ಕೊರೊನಾ ವಾರ್ಡಿನಲ್ಲಿ ಕಾರ್ಯನಿರ್ವಹಿಸಲು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಿಂದೇಟು ಹಾಕುವಂತೆ ಮಾಡಿದೆ. ಜೊತೆಗೆ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸುರಕ್ಷತೆ ನೀಡುವಂಥ ಕಿಟ್ ಗಳ ಅವಶ್ಯಕತೆಯೂ ಇದೆ.

Hubballi: More than 165 Medical Staff At Kims Infected Coronavirus

ಹುಬ್ಬಳ್ಳಿಯ ಕೊರೊನಾ ವೈರಸ್ ವರದಿ: ಜಿಲ್ಲೆಯ್ಲಲಿ ಒಟ್ಟು 20245 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 18628 ಮಂದಿ ಗುಣಮುಖರಾಗಿದ್ದಾರೆ. 1070 ಸಕ್ರಿಯ ಪ್ರಕರಣಗಳಿದ್ದು, 547 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Recommended Video

ಯುವಜನತೆಗೆ ಉದ್ಯೋಗ ಕೊರತೆ | Raghuram Rajan | Oneindia Kannada

English summary
More than 165 doctors and medical staff of KIMS Hospital, Hubballi have been infected by coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X