ಮೀಸಲಾತಿಯಲ್ಲಿ ಗೊಂದಲವಿಲ್ಲ, ಮಹದಾಯಿ ಕಾಮಗಾರಿ ಆರಂಭದ ಬಗ್ಗೆ ಬಸವರಾಜ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ, ಜನವರಿ, 01: ಮೀಸಲಾತಿ ವಿಚಾರದಲ್ಲಿ ಯಾವುದೇ ಕಾನೂನು ಗೊಂದಲವಿಲ್ಲ. ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರದ ಬಗ್ಗೆ ಅನಗತ್ಯವಾಗಿ ಗೊಂದಲ ಬೇಡ. ಮೀಸಲಾತಿ ವಿಚಾರದಲ್ಲಿ ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು‌ ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನೂ ಇದರಲ್ಲಿ ನಮ್ಮ ಸರ್ಕಾರದ ಉದ್ದೇಶವನ್ನು ಹೇಳಿದ್ದೇವೆ. ಇದು ನಮ್ಮ ಅಚಲ ನಿರ್ಧಾರ ಸಹ ಆಗಿದೆ. ಅಂತಿಮ ವರದಿಯಲ್ಲಿ ಅಂಕಿ-ಅಂಶಗಳ ಮಾಹಿತಿಯನ್ನು ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ
ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಯಾರಿಗೂ ಅನ್ಯಾಯ ಮಾಡುವುದಿಲ್ಲ

ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು, ಆದ್ದರಿಂದ ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯಿಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

No confusion in reservation: Basavaraj Bommai Clarification in Hubballi

ಗೊಂದಲಗಳನ್ನು ಸೃಷ್ಟಿ ಮಾಡಬಾರದು

ಮಹದಾಯಿ ವಿಚಾರದಲ್ಲಿ ಪ್ರತಿಪಕ್ಷ ಗಳಿಂದ ಅನಗತ್ಯ ಗೊಂದಲಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಮಹದಾಯಿ ಯೋಜನೆ ವಿಚಾರದಲ್ಲಿ ಡಿಪಿಆರ್ ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಇದರ ಬಗ್ಗೆ ಅನುಮಾನ ಬೇಡ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆಯೋ ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ದೇವೆ. ಅವರು ಕೂಡ ಹೋರಾಟ ಮಾಡಿದರು. ಆದರೆ ಈಗ ಆ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20- 25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದ್ದು, ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿಯನ್ನು ಸೂಚಿಸುತ್ತದೆ ಎಂದು ಹೇಳಿದರು. ಆದರೆ ನಾವು ಪ್ರತಿಕ್ಷಗಳ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕಡೆಸಿಕೊಳ್ಳುವುದಿಲ್ಲ. ನಮ್ಮ ಸರ್ಕಾರದ ಅಚಲ ನಿರ್ಧಾರ. ಡಿಪಿಆರ್ ಆಗಿದೆ - ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+