ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯುವಜನೋತ್ಸವ ಕಾರ್ಯಕ್ರಮಕ್ಕೆ ಮದುವಣಗಿತ್ತಿಯಂತೆ ಸಿದ್ಧವಾದ ವಾಣಿಜ್ಯ ನಗರಿ ಹುಬ್ಬಳ್ಳಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜನವರಿ, 08: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಮಾಡಿ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದು, ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ?: ಬಿಜೆಪಿ ಪ್ರಶ್ನೆಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ?: ಬಿಜೆಪಿ ಪ್ರಶ್ನೆ

National Youth Festival 2023: Location Inspection by Jagdish Shettar in Hubballi

ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ

ಎಲ್ಲರಿಗೂ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕೇಂದ್ರದ ಕಾರ್ಯಕ್ರಮ ಆಗಿದ್ದು, ಇದು ರಾಜ್ಯ ಸರ್ಕಾರ ಸಹಕಾರದೊಂದಿಗೆ ನಡೆಯುತ್ತಿದೆ. ಈಗಾಗಲೇ ಜಿಲ್ಲಾಡಳಿತ ಭರದಿಂದ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯಕ್ರಮವು ಶಾಂತ ರೀತಿಯಿಂದ ಜರುಗಬೇಕು ಎಂದರು.

National Youth Festival 2023: Location Inspection by Jagdish Shettar in Hubballi

ಭರದಿಂದ ಸಾಗಿದ ಸಿದ್ಧತೆಗಳು

ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಈಗಾಗಲೇ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ. ಇನ್ನು ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆಸಿದ್ದು, ಮದುವಣಗಿತ್ತಿಯಂತೆ ಕಂಗೊಳಿಸಲು ಹುಬ್ಬಳ್ಳಿ ಧಾರವಾಡ ಅವಳಿನಗರ ಸಿದ್ಧವಾಗುತ್ತಿದೆ.

English summary
National Youth Festival 2023 in Hubballi: Location Inspection by Former Chief minister Jagdish Shettar, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X