Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
ಹುಬ್ಬಳ್ಳಿ, ಏಪ್ರಿಲ್ 20: ಬಿವಿಬಿ ಕಾಲೇಜಿನಲ್ಲಿ ಹಾಡಹಗಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಮುಂದುವರಿದಿದೆ. ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಹೇಳಿಕೆಗಳು ಹಾಗೂ ಘಟನೆ ವಿರೋಧಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಿದ್ಯಾರ್ಥಿಗಳು ಮೇಣದ ಬತ್ತಿ ಪ್ರತಿಭಟಿಸಿದರು.
ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಜಯ ಜರ್ನಾಟಕ, ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತ ಶನಿವಾರ ಬೆಳಗ್ಗೆಯೇ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ನೇಹಾ ಕೊಲೆ ಖಂಡಿಸಿ ಶನಿವಾರ ಹುಬ್ಬಳ್ಳಿಯಲ್ಲಿ ಸಾಂಕೇತಿಕ ಬಂದ್ ಮಾಡಲಾಗಿದೆ. ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀಗಳ ಭೇಟಿ, ಸಾಂತ್ವನ
ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ನಿವಾಸಕ್ಕೆ ಶಿರಹಟ್ಟಿಯ ಫಕೀರ ಮಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀಗಳ ಭೇಟಿ ನೀಡಿತು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯಲ್ಲಿ ವಿವಿಧ ಮಠಾಧೀಶರು ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಕಾಲಕಾಲಕ್ಕೆ ಕಾನೂನು ಬದಲಾಗಲಿ: ಶ್ರೀಗಳು
ನಂತರ ಶ್ರೀ ಫಕೀರ ಸಿದ್ಣದರಾಮೇಶ್ವರ ಸ್ವಾಮೀಜಿ ಮಾತನಾಡಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು. ಎಲ್ಲರ ಮನಸ್ಸಿಗೆ ನೋವಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಇಲ್ಲದಿದ್ದಲ್ಲಿ ಈ ರೀತಿಯ ಘಟನೆ ಮರುಕಳಿಸುತ್ತದೆ. ಕಾಲಕ್ಕೆ ತಕ್ಕಂತೆ ಕಾನೂನು ಬದಲಾಗಬೇಕು. ಇಂದು ದುರಾಸೆ ಬಹಳ ಬೆಳೆದಿದೆ ಆಚಾರ ವಿಚಾರ ಕಡಿಮೆ ಆಗಿದೆ ಎಂದು ಅವರು ತಿಳಿಸಿದರು.

ಸರ್ಕಾರದ ವಿರುದ್ಧ ಚಪ್ಪಲಿ ತೋರಿಸಿ ಆಕ್ರೋಶ
ಜಯಕರ್ನಾಟಕ, ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿದೆ. ಹುಬ್ಬಳ್ಳಿಯ ಚೆನ್ನಮ್ಮಸರ್ಕಲ್ ಬಳಿ ಪ್ರತಿಭಟನೆ ಆರಂಭಿಸಿದರು. ಚನ್ನಮ್ಮ ವೃತ್ತದಿಂದ ಬಿವಿಬಿ ಕಾಲೇಜು ವರೆಗೆ ಘೋಷಣೆ ಕೂಗುತ್ತಾ ಚಪ್ಪಲಿ ತೋರಿಸಿ ಆಕ್ರೋಶ ಹೊರ ಹಾಕಿದರು.
ನೇಹಾ ಕೊಲೆ ಇದೊಂದು ಪ್ರಕರಣವಲ್ಲ. ಹೀಗೇ ಅನೇಕ ಪ್ರಕರಣಗಳು ನಡೆಯುತ್ತಿವೆ. ನೇಹಾ ಕೊಲೆ ಇದೊಂದು ಲವ್ ಜಿಹಾದ್. ರಾಜ್ಯ ಸರ್ಕಾರ ನೇಹಾ ಕೊಲೆಯಲ್ಲಿ ಹಗುರವಾಗಿ ನಡೆದುಕೊಳ್ಳುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಸುಧೀರ ಮುಧೋಳ ಹಾಗೂ ಸಂಘ ಸಂಘಟನೆಯ ಮುಖಂಡೆ ಮಧು ಪಟ್ಟಣಶೆಟ್ಟಿ ಒತ್ತಾಯಿಸಿದರು.
ಮಾನವ ಸರಪಳಿಗೆ ಪೊಲೀಸ್ ಅಡ್ಡಿ
ಹೊಸೂರ ಸರ್ಕಲ್ ಬಳಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸ್ ಅಧಿಕಾರಿ ಜೊತೆಗೆ ಮಾತಿನ ಚಕಮಕಿ ನಡೆಯಿತು. ಮಾನವ ಸರಪಳಿಗೆ ಪೊಲೀಸರು ಅಡ್ಡಿ ಪಡಿಸಿದರು. ಅನುಮತಿ ನೀಡದೇ ಕಾರ್ಯಕರ್ತರನ್ನು ಚದುರಿಸಲು ಪ್ರಯತ್ನಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ರಾಜ್ಯಾದ್ಯಂತ ಭುಗಿಲೆದ್ದಿದೆ. ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿ ಸಂಘಟನೆ ಸೇರಿದಂತೆ ಅನೇಕರು ಮೇಣದ ಬತ್ತಿ ಹಚ್ಚಿ ಉಗ್ರ ಶಿಕ್ಷೆ ಕೈಗೊಳ್ಳುವಂತೆ ಒತ್ತಾಯಿಸಿದರು.
ನೇಹಾ ಕುಟುಂಬಸ್ಥರಿಗೆ ಪೊಲೀಸ್ ಅಭಯ
ಹತ್ಯೆಯಾದ ನೇಹಾ ಕುಟುಂಬಬಸ್ಥರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ಅಭಯ್ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಕಠಿಣ ಶಿಕ್ಷೆಯಾಗುವ ರೀತಿಯಲ್ಲಿ ತನಿಖೆ ನಡೆಸುವವುದಾಗಿ ತಿಳಿಸಿದ್ದಾರೆ.
ತನಿಖೆಗಳ ಕುರಿತು ಒಂದಷ್ಟು ವರದಿಗಾಗಿ ಕಾಯುತ್ತಿದ್ದೇವೆ. ಅವು ಬಂದ ತಕ್ಷಣವೇ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಭರವಸೆ ನೀಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಸಾಂತ್ವನ
ಇಂದು ನೇಹಾ ಹಿರೇಮಠ ಅವರ ನಿವಾಸಕ್ಕೆ ಕಾಂಗ್ರೆಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಸಾಂತ್ವನ ಹೇಳಿದರು. ನಿಮ್ಮೊಂದಿಗೆ ಸರ್ಕಾರ ಇರುತ್ತದೆ. ಯಾವುದೇ ಆತಂಕ ಬೇಡ ಎಂದು ಧೈರ್ಯ ತುಂಬಿದರು. ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ವಿವಿಧ ಭಾಗದಲ್ಲಿ ಕೊಲೆ ಖಂಡಿಸಿ, ಸರ್ಕಾರದ ಹೇಳಿಕೆಗಳ ವಿರುದ್ಧ ಪ್ರತಿಭಟನೆಗಳು ನಡೆದಿವೆ.












Click it and Unblock the Notifications