ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ
ಹುಬ್ಬಳ್ಳಿ, ಜನವರಿ, 06: ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ.
ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ. ಇನ್ನು ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆಸಿದ್ದು, ಮದುವಣಗಿತ್ತಿಯಂತೆ ಕಂಗೊಳಿಸಲು ಹುಬ್ಬಳ್ಳಿ ಧಾರವಾಡ ಅವಳಿನಗರ ಸಿದ್ಧವಾಗುತ್ತಿದೆ.
ಅಕ್ಷಯ್ ಕುಮಾರ್‌ಗೆ ಆಹ್ವಾನ ಕೊಟ್ಟಿದ್ದ ಜೋಶಿ
ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟರಿಗೂ ಆಹ್ವಾನ ನೀಡಲಾಗುತ್ತಿದೆ ಎಂದ ಜೋಶಿ, ಸ್ಥಳದಲ್ಲೇ ನಟ ಅಕ್ಷಯಕುಮಾರ್ ಅವರಿಗೆ ಕರೆ ಮಾಡಿ ಯುವ ಜನೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ಪ್ರಧಾನಮಂತ್ರಿಗಳು ಆಗಮಿಸುತ್ತಿರುವುದರಿಂದ ನೀವೂ ಕಾರ್ಯಕ್ರಮಕ್ಕೆ ಬರಬೇಕು ಎಂದು ಜೋಶಿ ಮನವಿ ಮಾಡಿದ್ದರು. ಆದರೆ, ಅಕ್ಷಯ್ ಕುಮಾರ್ ಅವರು ಲಂಡನ್‌ಗೆ ಹೊರಟಿರುವುದಾಗಿ ಹೇಳಿದ್ದಾರೆ.
ಪೋಸ್ಟ್ ಕೋವಿಡ್ ನಂತರ ಮೊದಲ ಬಾರಿಗೆ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕವಿವಿಯಲ್ಲಿ ಇವೆಂಟ್ ನಡೆಯುತ್ತದೆ. ಉದ್ಘಾಟನೆ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಅವಳಿನಗರದ ಎಲ್ಲ ಕಡೆಯೂ ವೇದಿಕೆ ಮಾಡಲಿದ್ದೇವೆ. ಅಲ್ಲದೇ ಐಐಟಿ ಉದ್ಘಾಟನೆ, ಹುಬ್ಬಳ್ಳಿ ರೈಲ್ವೆ ಫ್ಲಾಟ್‌ಫಾರ್ಮ್ ಸೇರಿ ಹಲವು ಉದ್ಘಾಟನಾ ಕಾರ್ಯಕ್ರಮಗಳೂ ಅಂದು ಮೋದಿ ಅವರಿಂದ ನಡೆಯಲಿವೆ ಎಂದು ಜೋಶಿ ಮಾಹಿತಿ ನೀಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications