ಹುಬ್ಬಳ್ಳಿ : ಫೆ.10ರಂದು ಬಿಜೆಪಿ ಸಮಾವೇಶ, ಮೋದಿ ಭಾಷಣ

ಹುಬ್ಬಳ್ಳಿ, ಜನವರಿ 31 : ಪ್ರಧಾನಿ ನರೇಂದ್ರ ಮೋದಿ ಅವರು 2019ರ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಫೆಬ್ರವರಿ 10 ಮತ್ತು 19ರಂದು ಅವರು ಕರ್ನಾಟಕದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಯಡಿಯೂರಪ್ಪ ಅವರು ಪ್ರಧಾನಿಗಳ ಕರ್ನಾಟಕ ಭೇಟಿ ಬಗ್ಗೆ ಮಾಹಿತಿ ನೀಡಿದರು.

Narendra Modi to address rally in Hubballi on February 10

'ಫೆಬ್ರವರಿ10 ಮತ್ತು 19ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ಮತ್ತು 21 ರಂದು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ' ಎಂದು ಮಾಹಿತಿ ನೀಡಿದರು.

'ಫೆಬ್ರವರಿ 10ರಂದು ಹುಬ್ಬಳ್ಳಿಯಲ್ಲಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 19ರಂದು ಅವರು ಮತ್ತೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ' ಎಂದು ಯಡಿಯೂರಪ್ಪ ಹೇಳಿದರು.

'ರಾಜ್ಯ ಪ್ರವಾಸ ಮಾಡುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಾಗುತ್ತದೆ. 22 ಕ್ಷೇತ್ರದಲ್ಲಿ ಗೆದ್ದು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ನಾವು ಕೊಡುಗೆ ನೀಡುತ್ತೇವೆ' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+