ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಲ್ಲಿದೆ
ಧಾರವಾಡ, ಜನವರಿ, 13: ಅವಳಿ ನಗರದಲ್ಲಿ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಯುವಜನೋತ್ಸವದ ಮೊದಲ ದಿನವಾದ ಗರುವಾರ ಸಂಜೆ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ. ಸಿ. ನಾರಾಯಣಗೌಡ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಹಾಗೆಯೇ ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಗೂ ತಂಡದವರಿಂದ ತಡರಾತ್ರಿಯವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಯುವಜನೋತ್ಸವಕ್ಕೆ ಅದ್ಧೂರಿ ಚಾಲನೆ
ಇನ್ನು ಧಾರವಾಡದ ಕೆಸಿಡಿ ಮೈದಾನ ಗುರುವಾರ ಸಂಜೆ ಅಕ್ಷರಶಃ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿತ್ತು. ಜನವರಿ 12ರಿಂದ 16ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಕೆಸಿಡಿ ಮೈದಾನದಲ್ಲಿ ಚಾಲನೆ ನೀಡಲಾಯಿತು. ಇದಕ್ಕೂ ಮೊದಲು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಿದ್ದರು.
ಧಾರವಾಡದ ಕೆಸಿಡಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಇವರಿಗೆ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ ಲೇಸರ್ ಶೋ ಕೂಡ ಪ್ರದರ್ಶನ ಮಾಡಲಾಯಿತು. ಈ ಲೇಸರ್ ಶೋಲ್ಲಿ ಹುಬ್ಬಳ್ಳಿ, ಧಾರವಾಡದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತೋರಿಸಲಾಯಿತು. ಒಟ್ಟಾರೆ ಕೆಸಿಡಿ ಮೈದಾನದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಎಲ್ಲರ ಗಮನಸೆಳೆದಿದೆ.

ಮೋದಿಯವರಿಗೆ ಮಾಲೆ ಹಾಕಲು ಪ್ರಯತ್ನ
ರೋಡ್ ಶೋ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೂಮಾಲೆ ಹಾಕಲು ಬಾಲಕನಿಂದ ಯತ್ನ ಪ್ರಕರಣ ಇದು ಭದ್ರತಾ ಲೋಪ ಅಲ್ಲ. ಮೋದಿಯವರನ್ನು ನೋಡಲು ಲಕ್ಷಾಂತರ ಜನರು ಸೇರಿದ್ದರು. ಇಂತಹ ಸಂದರ್ಭದಲ್ಲಿ ಬಾಲಕ ಬ್ಯಾರಿಕೇಡ್ ಹಾರಿ ಬಂದಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಹೇಳಿದರು.
ಪೊಲೀಸ್ ಕಮಿಷನರ್ ಹೇಳಿದ್ದೇನು?
ಬಾಲಕನೊಬ್ಬ ಬ್ಯಾರಿಕೇಡ್ ಹಾರಿ ಮೋದಿಯವರಿಗೆ ಮಾಲೆ ಹಾಕಲು ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾರಿಕೇಡ್ ಹಾರಿ ಬಂದ ಬಾಲಕನನ್ನು ನಮ್ಮ ಭದ್ರತಾ ಸಿಬ್ಬಂದಿ ತಕ್ಷಣವೇ ತಡೆದಿದ್ದಾರೆ. ಅತಿ ಉತ್ಸಾಹದಿಂದ ಬಾಲಕ ಈ ರೀತಿ ಮಾಡಿದ್ದಾನೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ ಎಂದರು. ವಿಚಾರಣೆ ಬಳಿಕ ಪ್ರಕರಣ ಈ ಬಗ್ಗೆ ಪ್ರತಿಕ್ರಿಯೆ ನೀಡುವೆ. ಈ ಪ್ರಕರಣ ಕುಲಂಕೂಷವಾಗಿ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.












Click it and Unblock the Notifications