Siddaramaiah: ಭಯೋತ್ಪಾದಕ ಪದ ಬಳಕೆ ಖಂಡನೀಯ, 'ಸಿಎಂ ಭಯೋತ್ಪಾದಕ' ಎಂದು ಮತ್ತೆ ವಿವಾದ
ಹುಬ್ಬಳ್ಳಿ, ಅಕ್ಟೋಬರ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಬಳಸಿದ ಭಯೋತ್ಪಾದಕ ಶಬ್ದ ಇದೀಗ ಕಾಂಗ್ರೆಸ್ ಹಾಗು ಬಿಜೆಪಿ ಮಧ್ಯೆ ದೊಡ್ಡ ವಾಗ್ದ್ಯುದ್ಧಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಮುಗಿಬಿದ್ದಿದ್ದಾರೆ. ಇದೀಗ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವುರು ಸಿಎಂ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಿದ್ದಾರೆ. ಇತ್ತ ಶಾಸಕರು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕರು ಎಂದೇಳಿ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಅವರು ದೂರಿದರು.

ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಇಷ್ಟು ಕೆಳಮಟ್ಟಕ್ಕೆ ಹೋಗಿದೆ ಎಂದು ಗೊತ್ತಾಗುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಆದರೆ ಇಲ್ಲಿನ ರಾಜ್ಯ ರಾಜಕೀಯದಲ್ಲಿ ಸ್ವತಃ ಸಿಎಂ ಈ ರೀತಿ ಪದ ಬಳಕೆ ಮಾಡುವುದು ಖಂಡನೀಯ ಎಂದು ಕಳವಳ ವ್ಯಕ್ತಪಡಿಸಿದರು.
ವರುಷಗಳ ಹಿಂದೆ ಹಳೇ ಹುಬ್ಬಳ್ಳಿ ಗಲಭೆ ನಡೆದಿತ್ತು. ಆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿತ್ತು. ಅತೀ ಕಡಿಮೆ ಅವಧಿಯಲ್ಲಿ ಸಾವಿರಾರು ಜನರು ಸೇರಿ ಗಲಭೆ ಮಾಡಿದ್ದರು. ಅಂದಿನ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಅದರೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಶೆಟ್ಟರ್ ಅವರು, ಇಂದು ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣ ವಾಪಸ್ಸು ಪಡೆದು ಸಂವಿಧಾನಕ್ಕೆ ಅಗೌರವ ತೋರುತ್ತಿದೆ ಎಂದು ಸರ್ಕಾರ ನಡೆ ಟೀಕಿಸಿದರು.

ಸಿಎಂ ಭಯೋತ್ಪಾದಕ ಎಂದೇಳಿ ಟೆಂಗಿನಕಾಯಿ ವಿವಾದ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಭಯೋತ್ಪಾದಕ ಎಂದಿರುವ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಭಯೋತ್ಪಾದಕರು ಎಂದು ಮತ್ತೊಂದು ವಿವಾದ ಸೃಷ್ಟಿಸಿದರು.
ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ತಿಳಿದು ಮಾತನಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸಚಿವರಿಗೆ ಭಯೋತ್ಪಾದಕ ಪಟ್ಟ ಕಟ್ಟುವುದು ಸರಿಯಲ್ಲ.
ಭಯೋತ್ಪಾದಕರಿಗೆ ಸಹಾಯ ಮಾಡಿದರೆ ನೀವೇ ಭಯೋತ್ಪಾದಕರು ಆದಂತೆ ಎಂದ ಅವರು, 2022 ರಲ್ಲಿ ಹಳೆ ಹುಬ್ಬಳ್ಳಿಯ ಗಲಾಟೆ ಪ್ರಕರಣ ಪೊಲೀಸ್ vs ಮುಸ್ಲಿಂ ಗಲಭೆ ಎಂದು ನೆನಪಿಸಿದರು.
ಅಂದಿನ ಗಲಭೆ ಯಾವುದೋ ರೈತ, ಕನ್ನಡ ಪರ ಹಾಗೂ ಕೋಮು ಗಲಭೆ ಅಲ್ಲ. ನೇರವಾಗಿ ಪೊಲೀಸ್ ಠಾಣೆ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಪೊಲೀಸ್ ಠಾಣೆ ಮೇಲೆ ಕಲ್ಲು ಹೊಡೆಯುತ್ತಾರೆ. ಸಾವಿರಾರು ಸಂಖ್ಯೆ ಮುಸ್ಲಿಂರು ಬಂದು ಪೊಲೀಸ್ ಠಾಣೆ ಕಬ್ಜಾ ಮಾಡುತ್ತಾರೆ. ಪೊಲೀಸ್ ಕಮೀಷನರ್ ಕಾರ್ ಮೇಲೆ ಹತ್ತಿ ಕುಣಿಯುತ್ತಾರೆ.
ಪೊಲೀಸರ ಠಾಣೆ ಮೇಲೆ ದಾಳಿ, ಪೊಲೀಸ್ ವಾಹನ ಜಖಂ ಮಾಡುತ್ತಾರೆ. ಇದೆಲ್ಲ ಆದರೂ ಸಹ ಸಚಿವ ಸಂಪುಟದಲ್ಲಿ ಅವರ ಮೇಲಿನ ಪ್ರಕರಣ ವಾಪಸ್ ಪಡೆಯುತ್ತಾರೆ ಎಂದರೆ ಏನರ್ಥ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications