ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಟಿಬಿ ನಾಗರಾಜ್ ಕೂಡ ಸಚಿವರಾಗ್ತಾರೆ; ಬಿಸಿ ಪಾಟೀಲ್

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 28: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಅರ್ಹ ಶಾಸಕರಿಗೂ ಸಚಿವ ಸ್ಥಾನ ಸಿಗೋದು ಬಹುತೇಕ ಖಾತ್ರಿಯಾಗಿದೆ. ಆದ್ರೆ, ಹೊಸಕೋಟೆ ಉಪಚುನಾವಣೆಯಲ್ಲಿ ಸೋಲು ಅನುಭವಿಸಿರುವ ಎಂಟಿಬಿ ನಾಗರಾಜ ಕೂಡ ಸಚಿವರು ಆಗುತ್ತಾರೆ ಎಂದು ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರು ಮಾತ್ರ ಸಚಿವರು ಆಗ್ತಾರೆ. ಸೋಲು ಅನುಭವಿಸಿರುವವರಿಗೆ ಸಚಿವ ಸ್ಥಾನ ಸಿಗಲ್ಲವೆಂದು ಆರ್ ಅಶೋಕ್ ಹಾಗೂ ಈಶ್ವರಪ್ಪ ಹೇಳಿಕೆ ನೀಡಿದ್ದು ಸುಳ್ಳು. ಎಂಟಿಬಿ ನಾಗರಾಜ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಮೋದಿ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ: ಹೊರಟ್ಟಿಮೋದಿ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ: ಹೊರಟ್ಟಿ

ಎಂಟಿಬಿ ನಾಗರಾಜರನ್ನ ಸಚಿವರನ್ನಾಗಿ ಮಾಡೋದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಭರವಸೆ‌ ನೀಡಿದ್ದಾರೆ. ಜನವರಿ ಮೊದಲ ವಾರದಲ್ಲಿ ಸಿಎಂ, ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ. ಸಂಕ್ರಾತಿ ನಂತರ ನಡೆಯುವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಜೊತೆ ಎಂಟಿಬಿ ನಾಗರಾಜ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅಲ್ಲದೇ ನಾವೂ ಯಾರು ಹಿಂತಹ ಖಾತೆಗಳೆ ಬೇಕು ಎಂದು ಪಟ್ಟುಹಿಡಿದಿಲ್ಲ. ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಖಾತೆಗಳ ಬಗ್ಗೆ ನಿರ್ಧಾರ ಮಾಡಲಿದ್ದೇವೆ ಎಂದಿದ್ದಾರೆ.

MTB Nagaraj Will Aslo Become Minister; B C Patil

ಹುಬ್ಬಳ್ಳಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಬಿಜೆಪಿ ನಡೆಸುತ್ತಿರುವ ಪ್ರಮುಖರ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಬಿಸಿ ಪಾಟೀಲ ತಾವು ಸಚಿವರಾಗೋದು ಗ್ಯಾರಂಟಿ ಎಂದು ಭರವಸೆ ವ್ಯಕ್ತಪಡಿಸಿದರು.

English summary
MTB Nagaraj Will Aslo Become Minister. Hirekerur MLA B C Patil said this in Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X