ಅಪ್ರಾಪ್ತ ಬಾಲಕಿಯ ಕೊಲೆ ಆರೋಪಿಯ ಎನ್‌ಕೌಂಟರ್‌: ಕೇಸ್‌ ಮೇಲೆ NHRC ನೋಟಿಸ್‌

ಹುಬ್ಬಳ್ಳಿ, ಏಪ್ರಿಲ್‌ 30: ಹುಬ್ಬಳ್ಳಿ ನಗರದ ಬಡಾವಣೆವೊಂದರ ಐದು ವರ್ಷದ ಬಾಲಕಿಯ ಕಿಡ್ನಾಪ್‌, ರೇಪ್‌ ಮತ್ತು ಮರ್ಡರ್‌ ಮಾಡಿದ್ದ ಪ್ರಕರಣ ಹಾಗೂ ಆ ಬಳಿಕ ಪೊಲೀಸರು ಮಾಡಿದ್ದ ಆರೋಪಿಯ ಎನ್‌ಕೌಂಟರ್‌ ಕೇಸ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟಿಸ್‌ ಜಾರಿ ಮಾಡಿದೆ.

ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಂಧಿತ ಆರೋಪಿಯ ಸಾವು ಮತ್ತು ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮಾಧ್ಯಮ ವರದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

NHRC Issues Notice on Hubballi Child Murder Case Involving Police Encounter

ಆಯೋಗವು ನಾಲ್ಕು ವಾರಗಳಲ್ಲಿ ವಿವರವಾದ ವರದಿಗಳನ್ನು ಕೇಳಿದೆ. ಘಟನೆಯ ಬಗ್ಗೆ ಮಾಧ್ಯಮ ವರದಿಗಳನ್ನು ಆಧರಿಸಿ ಎನ್‌ಎಚ್‌ಆರ್‌ಸಿ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ. ಮಾಧ್ಯಮಗಳಲ್ಲಿ ವರದಿ ಆಗಿರುವಂತೆ ಏಪ್ರಿಲ್‌ 14ರಂದು ಈ ಪ್ರಕರಣ ನಡೆದಿತ್ತು.

ವರದಿಯ ವಿಷಯಗಳು ನಿಜವಾಗಿದ್ದರೆ, ಸಂತ್ರಸ್ಥ ಅಪ್ರಾಪ್ತ ಬಾಲಕಿ ಮತ್ತು ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಶಂಕಿತ ಅಪರಾಧಿಯ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯನ್ನು ಎತ್ತಿ ತೋರಿಸುತ್ತವೆ ಎಂದು ಆಯೋಗವು ಗಮನಿಸಿದೆ. ಆದ್ದರಿಂದ, ಆಯೋಗವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಸೂಚಿಸಿದೆ. ವರದಿಯು ಮೃತರಿಬ್ಬರ ಮರಣೋತ್ತರ ಪರೀಕ್ಷೆ ಮತ್ತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಗಳನ್ನು ಒಳಗೊಂಡಿರಬೇಕು ಎಂದು ತಿಳಿಸಿದೆ.

2025 ಏಪ್ರಿಲ್ 14 ರಂದು ಪ್ರಕಟವಾದ ಮಾಧ್ಯಮ ವರದಿಯ ಪ್ರಕಾರ, ಬಾಲಕಿಯ ಶವ ಸ್ನಾನಗೃಹವೊಂದರಲ್ಲಿ ಪತ್ತೆಯಾಗುತ್ತಿದ್ದಂತೆ, ಕೋಪಗೊಂಡ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಹೊರಗೆ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ಯುತ್ತಿದ್ದಾಗ ಆತನ ಮೇಲೆ ದಾಳಿ ಮಾಡಲು ಯತ್ನಿಸಿದಾಗ ಗುಂಡೇಟಿನಿಂದ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ ಏನು?

ಕಳೆದ ಏಪ್ರಿಲ್ 13ರಂದು ಹುಬ್ಬಳ್ಳಿಯ ವಿಜಯನಗರ ಬಡಾವಣೆಯಲ್ಲಿ ಮನೆಯ ಕಂಪೌಂಡ್‌ನಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ರಿತೇಶ್ ಕುಮಾರ್ ಪುಸಲಾಯಿಸಿ ಕರೆದುಕೊಂಡು ಹೋಗಿದ್ದ. ನಂತರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಸ್ಥಳ ಮಹಜರಿಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ರಿತೇಶ್ ಕುಮಾರ್ ಮೇಲೆ ಅಶೋಕ ನಗರ ಠಾಣೆಯ ಪಿಎಸ್ಐ ಅನ್ನಪೂರ್ಣ ಅವರು ಗುಂಡು ಹಾರಿಸಿದ್ದರು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು.

ರಿತೇಶ್‌ ಕುಮಾರ್‌ ಶವಸಂಸ್ಕಾರಕ್ಕೆ ಒಪ್ಪಿಗೆ

ಎನ್‌ಕೌಂಟರ್‌ಗೆ ಬಲಿಯಾಗಿದ್ದ ರಿತೇಶ್‌ ಕುಮಾರ್‌ ಅವರ ಕುಟುಂಬವನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಿಹಾರದಲ್ಲಿ ಅವರ ಕುಟುಂಬವನ್ನು ಪತ್ತೆಹಚ್ಚುವ ಪ್ರಯತ್ನ ಫಲಿತಾಂಶ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದ ಬೆನ್ನಲ್ಲಿಯೇ, ಆರೋಪಿಯ ಶವವನ್ನು ವಿಲೇವಾರಿ ಮಾಡಲು ಕರ್ನಾಟಕದ ಹುಬ್ಬಳ್ಳಿಯ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಆರೋಪಿಯ ಶವದ ಕುರಿತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಈ ಹಿಂದೆ ನಿರ್ದೇಶನಗಳನ್ನು ನೀಡಿತ್ತು ಮತ್ತು ದೇಹದ ಅಂಗಗಳ ಮಾದರಿಗಳನ್ನು ಸಂರಕ್ಷಿಸುವಂತೆಯೂ ಸೂಚಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+