BJP Workers vs Jagadish Shettar: ಟೀ ಶರ್ಟ್ ಮೇಲಿದ್ದ ಜಗದೀಶ್‌ ಶೆಟ್ಟರ್ ಫೋಟೋ ಅಳಿಸಿದ ಬಿಜೆಪಿ ಕಾರ್ಯಕರ್ತರು

ಧಾರವಾಡ, ಏಪ್ರಿಲ್‌, 17: ಬಿಜೆಪಿ ಟೀ ಶರ್ಟ್ ಮೇಲಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಅವರ ಭಾವಚಿತ್ರವನ್ನು ಬಿಜೆಪಿ ಕಾರ್ಯಕರ್ತರೇ ಅಳಿಸಿ ಹಾಕಿದ ಘಟನೆ ನವಲಗುಂದ ಪಟ್ಟಣದಲ್ಲಿ ನಡೆದಿದೆ.

ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ್‌ ಪಾಟೀಲ ಮುನೇನಕೊಪ್ಪ ಅವರು ಸೋಮವಾರ ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಲಕ್ಷಾಂತರ ಜನ ಪಾಲ್ಗೊಂಡಿದ್ದು, ಶಂಕರ್‌ ಪಾಟೀಲ ಮುನೇನಕೊಪ್ಪ ಅವರಿಗೆ ಬೃಹತ್ ಮೆರವಣಿಗೆ ಮಾಡಲಾಯಿತು.

Navalgund: BJP workers removed the photo of Jagadish Shettar on T-Shirt

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅನೇಕರು ಬಿಜೆಪಿ ಟೀ ಶರ್ಟ್ ಹಾಕಿಕೊಂಡು ಬಂದಿದ್ದರು. ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆ ಆದ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು ಟೀ ಶರ್ಟ್ ಮೇಲಿದ್ದ ಜಗದೀಶ್‌ ಶೆಟ್ಟರ್ ಅವರ ಭಾವಚಿತ್ರವನ್ನು ಅಳಿಸಿ ಹಾಕಿದ ಪ್ರಸಂಗ ಜರುಗಿತು.

ಜಗದೀಶ್ ಶೆಟ್ಟರ್‌ಗೆ ಅದ್ಧೂರಿ ಸ್ವಾಗತ

ಇನ್ನು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಹಾಗೂ ಪಕ್ಷದ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ್ ಶೆಟ್ಟರ್ ಅವರನ್ನು ನೂರಾರು ಕಾರ್ಯಕರ್ತರು ಸ್ವಾಗತಿಸಿದ್ದು, ಸನ್ಮಾನಿಸಿ ಶುಭ ಹಾರೈಸಿದರು. ಶೆಟ್ಟರ್ ಶೆಟ್ಟರ್ ಜಗದೀಶ್ ಶೆಟ್ಟರ್ ಎಂದು ಘೋಷಣೆ ಮೂಲಕ ಹುಬ್ಬಳ್ಳಿ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ.

ಮೂವತ್ತು ವರ್ಷಗಳ ಕಾಲ ಬಿಜೆಪಿ ಕಟ್ಟಿ ಬೆಳೆಸಿರುವ ಜಗದೀಶ್ ಶೆಟ್ಟರ್ ಈಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಹುಬ್ಬಳ್ಳಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್‌ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲ ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಹೇಳಿದರು.

ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ‌. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದೇನೆ‌. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಹ ಪರಿಸ್ಥಿತಿ ಎದುರಾಗಿತ್ತು. ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು. ನನ್ನ ಬೆಂಬಲಿಗರನ್ನು ಎಷ್ಟು ದಿನ ಬೆದರಿಸಿ ಇಟ್ಟುಕೊಳ್ಳಲು ಸಾಧ್ಯ.? ಅವರು ದೈಹಿಕವಾಗಿ ಅಲ್ಲಿರಬಹುದು. ಮಾನಸಿಕವಾಗಿ ನಮ್ಮ ಜೊತೆಗೆ ಇದ್ದಾರೆ. ಬಲವಂತವಾಗಿ ಹಿಡಿದಿಟ್ಟಿಕೊಳ್ಳಲು ಸಾಧ್ಯವಿಲ್ಲ ಒಂದಲ್ಲ ಒಂದು ದಿನ‌ ಹೊರಗೆ ಬರುತ್ತಾರೆ ಎಂದು ಅವರು ಅಭಿಮಾನಿಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ಘೋಷಣೆ ವಿಳಂಬವಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು, ಇಂದು(ಏಪ್ರಿಲ್‌ 17) ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಧ್ವಜ ಹಿಡಿಯುವ ಮೂಲಕ ಜಗದೀಶ್‌ ಶೆಟ್ಟರ್‌ ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳ ಕಾಲದ ಬಿಜೆಪಿ ನಂಟನ್ನು ಕಳೆದುಕೊಂಡಿದ್ದಾರೆ.

ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ನಾಯಕರೊಂದಿಗೆ ಮಾತುಕತೆ ನಡೆಸಿ, ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಲು ಹಾಕಿ, ಧ್ವಜ ನೀಡುವ ಮೂಲಕ ಕೆ. ಸಿ. ವೇಣುಗೋಪಾಲ್ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+