ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

municipal administration minister cs Shivalli admitted to hospital after severe heart attack

ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬಳಿಕ ಚೇತರಿಸಿಕೊಂಡು ಸರ್ಕಾರದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಫೆಬ್ರವರಿ 3ರಂದು ಹುಬ್ಬಳ್ಳಿಯ ಕರಡಿಕೊಪ್ಪ ಗ್ರಾಮದಲ್ಲಿ ಕೆಲಸ ಮುಗಿಸಿಕೊಂಡು ಮರಳುವ ಸಂದರ್ಭದಲ್ಲಿ ಅವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಮ್ಮೆ ಗೆದ್ದ ಶಾಸಕ ಸತತವಾಗಿ ಮತ್ತೆ ಆಯ್ಕೆಯಾದ ದಾಖಲೆಯೇ ಇಲ್ಲದ ಕುಂದಗೋಳ ಕ್ಷೇತ್ರದಲ್ಲಿ ಸತತ ಎರಡು ಬಾರಿ ಬಾರಿ ಗೆದ್ದು ಶಿವಳ್ಳಿ ಇತಿಹಾಸ ಸೃಷ್ಟಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+