ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಮತ್ತೆ ಕಡೆಗಣನೆ
ಧಾರವಾಡ, ಅಕ್ಟೋಬರ್, 10: ಮಾಜಿ ಮುಖ್ಯಮಂತ್ರಿ, ಹುಬ್ಬಳ್ಳಿ -ಧಾರವಾಡದ ಜನಪ್ರಿಯ ಶಾಸಕ ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಮಾತುಗಳು ಮತ್ತೆ ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಎರಡು ಘಟನೆಗಳು ನಡೆದಿವೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪ್ರಭಾವಿ ನಾಯಕ ಎನಿಸಿಕೊಂಡಿರುವ ಜಗದೀಶ್ ಶೆಟ್ಟರ್ ಅವರನ್ನು ಕೇಂದ್ರ ಸಚಿವರು ಲೋಕಾರ್ಪಣೆ ಮಾಡುವ ಅಭಿವೃದ್ಧಿ ಕಾರ್ಯಗಳ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ನಮೂದಿಸದೇ ಕಡೆಗಣನೆ ಮಾಡಿದ್ದಾರೆ. ಇದಕ್ಕೆ ಪಕ್ಷದಲ್ಲಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸೈಡ್‌ಲೈನ್ ಮಾಡುತ್ತಿದ್ದಾರೆ ಎಂಬ ಮಾತುಗಳು ಮುನ್ನಲೆಗೆ ಬರುತ್ತಿವೆ.
ಆಹ್ವಾನ ಪತ್ರಿಕೆಯಲ್ಲಿಲ್ಲ ಶೆಟ್ಟರ್ ಹೆಸರು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ಕೈಬಿಡಲಾಗಿದೆ. ನಾಳೆ ಧಾರವಾಡ ನಗರದ ನೂತನ ರೈಲ್ವೆ ನಿಲ್ದಾಣದ ಕಟ್ಟಡ ಉದ್ಘಾಟನೆ ಮಾಡಲು ಕೇಂದ್ರ ರೈಲ್ವೆ ಸಚಿವರು ಧಾರವಾಡಕ್ಕೆ ಬರುತ್ತಿದ್ದಾರೆ. ಅಲ್ಲದೇ ಹುಬ್ಬಳ್ಳಿಯಲ್ಲಿಯೂ ಕೂಡ ಅನೇಕ ಅಭಿವೃದ್ದಿ ಕಾರ್ಯಗಳಿಗೆ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಮಂತ್ರಣ ಪತ್ರಿಕೆಗಳನ್ನು ತಯಾರು ಮಾಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರು ಕೈಬಿಡಲಾಗಿದೆ. ಇದರಿಂದ ಪ್ರಭಾವಿ ನಾಯಕನನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನುವ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿವೆ.

ಜಗದೀಶ್ ಶೆಟ್ಟರ್ ಸೈಡ್‌ಲೈನ್ ಆದ್ರಾ?
ಇನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಸಚಿವ ಸ್ಥಾನವನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ನಡುವೆ ಶೀತಲ ಸಮರ ಆರಂಭವಾಗಿದೆ. ಆದ್ದರಿಂದ ಈ ರೀತಿ ಆಗುತ್ತಿದೆ ಎನ್ನುವ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿವೆ. ಈ ವಿಷಯ ಕುರಿತು ಕೇಳಿದರೆ ಅವರ ಜೊತೆ ಇದ್ದ ಜೋಶಿ ಅವರು ಕೂಡ ತುಟಿ ಬಿಚ್ಚುತ್ತಿಲ್ಲ. ಆದ್ದರಿಂದ ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಯಾವುದು ಸರಿ ಎಂಬುದು ಸಾಬೀತಾಗಿದೆ.

ಕಳೆದ ತಿಂಗಳು ಹುಬ್ಬಳ್ಳಿಯಲ್ಲಿ ಪೌರ ಸನ್ಮಾನ ಸ್ವೀಕರಿಸಲು ರಾಷ್ಟ್ರಪತಿ ಆಗಮಿಸುವವಾಗ ವೇದಿಕೆ ಮೇಲೆ ಕೇವಲ 11 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಲ್ಲಿ ಉತ್ತರ ಕರ್ನಾಟಕ ಪ್ರಭಾವಿ ಮುಖಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರು ಕೈ ಬಿಡಲಾಗಿತ್ತು. ಶೆಟ್ಟರ್ ಅಭಿಮಾನಿಗಳು ಹಾಗೂ ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕೊನೆ ಕ್ಷಣದಲ್ಲಿ ಅವರಿಗೆ ಅವಕಾಶ ವೇದಿಕೆ ಮೇಲೆ ಅವಕಾಶ ನೀಡಲಾಗಿತ್ತು.












Click it and Unblock the Notifications