ಹುಬ್ಬಳ್ಳಿ ಏರ್‌ಪೋರ್ಟ್‌ ಹೊಸ ಟರ್ಮಿನಲ್; 8 ಟೆಂಡರ್ ಸಲ್ಲಿಕೆ

ಹುಬ್ಬಳ್ಳಿ, ನವೆಂಬರ್ 27; ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಕಳೆದ ವಾರ ಟೆಂಡರ್ ಕರೆದಿತ್ತು. ಒಟ್ಟು 8 ಕಂಪನಿಗಳು ಟೆಂಡರ್ ಸಲ್ಲಿಕೆ ಮಾಡಿವೆ.

3,600 ಚದರ ಮೀಟರ್ ಸ್ಥಳದಲ್ಲಿ ನಿರ್ಮಾಣಗೊಂಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿರುವ ಟರ್ಮಿನಲ್ 2017ರ ಡಿಸೆಂಬರ್‌ನಲ್ಲಿ ಉದ್ಘಾಟನೆಗೊಂಡಿತ್ತು. ಭವಿಷ್ಯದ ವಿಮಾನ ನಿಲ್ದಾಣ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ.

New Terminal For Hubballi Airport 8 Tender Submitted

ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಜನರಿಗೆ ಸಿಹಿಸುದ್ದಿ ನೀಡಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ವಿಸ್ತರಣೆ ಮಾಡಲು ಒಪ್ಪಿಗೆ ಕೊಟ್ಟಿತ್ತು. ದೇಶಿಯ ವಿಮಾನಯಾನ ಸೇವೆಗಾಗಿಯೇ ಹೊಸ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ.

ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಸುಮಾರು 260.23 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, 'ಹೊಸ ಟರ್ಮಿನಲ್ 20 ಸಾವಿರ ಚದರ ಮೀಟರ್ (ನೆಲ ಮತ್ತು ಮೊದಲ ಮಹಡಿ) ವಿಸ್ತೀರ್ಣ ಇರಲಿದೆ" ಎಂದು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಹೊಸ ವರ್ಷದಲ್ಲಿ ಕಾಮಗಾರಿ?; ಈಗ 8 ಕಂಪನಿಗಳು ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಸಲ್ಲಿಕೆ ಮಾಡಿವೆ. ಟೆಂಡರ್ ಪ್ರಕ್ರಿಯೆ ಅಂತಿಮಗೊಂಡ ಬಳಿಕ ಹೊಸ ವರ್ಷದಲ್ಲಿ ಕಾಮಗಾರಿಗಳು ಆರಂಭವಾಗುವ ನಿರೀಕ್ಷೆ ಇದೆ. ಟೆಂಡರ್‌ನಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು 24 ತಿಂಗಳು ಗಡುವು ನೀಡಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಅನ್ನು ಪೀಕ್ ಅವರ್‌ನಲ್ಲಿ 2,400 ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಣೆ ಮಾಡುವ ರೀತಿ ನಿರ್ಮಾಣ ಮಾಡಲಾಗುತ್ತದೆ. ಈಗಿರುವ ಟರ್ಮಿನಲ್ ಪ್ರಯಾಣಿಕರ ದಟ್ಟಣೆ ಅವಧಿಯಲ್ಲಿ ಗಂಟಗೆ 300 ಪ್ರಯಾಣಿಕರ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ.

ಸದ್ಯ ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿರುವ ಹಳೆಯ ಟರ್ಮಿನಲ್ ಕಟ್ಟಡದ ಪಕ್ಕದಲ್ಲಿಯೇ ಹೊಸ ಟರ್ಮಿನಲ್ ನಿರ್ಮಾಣವಾಗಲಿದೆ. ಟರ್ಮಿನಲ್ ಕಟ್ಟಡ ವಿಸ್ತರಣೆ ಜೊತೆಗೆ ವಾಹನಗಳ ಪಾರ್ಕಿಂಗ್‌ಗೆ ಸಹ ವ್ಯವಸ್ಥೆ ಮಾಡಲಾಗುತ್ತಿದೆ. 500 ಕಾರು, 10 ಬಸ್, 100 ಟ್ಯಾಕ್ಸಿ, ಬೈಕ್ ಮತ್ತು ಸಿಬ್ಬಂದಿಗಳ ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಮಾನ ನಿಲ್ದಾಣವಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವಾಗಿದ್ದು, ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವೂ ಆಗಿದೆ. ದೇಶದ ವಿವಿಧ ನಗರಗಳಿಂದ ಅವಳಿ ನಗರಕ್ಕೆ ಸಂಪರ್ಕ ಕಲ್ಪಿಸುವಲ್ಲಿ ವಿಮಾನ ನಿಲ್ದಾಣ ಪ್ರಮುಖ ಪಾತ್ರ ವಹಿಸುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ 30,308 ಪ್ರಯಾಣಿಕರ ಭೇಟಿ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳಿಗೆ ಹೋಲಿಕೆ ಮಾಡಿದರೆ ಅಕ್ಟೋಬರ್‌ನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 15.16ರಷ್ಟು ಏರಿಕೆ ಕಂಡುಬಂದಿದೆ.

ವಿಮಾನ ನಿಲ್ದಾಣಕ್ಕೆ ಅಕ್ಟೋಬರ್‌ನಲ್ಲಿ 486 ವಿಮಾನಗಳು ಬಂದಿವೆ. ಸೆಪ್ಟೆಂಬರ್‌ನಲ್ಲಿ 398 ವಿಮಾನಗಳು ಆಗಮಿಸಿದ್ದವು. ಅಕ್ಟೋಬರ್‌ನಲ್ಲಿ ವಿಮಾನ ನಿಲ್ದಾಣ 19 ಮೆಟ್ರಿಕ್ ಟನ್ ಕಾರ್ಗೋ ವಿಲೇವಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಕೇವಲ 8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿತ್ತು.

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಕಟ್ಟಡ ವಿಸ್ತರಣೆ, ರನ್‌ ವೇ ವಿಸ್ತಿರ್ಣ ಹೆಚ್ಚಳ, ಕಾರ್ಗೋ ಸೇವೆ ಮುಂತಾದವುಗಳ ಕುರಿತು ಕೇಂದ್ರ ವಿಮಾನಯಾನ ಸಚಿವರಿಗೆ ಪತ್ರವನ್ನು ಬರೆದು ಗಮನ ಸೆಳೆಯಲಾಗಿತ್ತು. ಎಲ್ಲಾ ಕಾರ್ಯಸಾಧ್ಯತೆಯನ್ನು ಪರಿಶೀಲಿಸಿ ಟರ್ಮಿನಲ್ ಕಟ್ಟಡವನ್ನು ವಿಸ್ತರಣೆ ಮಾಡಲು ಒಪ್ಪಿಗೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+